ಧ್ರುವ ಸರ್ಜಾ- ಪ್ರೇಮ್ ಸಿನಿಮಾಗೆ ‘ಕೆಡಿ​’ ಟೈಟಲ್​; ಅದ್ದೂರಿಯಾಗಿ ಲಾಂಚ್ ಆಯ್ತು ಶೀರ್ಷಿಕೆ

ಟೈಟಲ್ ಟೀಸರ್​ನಲ್ಲಿ ಧ್ರುವ ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.ಈ ಮೂಲಕ ನಿರೀಕ್ಷೆ ದುಪ್ಪಟ್ಟಾಗಿದೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾನ ನಿರ್ಮಾಣ ಮಾಡುತ್ತಿದೆ.

ಧ್ರುವ ಸರ್ಜಾ- ಪ್ರೇಮ್ ಸಿನಿಮಾಗೆ ‘ಕೆಡಿ​’ ಟೈಟಲ್​; ಅದ್ದೂರಿಯಾಗಿ ಲಾಂಚ್ ಆಯ್ತು ಶೀರ್ಷಿಕೆ
ಧ್ರುವ
Updated By: ರಾಜೇಶ್ ದುಗ್ಗುಮನೆ

Updated on: Oct 20, 2022 | 6:18 PM

ನಿರ್ದೇಶಕ ಪ್ರೇಮ್ (Prem) ಅವರು ಸಿನಿಮಾ ಮಾಡುತ್ತಾರೆ ಎಂದರೆ ಸದ್ದು ಜೋರಾಗಿರುತ್ತದೆ. ಈ ಬಾರಿ ಈ ಸದ್ದು ಸಾಕಷ್ಟು ದೊಡ್ಡ ಮಟ್ಟದಲ್ಲಿದೆ. ಧ್ರುವ ಸರ್ಜಾ ಜತೆ ಅವರು ಸಿನಿಮಾ ಮಾಡುತ್ತಿದ್ದಾರೆ ಎಂಬುದು ಒಂದು ಕಡೆಯಾದರೆ, ಸಂಜಯ್ ದತ್ ಮೊದಲಾದ ಪರಭಾಷೆಯ ಸ್ಟಾರ್​ಗಳು ಆಗಮಿಸಿ ಈ ಚಿತ್ರದ ಟೈಟಲ್ ಲಾಂಚ್ ಮಾಡಿದ್ದಾರೆ ಅನ್ನೋದು ಮತ್ತೊಂದು ಕಡೆ. ಈ ಚಿತ್ರದ ಶೀರ್ಷಿಕೆ ಇಂದು (ಅಕ್ಟೋಬರ್ 20) ಅನಾವರಣಗೊಂಡಿದೆ. ‘ಕೆಡಿ’​ (KD Movie)ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ. ‘ದಿ ಡೆವಿಲ್’ ಎಂಬ ಅಡಿ ಬರಹ ಇದೆ. ಶೀರ್ಷಿಕೆ ಮೂಲಕವೇ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.

ನಿರ್ದೇಶಕ ಪ್ರೇಮ್ ಅವರು ಸ್ಯಾಂಡಲ್​ವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ನಿರ್ದೇಶನದ ‘ಜೋಗಿ’ ಚಿತ್ರವನ್ನು ಸಿನಿಪ್ರಿಯರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅವರ ಅಭಿಮಾನಿ ಬಳಗ ದೊಡ್ಡದು. ಇನ್ನು, ಧ್ರುವ ಸರ್ಜಾ ಸ್ಯಾಂಡಲ್​ವುಡ್​ನ ಬೇಡಿಕೆಯ ನಟ. ಅವರು ‘ಅದ್ದೂರಿ’, ‘ಭರ್ಜರಿ’ ಮೊದಲಾದ ಚಿತ್ರಗಳ ಮೂಲಕ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಈಗ ಇವರಿಬ್ಬರೂ ಒಂದಾಗಿದ್ದಾರೆ. ಇಂದು ಟೈಟಲ್ ಲಾಂಚ್ ಮಾಡುವ ಮೂಲಕ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಲಾಗಿದೆ.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಈ ಮೊದಲು ರಿಲೀಸ್ ಆಗಿದ್ದ ಪೋಸ್ಟರ್​ನಲ್ಲಿ ಆ ವಿಚಾರ ರಿವೀಲ್ ಆಗಿತ್ತು. ಈಗ ಟೈಟಲ್ ಟೀಸರ್​ನಲ್ಲಿ ಧ್ರುವ ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.ಈ ಮೂಲಕ ನಿರೀಕ್ಷೆ ದುಪ್ಪಟ್ಟಾಗಿದೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾನ ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಈ ಟೀಸರ್ ಕೇವಲ 15 ನಿಮಿಷದಲ್ಲಿ 40 ಲಕ್ಷ ಬಾರಿ ವೀಕ್ಷಣೆ ಕಂಡಿದೆ.

ಇದನ್ನೂ ಓದಿ: ಧ್ರುವ ಸರ್ಜಾ-ಪ್ರೇಮ್​ ಸಿನಿಮಾ ಟೈಟಲ್ ಟೀಸರ್ ಲಾಂಚ್ ಕಾರ್ಯಕ್ರಮ ಲೈವ್ ನೋಡಿ

ಧ್ರುವ ಸರ್ಜಾ ‘ಮಾರ್ಟಿನ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಮಾರ್ಟಿನ್’ ಚಿತ್ರಕ್ಕೆ ಎ.ಪಿ. ಅರ್ಜುನ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ನಟನೆಯ ಮೊದಲ ಸಿನಿಮಾ ‘ಅದ್ದೂರಿ’ಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು ಈಗ ಮತ್ತೊಮ್ಮೆ ಧ್ರುವ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ, ರಿಲೀಸ್ ದಿನಾಂಕ ವಿಳಂಬ ಆಗಿದೆ.

Published On - 6:17 pm, Thu, 20 October 22