AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ.

ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on: Apr 09, 2021 | 7:55 PM

Share

ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಕಂಡು ಸ್ಯಾಂಡಲ್​ವುಡ್​​ನಲ್ಲಿ​ ಸದ್ದು ಮಾಡಿದ್ದು ಮಾತ್ರವಲ್ಲ, 50 ಕೋಟಿ ರೂಪಾಯಿ ಕಲೆಕ್ಷನ್​ ಕೂಡ ಮಾಡಿತ್ತು. ಈಗ ಧ್ರುವ ಸರ್ಜಾ ಅವರು ಮುಂದಿನ ಸಿನಿಮಾದ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ. ಅವರ ಮುಂದಿನ ಚಿತ್ರದ ಅಪ್​ಡೇಟ್​ ತಿಳಿದುಕೊಳ್ಳೋಕೆ ಕಾತುರರಾಗಿದ್ದಾರೆ. ಧ್ರುವ ಸರ್ಜಾ ಮುಂದಿನ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಏನೋ ಸಿಕ್ಕಿದೆ. ಆದರೆ, ಫ್ಯಾನ್ಸ್​​ಗೆ ಇಲ್ಲೊಂದು ಕಹಿ ವಿಚಾರ ಇದೆ. ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ. ಆದರೆ, ಈಗ ಸಿನಿಮಾದ ಶೂಟಿಂಗ್​ ಮುಂದೂಡಲ್ಪಟ್ಟಿದೆಯಂತೆ!

ಪೊಗರು ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದ ನಂದಕಿಶೋರ್​ ದುಬಾರಿ ಸಿನಿಮಾಗೂ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಕೂಡ ಈಗಾಗಲೇ ಆರಂಭಗೊಳ್ಳಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಶೂಟಿಂಗ್​ ಮುಂದೂಡಲ್ಪಟ್ಟಿದೆಯಂತೆ. ಇದು ಅಭಿಮಾನಿಗಳಿಗೆ ಸಾಕಷ್ಟು​ ಬೇಸರ ಮೂಡಿಸಿದೆ.

ಮೂಲಗಳ ಪ್ರಕಾರ ಕೆ. ಮಂಜು ಪುತ್ರನ ಚಿತ್ರಕ್ಕೆ ನಂದಕಿಶೋರ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ನಂದಕಿಶೋರ್​ ಹೊಸ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ಹೀಗಾಗಿ, ದುಬಾರಿ ಚಿತ್ರದ ಶೂಟಿಂಗ್​ ವಿಳಂಬವಾಗಬಹುದು ಎನ್ನಲಾಗುತ್ತಿದೆ.

ಇನ್ನು, ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ನಿರ್ದೇಶನದ ಸಿನಿಮಾಗೆ ಧ್ರುವ ನಾಯಕ ಎನ್ನುವ ಮಾತು ಕೇಳಿ ಬಂದಿದೆ. ಒಂದೊಮ್ಮೆ ಇದು ಸತ್ಯವಾದರೆ, ಈ ಸಿನಿಮಾ ಪ್ಯಾನ್​ ಇಂಡಿಯಾ ಚಿತ್ರವಾಗಲಿದೆ.

ಫೆಬ್ರವರಿ ತಿಂಗಳಲ್ಲಿ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಮೊದಲ ಮೂರು ದಿನಕ್ಕೆ ಈ ಚಿತ್ರ 30 ಕೋಟಿ ರೂ. ಕಲೆಕ್ಷನ್​ ಮಾಡಿತು. 6 ದಿನಗಳಲ್ಲಿ 46 ಕೋಟಿ ರೂ. ಗಳಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಒಟ್ಟಾರೆಯಾಗಿ ಈ ಚಿತ್ರಕ್ಕೆ 50 ಕೋಟಿಗೂ ಹೆಚ್ಚು ಕಲೆಕ್ಷನ್​ ಆಗಿದೆ ಎನ್ನಲಾಗುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತೆರೆಕಂಡಿತ್ತು. ಈ ಚಿತ್ರ ತೆರೆಕಂಡಿತ್ತು. ಧ್ರುವ ಸರ್ಜಾಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದು, ಅವರ ಖಾತೆಗೆ ಮತ್ತೊಂದು ಹಿಟ್​ ಸಿನಿಮಾ ಸೇರಿಕೊಂಡಂತಾಗಿದೆ.

ಇದನ್ನೂ ಓದಿ: 50 ದಿನ ಪೂರೈಸಿದ ಪೊಗರು! ಧ್ರುವ ಸರ್ಜಾ ನಟನೆಯ ಈ ಚಿತ್ರ ಮಾಡಿದ ಕಲೆಕ್ಷನ್​ ಎಷ್ಟು?

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ