AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಕ್ಕೆ ಶೇ. 50 ನಿರ್ಬಂಧ ಏಕೆ? Housefull ಪ್ರದರ್ಶನಕ್ಕೆ ಅವಕಾಶ ನೀಡಿ: ಸಿನಿ ದಿಗ್ಗಜರಿಂದ ಆಗ್ರಹ

Sandalwood News ನಟ ಧ್ರುವಾ ಸರ್ಜಾ, ದುನಿಯಾ ವಿಜಿ, ನಿರ್ದೇಶಕ ಪ್ರಶಾಂತ್​ ನೀಲ್​, ಎ.ಪಿ.ಅರ್ಜುನ್, ಪವನ್ ಒಡೆಯರ್, ಸಿಂಪಲ್​ ಸುನಿ, ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ, ರಕ್ಷಿತ್ ಶೆಟ್ಟಿ, ಕಾರ್ತಿಕ್​ ಗೌಡ ಸೇರಿದಂತೆ ಚಿತ್ರರಂಗದ ಅನೇಕರು ದನಿಯೆತ್ತಿದ್ದಾರೆ.

ಚಿತ್ರಮಂದಿರಕ್ಕೆ ಶೇ. 50 ನಿರ್ಬಂಧ ಏಕೆ? Housefull ಪ್ರದರ್ಶನಕ್ಕೆ ಅವಕಾಶ ನೀಡಿ: ಸಿನಿ ದಿಗ್ಗಜರಿಂದ ಆಗ್ರಹ
ಚಿತ್ರಮಂದಿರಗಳಲ್ಲಿ ಶೇ.50ರಷ್ಟು ನಿರ್ಬಂಧ ವಿರೋಧಿಸಿ ಅಭಿಯಾನ
Skanda
| Updated By: ganapathi bhat|

Updated on:Feb 03, 2021 | 2:51 PM

Share

ಚಿತ್ರಮಂದಿರಕ್ಕೆ ಶೇ. 50ರಷ್ಟು ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ನಟ ಧ್ರುವಾ ಸರ್ಜಾ ಈಗಾಗಲೇ ಗರಂ ಆಗಿದ್ದಾರೆ. ಅವರೊಂದಿಗೆ ನಟ ದುನಿಯಾ ವಿಜಿ, ನಿರ್ದೇಶಕ ಪ್ರಶಾಂತ್​ ನೀಲ್​, ಎ.ಪಿ. ಅರ್ಜುನ್, ಪವನ್ ಒಡೆಯರ್, ಸಿಂಪಲ್​ ಸುನಿ, ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ, ಕಾರ್ತಿಕ್​ ಗೌಡ, ರಕ್ಷಿತ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಅನೇಕರು ದನಿಯೆತ್ತಿದ್ದು, ನಿರ್ಬಂಧ ತೆರವುಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಪ್ರೇಕ್ಷಕರಿಗೆ ಅವಕಾಶ ಕೊಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲು ಫಿಲಂ ಚೇಂಬರ್ ಸಹ ತಯಾರಾಗಿದೆ. ಈ ಕುರಿತು ಇಂದು ಫಿಲಂ ಚೇಂಬರ್​ನಲ್ಲಿ ಮಾತುಕತೆ ನಡೆಯಲಿದ್ದು ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.

ಈ ಬಗ್ಗೆ ಫಿಲಂ ಚೇಂಬರ್​ ಅಧ್ಯಕ್ಷ ಜಯರಾಜ್​ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದು, ಲಸಿಕೆ ಬಂದ ನಂತರ ಆತಂಕ ಇಲ್ಲದೆ ಜನ ಓಡಾಡುತ್ತಿದ್ದಾರೆ. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗಕ್ಕೆ ಚೇತರಿಸಿಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದೆಯಷ್ಟೇ ಅನುಮತಿ ಸೂಚಿಸಿತ್ತು. ಇದು ಚಿತ್ರರಂಗಕ್ಕೆ ಖುಷಿ ನೀಡಿತ್ತು ಕೂಡಾ. ಆದರೆ, ಫೆ.2ರಂದು ಕರ್ನಾಟಕ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿ ಫೆಬ್ರವರಿ ಅಂತ್ಯದವರೆಗೂ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂದು ಹೇಳಿರುವುದು ಕನ್ನಡ ಚಿತ್ರರಂಗಕ್ಕೆ ಶಾಕ್​ ನೀಡಿದೆ.

ಚಿತ್ರಮಂದಿರಕ್ಕೆ ಶೇ.50ರಷ್ಟು ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ, ಶಶಾಂಕ್ ಶೇಷಗಿರಿ ವಿರೋಧ ವ್ಯಕ್ತಪಡಿಸಿದ್ದಾರೆ. ಪೊಗರು ಚಿತ್ರದ ಟೈಟಲ್ ಟ್ರ್ಯಾಕ್ ಹಾಡಿರುವ ಗಾಯಕ ಚಿತ್ರಮಂದಿರದಲ್ಲಿ ಶೇಕಡಾ 100ರಷ್ಟು ಭರ್ತಿಗೆ ಆಗ್ರಹಿಸಿದ್ದಾರೆ.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ಕೇಂದ್ರ ಸರ್ಕಾರ ಚಿತ್ರ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಸೂಚಿಸಿದೆ. ನಂತರ ರಾಜ್ಯಗಳಿಗೆ ಕ್ರಮಕೈಗೊಳ್ಳಲು ಸೂಚಿಸಿದೆ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ನಾವು ನಿಯಮಾವಳಿಗಳನ್ನು ಬಿಡುಗಡೆ ಮಾಡಿದ್ದೇವೆ. ಫೆ.28 ವರೆಗೂ ಶೇ.50ರಷ್ಟು ಜನರಿಗೆ ಚಿತ್ರಮಂದಿರಗಳಲ್ಲಿ ಅವಕಾಶವಿದೆ. ಚಿತ್ರ ಮಂದಿರಗಳಲ್ಲಿ ಸೋಂಕು ಹರಡುವ ಅಪಾಯ ಹೆಚ್ಚಿದೆ. ಮನರಂಜನೆಗಿಂತ ಜನರ ಆರೋಗ್ಯ ಮುಖ್ಯ. ಹಾಗಾಗಿ, ಮತ್ತೊಮ್ಮೆ ತಾಂತ್ರಿಕ ಸಲಹ ಸಮಿತಿ ಜೊತೆ ಸಭೆ ಮಾಡುತ್ತೇನೆ. ಅವರ ಸಲಹೆ ಮೇರೆಗೆ ಅಂತಿಮ ನಿರ್ಧಾರ ಮಾಡುತ್ತೇನೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ನಾನು ಮಂತ್ರಿಯಾಗಿ ಏಕಾಏಕಿ ನಿರ್ಧಾರ ಸಾಧ್ಯವಾಗುವುದಿಲ್ಲ. ಸಿಎಂ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಮುಂದೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

Dhruva Sarja Tweet ರಾಜ್ಯ ಸರ್ಕಾರದ ವಿರುದ್ಧ ಧ್ರುವ ಸರ್ಜಾ ತೀವ್ರ ಅಸಮಾಧಾನ; ಟ್ವಿಟರ್​ನಲ್ಲಿ 3 ಪ್ರಶ್ನೆ ಮುಂದಿಟ್ಟ ನಟ

Published On - 1:30 pm, Wed, 3 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು