ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?

ಪ್ರೇಮ್​ ಎಕ್​ ಲವ್​ ಯಾ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಸುದೀಪ್​ಗೆ ಆ್ಯಕ್ಷನ್​ ಕಟ್​ ಹೇಳುವ ಆಲೋಚನೆ ಪ್ರೇಮ್​ ಅವರದ್ದಾಗಿತ್ತು.

ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?
ಧ್ರುವ ಸರ್ಜಾ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 25, 2021 | 5:10 PM

ಫೆಬ್ರವರಿ ತಿಂಗಳಲ್ಲಿ ತೆರೆಕಂಡ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ಈಗ ಧ್ರುವ ಸರ್ಜಾ ‘ದುಬಾರಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಸಿನಿಮಾ ಕೆಲಸಗಳು ಸೆಟ್ಟೇರೋದು ವಿಳಂಬವಾಗುತ್ತಿದೆ. ಹೀಗಾಗಿ, ಧ್ರುವ ಮುಂದಿನ ಚಿತ್ರ ಜೋಗಿ ಪ್ರೇಮ್​ ಜತೆಗೆ ಎನ್ನುವ ಮಾತು ಕೇಳಿ ಬಂದಿದೆ.

ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ. ಆದರೆ, ಚಿತ್ರದ ಶೂಟಿಂಗ್​ ವಿಳಂಬವಾದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ, ಜೋಗಿ ಪ್ರೇಮ್​ ಜತೆ ಧ್ರುವ ಕೈ ಜೋಡಿಸೋ ಆಲೋಚನೆ ಇಟ್ಟುಕೊಂಡಿದ್ದಾರೆ.

ಪ್ರೇಮ್​ ಎಕ್​ ಲವ್​ ಯಾ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಸುದೀಪ್​ಗೆ ಆ್ಯಕ್ಷನ್​ ಕಟ್​ ಹೇಳುವ ಆಲೋಚನೆ ಪ್ರೇಮ್​ ಅವರದ್ದಾಗಿತ್ತು. ಆದರೆ, ಈಗ ಅವರು ಧ್ರುವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಗಾಂಧಿ ನಗರದಲ್ಲಿ ಹರಿದಾಡಿದೆ.

ಈಗಾಗಲೇ ಧ್ರುವ ಹಾಗೂ ಪ್ರೇಮ್​ ಜತೆ ಒಂದು ಹಂತದ ಮಾತುಕತೆ ಪೂರ್ಣಗೊಂಡಿದೆ ಎನ್ನುತ್ತಿವೆ ಮೂಲಗಳು. ಸಿನಿಮಾದ ಕಥೆ ಧ್ರುವ ಅವರಿಗೂ ಇಷ್ಟವಾಗಿದೆ. ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿದ್ದು, ಶೀಘ್ರವೇ ಈ ಬಗ್ಗೆ ಲೇಟೆಸ್ಟ್​ ಅಪ್​ಡೇಟ್​ ಸಿಗಲಿದೆಯಂತೆ. ಅಂದಹಾಗೆ, ಈ ಚಿತ್ರ ಯಾವಾಗ ಸೆಟ್ಟೇರಲಿದೆ ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಫೆಬ್ರವರಿ ತಿಂಗಳಲ್ಲಿ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಮೊದಲ ಮೂರು ದಿನಕ್ಕೆ ಈ ಚಿತ್ರ 30 ಕೋಟಿ ರೂ. ಕಲೆಕ್ಷನ್​ ಮಾಡಿತು. 6 ದಿನಗಳಲ್ಲಿ 46 ಕೋಟಿ ರೂ. ಗಳಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಒಟ್ಟಾರೆಯಾಗಿ ಈ ಚಿತ್ರಕ್ಕೆ 50 ಕೋಟಿಗೂ ಹೆಚ್ಚು ಕಲೆಕ್ಷನ್​ ಆಗಿದೆ ಎನ್ನಲಾಗುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತೆರೆಕಂಡಿತ್ತು.

ಇದನ್ನೂ ಓದಿ: ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ