Dhruva Sarja Birthday: ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ; ಆದರೆ ಫ್ಯಾನ್ಸ್​ ಜತೆ ಇಲ್ಲ ಸೆಲೆಬ್ರೇಷನ್​

Dhruva Sarja | Martin: ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಈ ಖುಷಿಯ ನಡುವೆ ‘ಮಾರ್ಟಿನ್​’ ಚಿತ್ರದಿಂದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ.

Dhruva Sarja Birthday: ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ; ಆದರೆ ಫ್ಯಾನ್ಸ್​ ಜತೆ ಇಲ್ಲ ಸೆಲೆಬ್ರೇಷನ್​
ಧ್ರುವ ಸರ್ಜಾ
Follow us
TV9 Web
| Updated By: ಮದನ್​ ಕುಮಾರ್​

Updated on:Oct 06, 2022 | 9:52 AM

ಚಂದನವನದ ಖ್ಯಾತ ನಟ ಧ್ರುವ ಸರ್ಜಾ (Dhruva Sarja) ಅವರಿಗೆ ಇಂದು (ಅ.6) ಜನ್ಮದಿನದ ಸಂಭ್ರಮ. ಈ ವರ್ಷದ ಬರ್ತ್​ಡೇ ಅವರಿಗೆ ತುಂಬ ಸ್ಪೆಷಲ್​. ಇತ್ತೀಚೆಗಷ್ಟೇ ಧ್ರುವ ಪತ್ನಿ ಪ್ರೇರಣಾ ಶಂಕರ್​ (Prerana Shankar) ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆ ಖುಷಿಯ ಬೆನ್ನಲ್ಲೇ ಧ್ರುವ ಸರ್ಜಾ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು, ಆಪ್ತರು, ಸ್ನೇಹಿತರು ಹಾಗೂ ಅನೇಕ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಪ್ರತಿ ವರ್ಷ ಧ್ರುವ ಸರ್ಜಾ ಅವರು ಅಭಿಮಾನಿಗಳ ಜೊತೆ ಬರ್ತ್​ಡೇ (Dhruva Sarja Birthday) ಆಚರಣೆ ಮಾಡಿಕೊಳ್ಳುತ್ತಾರೆ. ಆದರೆ ಈ ಬಾರಿ ಅದಕ್ಕೆ ಬ್ರೇಕ್​ ಹಾಕಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ.

ನವಜಾತ ಶಿಶುವಿನ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಧ್ರುವ ಸರ್ಜಾ ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ. ಪತ್ನಿ ಮತ್ತು ಮಗು ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಿದೆ. ಧ್ರುವ ಕೂಡ ಆಸ್ಪತ್ರೆಗೆ ಹೋಗಿ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಬೆರೆಯುವುದು ಸೂಕ್ತವಲ್ಲ ಎಂದು ನಿರ್ಧರಿಸಿ ಅವರು ಅಭಿಮಾನಿಗಳ ಜೊತೆ ಬರ್ತ್​ಡೇ ಸೆಲೆಬ್ರೇಟ್​ ಮಾಡಿಕೊಳ್ಳುತ್ತಿಲ್ಲ.

ಇದನ್ನೂ ಓದಿ
Image
Dhruva Sarja: ಅಪ್ಪನಾದ ಖುಷಿಯಲ್ಲಿ ಆಸ್ಪತ್ರೆ ಎದುರು ಅಭಿಮಾನಿಗಳ ಜತೆ ಸೆಲ್ಫಿಗೆ ಪೋಸ್​ ಕೊಟ್ಟ ಧ್ರುವ ಸರ್ಜಾ
Image
ಧ್ರುವ ಸರ್ಜಾ-ಪ್ರೇರಣಾಗೆ ಹೆಣ್ಣು ಮಗು; ರಾಯನ್​ ಜತೆ ಬಂದು ಪ್ರತಿಕ್ರಿಯೆ ನೀಡಿದ ಮೇಘನಾ ರಾಜ್​
Image
Dhruva Sarja: ‘ಹೆಣ್ಮಕ್ಕಳ ಮೇಲೆ ಗೌರವ ಜಾಸ್ತಿ ಆಗಿದೆ’; ಮಗಳು ಜನಿಸಿದ ಬಳಿಕ ಧ್ರುವ ಸರ್ಜಾ ಫಸ್ಟ್​ ರಿಯಾಕ್ಷನ್
Image
Dhruva Sarja: ನಾ ಅಣ್ಣನನ್ನು ತುಂಬಾ ಮಿಸ್ ಮಾಡ್ಕೊತ್ತಿದ್ದೀನಿ: ಖುಷಿಯ ನಡುವೆ ಧ್ರುವ ಸರ್ಜಾರ ನೋವು..!

ಕನ್ನಡ ಚಿತ್ರರಂಗದಲ್ಲಿ ಧ್ರುವ ಸರ್ಜಾ ಅವರಿಗೆ ಸಖತ್​ ಬೇಡಿಕೆ ಇದೆ. ‘ಅದ್ದೂರಿ’, ‘ಬಹದ್ದೂರ್​’, ‘ಭರ್ಜರಿ’ ಸಿನಿಮಾಗಳ ಮೂಲಕ ಹ್ಯಾಟ್ರಿಕ್​ ಗೆಲುವು ಪಡೆದ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. 2021ರಲ್ಲಿ ಧ್ರುವ ನಟನೆಯ ‘ಪೊಗರು’ ಚಿತ್ರ ತೆರೆಕಂಡಿತು. ಆ ಬಳಿಕ ಅವರು ‘ಮಾರ್ಟಿನ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

‘ಮಾರ್ಟಿನ್​’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ಎ.ಪಿ. ಅರ್ಜುನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಹೊರಬಂದಿರುವ ಟೀಸರ್​ ಮತ್ತು ಪೋಸ್ಟರ್​ ನೋಡಿದ ಅಭಿಮಾನಿಗಳ ಮನದಲ್ಲಿ ಭಾರಿ ಕೌತುಕ ಮೂಡಿದೆ. ಧ್ರುವ ಸರ್ಜಾ ಹುಟ್ಟುಹಬ್ಬದ ಪ್ರಯುಕ್ತ ‘ಮಾರ್ಟಿನ್’ ಚಿತ್ರದ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.

ಹೆಣ್ಣುಮಗು ಹುಟ್ಟಿದ ಖುಷಿಯಲ್ಲಿ ಧ್ರುವ:

ಅ.2ರಂದು ಧ್ರುವ ಪತ್ನಿ ಪ್ರೇರಣಾ ಶಂಕರ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗು ಜನಿಸಬೇಕು ಎಂಬುದು ಧ್ರುವ ಸರ್ಜಾ ಅವರ ಆಸೆ ಆಗಿತ್ತು. ಅವರ ಆಸೆ ಈಡೇರಿದೆ. ಹಾಗಾಗಿ ಇಡೀ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಈ ಸಂಭ್ರಮದ ಜೊತೆಗೆ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಧ್ರುವ

Published On - 9:52 am, Thu, 6 October 22

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ