AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಟಿನ್’ ಅನ್ನು ಪ್ಯಾನ್ ವರ್ಲ್ಡ್ ಮಾಡುವ ಆಲೋಚನೆ ಬಂದಿದ್ದು ಯಾರಿಂದ?

ಧ್ರುವ ಸರ್ಜಾ ನಟಿಸಿ ಎಪಿ ಅರ್ಜುನ್ ನಿರ್ದೇಶನ ಮಾಡಿರುವ ‘ಮಾರ್ಟಿನ್’ ಕನ್ನಡ ಸಿನಿಮಾ ಪ್ಯಾನ್ ವರ್ಲ್ಡ್ ಲೆವೆಲ್​ನಲ್ಲಿ ಬಿಡುಗಡೆ ಆಗುತ್ತಿದೆ. ಆದರೆ ಸಿನಿಮಾವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎಂಬ ಯೋಚನೆ ಚಿತ್ರರಂಗಕ್ಕೆ ಬರಲು ಕಾರಣವೇನು?

‘ಮಾರ್ಟಿನ್’ ಅನ್ನು ಪ್ಯಾನ್ ವರ್ಲ್ಡ್ ಮಾಡುವ ಆಲೋಚನೆ ಬಂದಿದ್ದು ಯಾರಿಂದ?
ಮಂಜುನಾಥ ಸಿ.
|

Updated on: Aug 03, 2024 | 9:03 PM

Share

ಪ್ರತಿಯೊಬ್ಬರೂ ಈಗ ಪ್ಯಾನ್ ಇಂಡಿಯಾ ಸಿನಿಮಾದ ಹಿಂದೆ ಬಿದ್ದಿದ್ದಾರೆ. 20-30 ಕೋಟಿ ಬಜೆಟ್ ಸಿನಿಮಾ ಮಾಡುವವರೂ ಸಹ ಪ್ಯಾನ್ ಇಂಡಿಯಾ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. ದೊಡ್ಡ ಬಜೆಟ್ ಸಿನಿಮಾಗಳಿಗಂತೂ ಪ್ಯಾನ್ ಇಂಡಿಯಾ ಎಂಬುದು ಚಿನ್ನದ ಮೊಟ್ಟೆ ಇಡುವ ಕೋಳಿಯಂತಾಗಿದೆ. ಎಲ್ಲರೂ ಪ್ಯಾನ್ ಇಂಡಿಯಾ ಮೇಲೆ ಬಿದ್ದಿರುವ ಸಂದರ್ಭದಲ್ಲಿ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಮಾತ್ರ ಒಂದು ಹೆಜ್ಜೆ ಮುಂದೆ ಹೋಗಿ ಪ್ಯಾನ್ ವರ್ಲ್ಡ್ ಯೋಚನೆ ಮಾಡಿದೆ. ಕೆಲವೇ ದಿನಗಳಲ್ಲಿ ವಿದೇಶಿ ಮಾಧ್ಯಮಗಳನ್ನು ಒಟ್ಟು ಸೇರಿಸಿ ಅಂತರಾಷ್ಟ್ರೀಯ ಮಟ್ಟದ ಸುದ್ದಿಗೋಷ್ಠಿಯನ್ನು ಮಾಡಲಾಗಿದೆ. ಆದರೆ ‘ಮಾರ್ಟಿನ್’ ಅನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂಬ ಆಲೋಚನೆ ಹುಟ್ಟಿದ್ದು ಏಕೆ ಮತ್ತು ಅದಕ್ಕೆ ಕಾರಣ ಯಾರು?

ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಧ್ರುವ ಸರ್ಜಾ, ‘ನಾವು ಟೀಸರ್ ಬಿಡುಗಡೆ ಮಾಡಿದಾಗ ಚೀನಾದ ಏಜೆನ್ಸಿಯವರೊಬ್ಬರು ನಮ್ಮನ್ನು ಸಂಪರ್ಕ ಮಾಡಿದ್ದರು. ಈ ಸಿನಿಮಾ ನಮಗೆ ಕೊಡಿ ಸಿನಿಮಾವನ್ನು ನಾವು ಚೈನೀಸ್ ಭಾಷೆಗೆ ಡಬ್ ಮಾಡಿ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಆಗ ನಾವು ಸರಿ ನೋಡೋಣ ಇನ್ನೂ ಸಮಯ ಇದೆ ಎಂದುಕೊಂಡಿದ್ದೆವು’ ಎಂದಿದ್ದಾರೆ ಧ್ರುವ ಸರ್ಜಾ.

ಇದನ್ನೂ ಓದಿ:ಮುಂಬೈನಲ್ಲಿ ‘ಮಾರ್ಟಿನ್’ ಟ್ರೇಲರ್ ಲಾಂಚ್; ಇದು ಸಾಮಾನ್ಯ ಕಾರ್ಯಕ್ರಮ ಅಲ್ಲ

ಆದರೆ ಮುಂದೆ ನಮ್ಮ ಟೀಂಗೆ ರವಿ ಬಸ್ರೂರು ಸೇರ್ಪಡೆ ಆದರು. ಅವರು ಸಿನಿಮಾ ನೋಡಿ, ‘ಏನ್ರಿ ಇದು ಇಂಟರ್ನ್ಯಾಷನಲ್ ಲೆವೆಲ್ ಅಲ್ಲಿದೆ ಸಿನಿಮಾ’ ಅಂದರು. ಅದು ನಮ್ಮ ಮನಸ್ಸಿನಲ್ಲಿ ಸೇರಿಕೊಂಡಿತು. ಹಾಗೆಯೇ ಮುಂದೆ ಹೋದಂತೆ ಸಿನಿಮಾದ ಡಬ್ಬಿಂಗ್ ರೈಟ್ಸ್​ಗೆ ಬೇಡಿಕೆ ಹೆಚ್ಚಾಗುತ್ತಾ ಆಗುತ್ತಾ ನಾವೇ ಏಕೆ ಇದನ್ನು ಪ್ಯಾನ್ ವರ್ಲ್ಡ್​ ಲೆವೆಲ್​ನಲ್ಲಿ ಬಿಡುಗಡೆ ಮಾಡಬಾರದು ಎಂಬ ಆಲೋಚನೆ ಮೂಡಿತು, ನಮ್ಮ ನಿರ್ಮಾಪಕರು ಡಬ್ಬಿಂಗ್​ಗೆ ವ್ಯವಸ್ಥೆ ಮಾಡಿಸಿದರು. ಆ ಕೆಲಸ ಬಹಳ ಬೇಗ ಮುಗಿದುಬಿಟ್ಟಿತು’ ಎಂದಿದ್ದಾರೆ ಧ್ರುವ.

ನಮ್ಮ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಜೊತೆಗೆ ಬೆಂಗಾಲಿಯಲ್ಲಿಯೂ ಬಿಡುಗಡೆ ಆಗಲಿದೆ. ಇದರ ಜೊತೆಗೆ ಚೀನಾ, ರಷಿಯನ್, ಇಂಗ್ಲೀಷ್, ಕೊರಿಯನ್ ಭಾಷೆಗಳಿಗೂ ಡಬ್ ಮಾಡಿ ಬಿಡುಗಡೆ ಮಾಡಲಿದ್ದೇವೆ. ಆಗಸ್ಟ್ 5 ರಂದು ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಬಿಬಿಸಿ ಪತ್ರಕರ್ತರು, ಕೊರಿಯನ್ನರು, ಚೈನೀಸ್, ಇನ್ನೂ ಒಟ್ಟು 25 ಅಂತರಾಷ್ಟ್ರೀಯ ಮಾಧ್ಯಮದ ಪತ್ರಕರ್ತರು ಭಾಗವಹಿಸಲಿದ್ದಾರೆ. ಅದೇ ದಿನ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಲಿದೆ. ಇನ್ನು ಮಾರ್ಟಿನ್ ಸಿನಿಮಾ ಅಕ್ಟೋಬರ್ 11 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ