AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಕೋಟಿ ವಂಚನೆ ಪ್ರಕರಣ: ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್

Dhruva Sarja: ಕನ್ನಡದ ಜನಪ್ರಿಯ ಧ್ರುವ ಸರ್ಜಾ ವಿರುದ್ಧ ‘ಜಗ್ಗುದಾದ’ ಸಿನಿಮಾದ ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವರು 3.28 ಲಕ್ಷ ರೂಪಾಯಿ ವಂಚನೆ ಪ್ರಕರಣ ದಾಖಲು ಮಾಡಿದ್ದರು. ದೂರಿನ ಅನ್ವಯ ಮುಂಬೈನಲ್ಲಿ ಧ್ರುವ ಸರ್ಜಾ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಇದೀಗ ಬಾಂಬೆ ಹೈಕೋರ್ಟ್, ಈ ಪ್ರಕರಣದಲ್ಲಿ ಧ್ರುವ ಸರ್ಜಾ ಅವರಿಗೆ ರಿಲೀಫ್ ದೊರೆತಿದೆ. ಅಷ್ಟಕ್ಕೂ ಏನಿದು ಪ್ರಕರಣ? ಇಲ್ಲಿದೆ ಮಾಹಿತಿ...

3 ಕೋಟಿ ವಂಚನೆ ಪ್ರಕರಣ: ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್
Dhruva Sarja
ಮಂಜುನಾಥ ಸಿ.
|

Updated on: Sep 10, 2025 | 1:40 PM

Share

ಕನ್ನಡದ ಮಾಸ್ ನಟ ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ಬಹುಕೋಟಿ ವಂಚನೆ ಪ್ರಕರಣ ದಾಖಲಾಗಿತ್ತು. ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವರು ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ಧ್ರುವ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿದ್ದರು. ಆದರೆ ಇದೀಗ ನ್ಯಾಯಾಲಯದ ಆದೇಶವು ಪ್ರಕರಣದಲ್ಲಿ ಧ್ರುವ ಸರ್ಜಾ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು, ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಎಂಬುವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್ ತಿಂಗಳ ಆರಂಭದಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ ಎಫ್​​ಐಆರ್ ದಾಖಲು ಮಾಡಿದ್ದರು.

ಪ್ರಕರಣದ ಸಂಬಂಧ ಧ್ರುವ ಸರ್ಜಾ ಪರ ವಕೀಲರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿರುವ ನ್ಯಾಯಾಲಯ ಧ್ರುವ ಸರ್ಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೆ, ಇದೊಂದು ಸಿವಿಲ್ ಮೊಕದ್ದಮೆ ಆಗಿದ್ದು ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದೆ. ಆ ಮೂಲಕ ಧ್ರುವ ಸರ್ಜಾ ಅವರು ಮುಂಬೈ ಪೊಲೀಸರ ವಿಚಾರಣೆಯಿಂದ ತಪ್ಪಿಸಿಕೊಂಡಂತಾಗಿದೆ. ಆದರೆ ನ್ಯಾಯಾಲಯವು, ಮುಂದಿನ ವಿಚಾರಣೆ ವರೆಗೆ ಮಾತ್ರವೇ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ:ವಿಷ್ಣುವರ್ಧನ್ ಸಮಾಧಿ ನೆಲಸಮ: ಧ್ರುವ ಸರ್ಜಾ ಹೇಳಿದ್ದೇನು?

ರಾಘವೇಂದ್ರ ಹೆಗಡೆ ಎಂಬುವರು ನೀಡಿರುವ ದೂರಿನ ಅನ್ವಯ, 2018 ರಲ್ಲಿ ಧ್ರುವ ಸರ್ಜಾ ಅವರು ‘ಸೋಲ್ಜರ್’ ಹೆಸರಿನ ಸಿನಿಮಾ ಮಾಡಲು ಮುಂಗಡವಾಗಿ 3 ಕೋಟಿ ರೂಪಾಯಿ ಹಣ ಪಡೆದಿದ್ದರಂತೆ. ರಾಘವೇಂದ್ರ ಅವರು ಅದನ್ನು ವಿವಿಧೆಡೆ ಸಾಲ ಮಾಡಿ ಧ್ರುವ ಅವರಿಗೆ ನೀಡಿದ್ದರಂತೆ. ಆ ಬಳಿಕ ಸಿನಿಮಾದ ಚಿತ್ರಕತೆ ಬರೆಯುವವರಿಗೆ ಮತ್ತು ಪ್ರಚಾರಕ್ಕೆಂದು 28 ಲಕ್ಷ ರೂಪಾಯಿ ಪಡೆದರಂತೆ. ಆರಂಭದಲ್ಲಿ ಚಿತ್ರಕತೆ ಮಾತುಕತೆ ವಿಚಾರವಾಗಿ ಸಂಪರ್ಕದಲ್ಲಿದ್ದ ಧ್ರುವ ಸರ್ಜಾ ಆ ಬಳಿಕ ರಾಘವೇಂದ್ರ ಅವರ ಸಂಪರ್ಕಕ್ಕೆ ಸಿಗಲಿಲ್ಲವಂತೆ. ಸಿನಿಮಾ ಡೇಟ್ಸ್​ ಸಹ ನೀಡಲಿಲ್ಲವಂತೆ. ಇದೇ ಕಾರಣಕ್ಕೆ ರಾಘವೇಂದ್ರ ಅವರು ಧ್ರುವ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಆದರೆ ಧ್ರುವ ಸರ್ಜಾ ಅವರ ಆಪ್ತರು ಈ ಆರೋಪವನ್ನು ತಳ್ಳಿ ಹಾಕಿದ್ದು, 2018 ರಲ್ಲಿ ರಾಘವೇಂದ್ರ ಅವರು ಸಿನಿಮಾ ಮಾಡಲು ಬಂದಿದ್ದು, ಹಾಗೂ ಅಡ್ವಾನ್ಸ್ ನೀಡಿದ್ದು ಸತ್ಯವೇ ಆದರೆ ನಾವು ಅವರನ್ನು ದೂರ ತಳ್ಳಿಲ್ಲ. ಅವರು ತೆಲುಗು ಹಾಗೂ ತಮಿಳಿನಲ್ಲಿ ಸಿನಿಮಾ ಮಾಡೋಣ ಎಂದರು, ಧ್ರುವ ಸರ್ಜಾ ಅವರು ಕನ್ನಡದಲ್ಲಿಯೇ ಸಿನಿಮಾ ಮಾಡೋಣ ಎಂದು ಹೇಳಿದರು. ಆ ನಂತರ ಅವರೇ ಅಚಾನಕ್ಕಾಗಿ ನಮ್ಮ ಸಂಪರ್ಕದಿಂದ ತಪ್ಪಿ ಹೋದರು. ಬಳಿಕ ನ್ಯಾಯಾಲಯದ ನೊಟೀಸ್ ಕಳಿಸಿದ್ದಾರೆ. ಅದಕ್ಕೆ ನಾವು ನ್ಯಾಯಾಲಯದ ಮೂಲಕವೇ ಉತ್ತರ ನೀಡುತ್ತೇವೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ