HBD Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ-ಪ್ರೇರಣಾ ವಿಶ್​; ಚಿರು ಪುತ್ರನಿಗೆ ಶುಭಾಶಯಗಳ ಸುರಿಮಳೆ

Raayan Raj Sarja Birthday: ಜೆಪಿ ನಗರದಲ್ಲಿರುವ ಮೇಘನಾ ರಾಜ್​ ಮನೆಯಲ್ಲಿಯೇ ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬ ಆಚರಿಸಲಾಗಿದೆ. ಧ್ರುವ ಸರ್ಜಾ ಅವರು ಅಣ್ಣನ ಮಗನ ಜನ್ಮದಿನದ ಪ್ರಯುಕ್ತ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

HBD Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ-ಪ್ರೇರಣಾ ವಿಶ್​; ಚಿರು ಪುತ್ರನಿಗೆ ಶುಭಾಶಯಗಳ ಸುರಿಮಳೆ
ರಾಯನ್​ ರಾಜ್​ ಸರ್ಜಾ ಜನ್ಮದಿನ ಸಂಭ್ರಮ
Follow us
TV9 Web
| Updated By: ಮದನ್​ ಕುಮಾರ್​

Updated on:Oct 22, 2021 | 12:01 PM

ಚಿರಂಜೀವಿ ಸರ್ಜಾ (Chiranjeevi Sarja) ಮತ್ತು ಮೇಘನಾ ರಾಜ್​ (Meghana Raj) ಪುತ್ರ ರಾಯನ್​ ರಾಜ್​ ಸರ್ಜಾಗೆ (Raayan Raj Sarja) ಇಂದು (ಅ.22) ಜನ್ಮದಿನದ ಸಂಭ್ರಮ. ಸ್ಟಾರ್​ ಕಿಡ್​​ ಹುಟ್ಟುಹಬ್ಬಕ್ಕೆ ಎಲ್ಲೆಡೆಯಿಂದ ಶುಭಾಶಯ ಹರಿದುಬರುತ್ತಿದೆ. ಜ್ಯೂ. ಚಿರು ರೂಪದಲ್ಲಿ ಚಿರಂಜೀವಿಯನ್ನು ಕಾಣುತ್ತಿದೆ ಅವರ ಇಡೀ ಕುಟುಂಬ. ಆ ಕಾರಣಕ್ಕಾಗಿ ರಾಯನ್​ ಬಗ್ಗೆ ಚಿರಂಜೀವಿ ಸರ್ಜಾ ಅಭಿಮಾನಿಗಳಿಗೆ ಕೂಡ ಎಲ್ಲಿಲ್ಲದ ಪ್ರೀತಿ. ಇಂದು ಒಂದು ವರ್ಷ ಪೂರೈಸಿರುವ ರಾಯನ್​ ರಾಜ್​ ಸರ್ಜಾಗೆ ಧ್ರುವ ಸರ್ಜಾ (Dhruva Sarja) ಮತ್ತು ಅವರ ಪತ್ನಿ ಪ್ರೇರಣಾ ಕೂಡ ವಿಶ್​ ಮಾಡಿದ್ದಾರೆ.

ಜೆಪಿ ನಗರದಲ್ಲಿರುವ ಮೇಘನಾ ರಾಜ್​ ಮನೆಯಲ್ಲಿಯೇ ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬ ಆಚರಿಸಲಾಗಿದೆ. ಧ್ರುವ ಸರ್ಜಾ ಅವರು ಅಣ್ಣನ ಮಗನ ಜನ್ಮದಿನದ ಪ್ರಯುಕ್ತ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ತೊಟ್ಟಿಲಲ್ಲಿ ಮಲಗಿದ ಜ್ಯೂ. ಚಿರುನನ್ನು ಧ್ರುವ ಮತ್ತು ಪ್ರೇರಣಾ ಮುದ್ದಿಸುತ್ತಿರುವ ಮಧುರ ಕ್ಷಣ ಈ ಫೋಟೋದಲ್ಲಿ ಸೆರೆಯಾಗಿದೆ.

ಮಗನ ಜನ್ಮ ದಿನವನ್ನು ಮೇಘನಾ ರಾಜ್​ ಅವರು ಸಂಭ್ರಮದಿಂದ ಆಚರಿಸಿದ್ದಾರೆ. ‘ನಮ್ಮ ಮಗು, ನಮ್ಮ ಪ್ರಪಂಚ, ನಮ್ಮ ಜಗತ್ತು, ನಮ್ಮ ಸರ್ವಸ್ವ! ಚಿರು.. ನಮ್ಮ ಪುಟಾಣಿ ರಾಜಕುಮಾರನಿಗೆ ಈಗ ಒಂದು ವರ್ಷ’ ಎಂಬ ಕ್ಯಾಪ್ಷನ್​ನೊಂದಿಗೆ ಮಗನ ಹುಟ್ಟುಹಬ್ಬದ ಸಂದೇಶವನ್ನು ಚಿರು ಜೊತೆ ಮೇಘನಾ ಹಂಚಿಕೊಂಡಿದ್ದಾರೆ. ಪನ್ನಗ ಭರಣ, ಕೃಷಿ ತಾಪಂಡ, ಅದ್ವಿತಿ ಶೆಟ್ಟಿ, ಸೋನು ಗೌಡ, ಆಶಿತಾ ಚಂದ್ರಪ್ಪ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಪೋಸ್ಟ್​ಗೆ ಕಮೆಂಟ್​ ಮಾಡುವ ಮೂಲಕ ಚಿರು ಪುತ್ರನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ

ಅಕ್ಟೋಬರ್​ ತಿಂಗಳು ಸರ್ಜಾ ಫ್ಯಾಮಿಲಿಗೆ ಸಖತ್​ ವಿಶೇಷ. ಯಾಕೆಂದರೆ, ಚಿರಂಜೀವಿ ಸರ್ಜಾ ಜನ್ಮದಿನ ಕೂಡ ಅ.17ರಂದು. ಚಿರು ಇಲ್ಲದೇ ಎರಡನೇ ವರ್ಷದ ಹುಟ್ಟುಹಬ್ಬವನ್ನು ಅ.17ರಂದು ಆಚರಿಸಲಾಗಿತ್ತು. ಅದರ ವಿಡಿಯೋವನ್ನು ಹಂಚಿಕೊಂಡಿದ್ದ ಧ್ರುವ ಅವರು ಅಣ್ಣನಿಗೆ ವಿಶ್​ ಮಾಡಿದ್ದರು. ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ತೆರಳಿ ಊಟ, ಬಟ್ಟೆ ದಾನ ಮಾಡುವ ಮೂಲಕ ಚಿರು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿತ್ತು.

ಇದನ್ನೂ ಓದಿ:

Raayan Raj Sarja: ಚಿರು ಪುತ್ರ ರಾಯನ್​ ರಾಜ್​ ಸರ್ಜಾ ಜನ್ಮದಿನ: ಮೇಘನಾ ರಾಜ್​ ಮನೆಯಲ್ಲಿ ಸಂಭ್ರಮವೋ ಸಂಭ್ರಮ

Meghana Raj: 45 ವರ್ಷ ಹಳೇ ಗೊಂಬೆಗಳ ಜತೆ ರಾಯನ್​ ರಾಜ್​ ಸರ್ಜಾ; ಮೇಘನಾ ರಾಜ್-ಚಿರು ಪುತ್ರನಿಗೆ ಮೊದಲ ದಸರಾ

Published On - 12:00 pm, Fri, 22 October 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ