AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja: ನಾ ಅಣ್ಣನನ್ನು ತುಂಬಾ ಮಿಸ್ ಮಾಡ್ಕೊತ್ತಿದ್ದೀನಿ: ಖುಷಿಯ ನಡುವೆ ಧ್ರುವ ಸರ್ಜಾರ ನೋವು..!

Dhruva Sarja: ಸದ್ಯ ಮಾರ್ಟಿನ್ ಚಿತ್ರದಲ್ಲಿ ತೊಡಗಿಸಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್, ಶೀಘ್ರದಲ್ಲೇ ಜೋಗಿ ಪ್ರೇಮ್ ಅವರು ಆ್ಯಕ್ಷನ್ ಕಟ್ ಹೇಳಲಿರುವ ಮಾಸ್ ಮಸಾಲ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ.

Dhruva Sarja: ನಾ ಅಣ್ಣನನ್ನು ತುಂಬಾ ಮಿಸ್ ಮಾಡ್ಕೊತ್ತಿದ್ದೀನಿ: ಖುಷಿಯ ನಡುವೆ ಧ್ರುವ ಸರ್ಜಾರ ನೋವು..!
Dhruva Sarja - Chiranjeevi Sarja
TV9 Web
| Edited By: |

Updated on: Oct 02, 2022 | 2:10 PM

Share

ಕನ್ನಡದ ಚಿತ್ರರಂಗದ ಬಹದ್ದೂರ್ ಗಂಡು ಆ್ಯಕ್ಷನ್ ಪ್ರಿನ್ ಧ್ರುವ ಸರ್ಜಾ (Dhruva Sarja) ತಂದೆಯಾಗಿದ್ದಾರೆ. ಇಂದು ಅವರ ಧರ್ಮಪತ್ನಿ ಪ್ರೇರಣಾ ಶಂಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯಲ್ಲಿರುವ ಧ್ರುವ ಸರ್ಜಾ ಅವರನ್ನು ನೋವೊಂದು ಕಾಡುತ್ತಿದೆ. ಅದುವೇ ಅಣ್ಣ, ಗೆಳೆಯ ಚಿರಂಜೀವಿ ಸರ್ಜಾ (Chiranjeevi Sarja) ಇಲ್ಲದಿರುವುದು. ಈ ಬಗ್ಗೆ ಮಾತನಾಡಿರುವ ಧ್ರುವ ಸರ್ಜಾ ಇಂತಹ ಖುಷಿಯ ಸಂದರ್ಭದಲ್ಲಿ ನಾನು ಅಣ್ಣ ಹಾಗೂ ಅಜ್ಜಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಮನದ ನೋವನ್ನು ಹೊರಹಾಕಿದ್ದಾರೆ.

ನಾನು ಆಸೆ ಪಟ್ಟಂತೆ ಹೆಣ್ಣು ಮಗು ಆಗಿದೆ. ಇದು ತುಂಬಾ ಖುಷಿಯ ವಿಚಾರ. ಆದರೆ ಈ ಸಮಯದಲ್ಲಿ ನಮ್ಮ ಅಣ್ಣ, ಅಜ್ಜಿ ಇಲ್ಲದಿರುವುದು ನೋವಿನ ಸಂಗತಿ. ಅವರಿಬ್ಬರನ್ನು ನಾನು ತುಂಬಾ ಮಿಸ್ ಮಾಡಿ ಕೊಳ್ಳುತ್ತಿದ್ದೇನೆ ಎಂದು ಧ್ರುವ ಸರ್ಜಾ ಖುಷಿಯ ನಡುವೆ ಚಿರು ಹಾಗೂ ಅಜ್ಜಿಯನ್ನು ನೆನಪಿಸಿಕೊಂಡಿದ್ದಾರೆ.

ಇನ್ನು ಹೆಣ್ಣು ಮಗುವಿನ ಆಗಮನದ ಬಗ್ಗೆ ಮಾತನಾಡಿದ ಆ್ಯಕ್ಷನ್ ಪ್ರಿನ್ಸ್​, ಸಾಮಾನ್ಯವಾಗಿ ಹೆಣ್ಣು ಮಕ್ಕಳಂದ್ರೆ ಒಂದು ಮರ್ಯಾದೆ ಇತ್ತು. ಆದರೀಗ ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ಎಲ್ಲರ ಲೈಫ್​ನಲ್ಲೂ ಏರಿಳಿತಗಳಿರುತ್ತೆ. ನಮ್ಮ ಜೀವನದಲ್ಲೂ ಅಂತಹ ಕಷ್ಟಗಳು ಎದುರಾಗಿತ್ತು. ಈ ಸಮಯದಲ್ಲಿ ಡಾಕ್ಟರ್ ಸಲಹೆಯಿಂದ ಮುದ್ದಾದ ಮಗು ನಮ್ಮ ಕೈ ಸೇರಿದೆ. ನನಗೆ ಆಶೀರ್ವದಿಸಿದಂತೆ ನನ್ನ ಮಗುವಿನ ಮೇಲೂ ಕೂಡ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಎಂದು ಅಭಿಮಾನಿಗಳಲ್ಲಿ ಧ್ರುವ ಸರ್ಜಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

2019 ರಲ್ಲಿ ಧ್ರುವ ಸರ್ಜಾ ಬಾಲ್ಯದ ಗೆಳೆತಿ ಪ್ರೇರಣಾರನ್ನು ವಿವಾಹವಾಗಿದ್ದರು. ಈ ಶುಭ ಸಮಾರಂಭದ ಬೆನ್ನಲ್ಲೇ, ಅಂದರೆ 2020 ರಲ್ಲಿ ಸರ್ಜಾ ಕುಟುಂಬದಿಂದ ಚಿರಂಜೀವಿ ಸರ್ಜಾ ಅಗಲಿದ್ದರು. ಇದಾದ ಬಳಿಕ ಸರ್ಜಾ ಕುಟುಂಬದಲ್ಲಿ ಯಾವುದೇ ಮಹತ್ವದ ಶುಭ ಸಮಾರಂಭ ನಡೆದಿರಲಿಲ್ಲ. ಇದೀಗ ಧ್ರುವ ಸರ್ಜಾ ದಂಪತಿಗಳ ಮೂಲಕ ಮತ್ತೊಮ್ಮೆ ಕುಟುಂಬದಲ್ಲಿ ಸಂತಸ ಮನೆ ಮಾಡಿರುವುದು ವಿಶೇಷ.

ಸದ್ಯ ಮಾರ್ಟಿನ್ ಚಿತ್ರದಲ್ಲಿ ತೊಡಗಿಸಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್, ಶೀಘ್ರದಲ್ಲೇ ಜೋಗಿ ಪ್ರೇಮ್ ಅವರು ಆ್ಯಕ್ಷನ್ ಕಟ್ ಹೇಳಲಿರುವ ಮಾಸ್ ಮಸಾಲ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು