Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja and Prerana: ಸರ್ಜಾ ಕುಟುಂಬಕ್ಕೆ ಹೊಸ ಕುಡಿ ಆಗಮನ: ಸಿಹಿ ಸುದ್ದಿ ಹಂಚಿಕೊಂಡ ಧ್ರುವ ಸರ್ಜಾ

Dhruva Sarja and Prerana: ಸದ್ಯ ಮಾರ್ಟಿನ್ ಚಿತ್ರದಲ್ಲಿ ತೊಡಗಿಸಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್, ಶೀಘ್ರದಲ್ಲೇ ಜೋಗಿ ಪ್ರೇಮ್ ಅವರ ಮುಂದಿನ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Dhruva Sarja and Prerana: ಸರ್ಜಾ ಕುಟುಂಬಕ್ಕೆ ಹೊಸ ಕುಡಿ ಆಗಮನ: ಸಿಹಿ ಸುದ್ದಿ ಹಂಚಿಕೊಂಡ ಧ್ರುವ ಸರ್ಜಾ
Dhruva Sarja-Prerana
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 02, 2022 | 11:35 AM

ಸ್ಯಾಂಡಲ್​ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ತಂದೆಯಾಗಿದ್ದಾರೆ. ಬೆಂಗಳೂರಿನ ಬನಶಂಕರಿ ಅಕ್ಷ ಆಸ್ಪತ್ರೆಯಲ್ಲಿ ಅವರ ಪತ್ನಿ ಪ್ರೇರಣಾ (Prerana) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿರುವ ಧ್ರುವ ಸರ್ಜಾ, ತಾಯಿ ಮಗು ಆರೋಗ್ಯವಾಗಿದ್ದಾರೆ. ಪತ್ನಿಗೆ ನಾರ್ಮಲ್ ಡೆಲಿವರಿ ಆಗಿದೆ ಎಂದು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಶನಿವಾರ ಸಂಜೆ ಪ್ರೇರಣಾ ಅವರನ್ನು ಕೆಆರ್​ ರಸ್ತೆಯಲ್ಲಿರುವ ಅಕ್ಷ ಆಸ್ಪ್ರತೆಗೆ ದಾಖಲಿಸಲಾಗಿತ್ತು. ಹೀಗಾಗಿ ಧ್ರುವ ಸರ್ಜಾ ಎಲ್ಲಾ ಕಾರ್ಯಕ್ರಮಗಳನ್ನು ಬದಿಗಿಟ್ಟು ಆಸ್ಪತ್ರೆಗೆ ಆಗಮಿಸಿದ್ದರು. ಇದೀಗ ಕುಟುಂಬಕ್ಕೆ ಹೊಸ ಕುಡಿ ಆಗಮನದ ಸುದ್ದಿ ಬೆನ್ನಲ್ಲೇ ಸರ್ಜಾ ಕುಟುಂಬಸ್ಥರು ಆಸ್ಪತ್ರೆಯತ್ತ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
View this post on Instagram

A post shared by Dhruva Sarja (@dhruva_sarjaa)

2019 ರಲ್ಲಿ ಧ್ರುವ ಸರ್ಜಾ ಬಾಲ್ಯದ ಗೆಳೆತಿ ಪ್ರೇರಣಾರನ್ನು ವಿವಾಹವಾಗಿದ್ದರು. ಈ ಶುಭ ಸಮಾರಂಭದ ಬೆನ್ನಲ್ಲೇ, ಅಂದರೆ 2020 ರಲ್ಲಿ ಸರ್ಜಾ ಕುಟುಂಬದಿಂದ ಚಿರಂಜೀವಿ ಸರ್ಜಾ ಅಗಲಿದ್ದರು. ಇದಾದ ಬಳಿಕ ಸರ್ಜಾ ಕುಟುಂಬದಲ್ಲಿ ಯಾವುದೇ ಮಹತ್ವದ ಶುಭ ಸಮಾರಂಭ ನಡೆದಿರಲಿಲ್ಲ. ಇದೀಗ ಧ್ರುವ ಸರ್ಜಾ ದಂಪತಿಗಳ ಮೂಲಕ ಮತ್ತೊಮ್ಮೆ ಕುಟುಂಬದಲ್ಲಿ ಸಂತಸ ಮನೆ ಮಾಡಿರುವುದು ವಿಶೇಷ.

ಸದ್ಯ ಮಾರ್ಟಿನ್ ಚಿತ್ರದಲ್ಲಿ ತೊಡಗಿಸಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್, ಶೀಘ್ರದಲ್ಲೇ ಜೋಗಿ ಪ್ರೇಮ್ ಅವರ ಮುಂದಿನ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Published On - 11:35 am, Sun, 2 October 22

ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ