ಜಿಮ್ ಟ್ರೇನರ್​ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣ; ಧ್ರುವ ಸರ್ಜಾ ಮ್ಯಾನೇಜರ್ ವಿಚಾರಣೆ

ಸದ್ಯ ದರ್ಶನ್ ಪ್ರಕರಣ ಎಲ್ಲಡೆ ಚರ್ಚೆ ಹುಟ್ಟುಹಾಕುತ್ತಿದೆ. ದರ್ಶನ್ ಹಾಗೂ ಅವರ ಮ್ಯಾನೇಜರ್ ನಾಗರಾಜ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಧ್ರುವ ಸರ್ಜಾ ಆಪ್ತ, ಮ್ಯಾನೇಜರ್ ಅಶ್ವಿನ್ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಇದಕ್ಕೆ ಕಾರಣ ಹಲ್ಲೆ ಆರೋಪ.

ಜಿಮ್ ಟ್ರೇನರ್​ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣ; ಧ್ರುವ ಸರ್ಜಾ ಮ್ಯಾನೇಜರ್ ವಿಚಾರಣೆ
ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅರೆಸ್ಟ್?
Follow us
ರಾಚಪ್ಪಾಜಿ ನಾಯ್ಕ್
| Updated By: ರಾಜೇಶ್ ದುಗ್ಗುಮನೆ

Updated on:Sep 10, 2024 | 9:42 AM

ಸ್ಯಾಂಡಲ್​ವುಡ್​ನಲ್ಲಿ ಒಂದಾದಮೇಲೆ ಒಂದರಂತೆ ಶಾಕಿಂಗ್ ಬೆಳವಣಿಗೆಗಳು ನಡೆಯುತ್ತಿವೆ. ಇತ್ತೀಚೆಗೆ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಹಾಗೂ ಅವರ ಆಪ್ತರು ಅರೆಸ್ಟ್ ಆದರು. ಈಗ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ ಎನ್ನಲಾಗಿದೆ. ಬನಶಂಕರಿ ಪೊಲೀಸರು ಆರೋಪಿ ಅಶ್ವಿನ್​ನ ಬಂಧಿಸಿದ್ದಾರೆ ಎನ್ನಲಾಗಿತ್ತು. ಆದರೆ, ಅವರು ಕಳೆದ ಕೆಲ ದಿನಗಳ ಹಿಂದೆ ವಿಚಾರಣೆ ಎದುರಿಸಿ ಬಂದಿದ್ದಾರೆ ಎನ್ನಲಾಗಿದೆ.

ಮೇ.26 ರಂದು ರಾತ್ರಿ ಪ್ರಾಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿದ್ದ. ನಾಗೇಂದ್ರಗೆ ಸಾಥ್ ಕೊಟ್ಟಿದ್ದೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎನ್ನಲಾಗಿತ್ತು.

ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವಗೆ ಜಿಮ್​ನಲ್ಲಿ ಟ್ರೇನ್ ಮಾಡುತ್ತಿದ್ದುದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್​ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಹಲ್ಲೆಗೆ ಪ್ಲ್ಯಾನ್ ರೂಪಿಸಿದರು. ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದ ಆರೋಪ ಎದುರಾಗಿತ್ತು.

ಇದನ್ನೂ ಓದಿ:‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ 

ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಅವರನ್ನು ಮುಂದಕ್ಕೆ ಬಿಟ್ಟು ಅಶ್ವಿನ್ ಹಲ್ಲೆ ಮಾಡಿಸಿದ್ದರು. ತನಿಖೆ ವೇಳೆ ಅಶ್ವಿನ್ ಪಾತ್ರ ಇರೋದು ಬೆಳಕಿಗೆ ಬಂದಿತ್ತು. ಹೀಗಾಗಿ ಕರೆದು ವಿಚಾರಣೆ ಮಾಡಲಾಗಿದೆ. ಈ‌ ಹಿನ್ನಲೆಯಲ್ಲಿ ಅಶ್ವಿನ್​ ಬಂಧಿಸಲಾಗಿದೆ. ಕಳೆದ ವರ್ಷ ಅಶ್ವಿನ್ ಹುಟ್ಟುಹಬ್ಬಕ್ಕೆ ಧ್ರುವ ಸರ್ಜಾ ಅವರು ದುಬಾರಿ ಟೊಯೊಟಾ ಫಾರ್ಚೂನರ್ ಕಾರು ಗಿಫ್ಟ್ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:22 am, Tue, 10 September 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ