Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರಿದ ‘ಲೈಫ್ ಟುಡೆ’, ಇದು ಇಂದಿನ ಕತೆ: ಧ್ರುವ ಸರ್ಜಾ ಸಾಥ್

Life Today: ತಮಿಳಿನಲ್ಲಿ ಬಂದ ಹೊಸಬರ ಪ್ರಯತ್ನ ‘ಲವ್ ಟುಡೆ’ ದೊಡ್ಡ ಹಿಟ್ ಆಗಿತ್ತು, ಇದೀಗ ಕನ್ನಡದಲ್ಲಿ ‘ಲೈಫ್ ಟುಡೆ’ ಸಿನಿಮಾ ಸೆಟ್ಟೇರಿದೆ. ಏನಿದರ ಕತೆ?

ಸೆಟ್ಟೇರಿದ ‘ಲೈಫ್ ಟುಡೆ’, ಇದು ಇಂದಿನ ಕತೆ: ಧ್ರುವ ಸರ್ಜಾ ಸಾಥ್
Follow us
ಮಂಜುನಾಥ ಸಿ.
|

Updated on: Jan 04, 2024 | 9:20 PM

2022 ರ ಅಂತ್ಯದಲ್ಲಿ ಬಿಡುಗಡೆ ಆಗಿದ್ದ ತಮಿಳು ಸಿನಿಮಾ ‘ಲವ್ ಟುಡೆ’ ಹೊಸ ಅಲೆ ಸೃಷ್ಟಿಸಿತ್ತು, ಹೊಸಬರ, ಹೊಸ ರೀತಿಯ ಪ್ರಯತ್ನಕ್ಕೆ ಪ್ರೇಕ್ಷಕರು ಉಘೆ ಎಂದಿದ್ದರು. ಇದೀಗ ಕನ್ನಡದಲ್ಲಿ ಅದೇ ಹೆಸರು ಹೋಲುವ ‘ಲೈಫ್ ಟುಡೆ’ ಹೆಸರಿನ ಸಿನಿಮಾ ಸೆಟ್ಟೇರಿದೆ. ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಧ್ರುವ ಸರ್ಜಾ (Dhruva Sarja) ಶುಭ ಹಾರೈಸಿದ್ದಾರೆ.
‘ಇರುವುದೆಲ್ಲವ ಬಿಟ್ಟು’ ಸಿನಿಮಾ ಮಾಡಿ ಭರವಸೆ ಮೂಡಿಸಿರುವ ಕಾಂತ ಕನ್ನಲ್ಲಿ ‘ಲವ್ ಟುಡೆ’ ಸಿನಿಮಾದ ನಿರ್ದೇಶಕರು. ಬೆಂಗಳೂರಿನ ಬಂಡೆ ಮಹಾಕಾಳಿ ದೇವಾಲಯಲದಲ್ಲಿ ’ಲೈಫ್ ಟುಡೆ’ ಸಿನಿಮಾದ ಮುಹೂರ್ತ ನೆರವೇರಿದೆ. ಹಿರಿಯ ನಿರ್ದೇಶಕ ಮಹೇಂದರ್ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೈಟಲ್ ಹಾಗೂ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭವಾಗಲಿ ಎಂದರು.
ಮಾಧ್ಯಮದವರೊಂದಿಗೆ ಮಾತನಾಡಿದ ಧ್ರುವ ಸರ್ಜಾ, ‘ಸಿನಿಮಾಕ್ಕೆ ಒಳ್ಳೆಯ ಹೆಸರು ಇಟ್ಟಿದ್ದಾರೆ. ಹೆಸರು ಕುತೂಹಲ ಮೂಡಿಸುತ್ತಿದೆ. ನಿರ್ದೇಶಕರು ‘ಇರುವುದೆಲ್ಲವನ್ನು ಬಿಟ್ಟು’ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಆ ಸಿನಿಮಾದಲ್ಲಿ ಅತ್ತಿಗೆ ಮೇಘನಾ ನಟಿಸಿದ್ದರು. ಆ ಸಿನಿಮಾ ಚೆನ್ನಾಗಿತ್ತು. ಈಗ ‘ಲೈಫ್ ಟುಡೆ’ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಹೊಸಬರು ಇದ್ದಾರೆ. ಹಳಬರು ಸಹ ಇದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದರು.
ನಿರ್ದೇಶಕ ಕಾಂತ ಕನ್ನಲ್ಲಿ ಮಾತನಾಡಿ, ‘ಇರುವುದೆಲ್ಲವ ಬಿಟ್ಟು‘ ಸಿನಿಮಾಗೆ ಜನ ಸಾಕಷ್ಟು ಪ್ರೀತಿ, ಪ್ರೋತ್ಸಾಹ ತೋರಿದ್ದಾರೆ ಅದನ್ನು ಎಂದಿಗೂ ಮರೆಯಲಾಗದು. ಆ ಸಹಕಾರವೇ ನನ್ನ ಇನ್ನೊಂದು ಸಿನಿಮಾ ಮಾಡಲು ಸ್ಪೂರ್ತಿ ನೀಡಿದೆ. ’ಲೈಫ್ ಟುಡೆ’ ಸಿನಿಮಾಗೆ ಬೆಂಬಲ ಕೊಡಲು ಆಗಮಿಸಿರುವ ಧ್ರುವ ಸರ್ಜಾ, ಶ್ರೀಧರ್ , ಮಹೇಂದರ್ ಅವರಿಗೆ ಧನ್ಯವಾದ ಎಂದರು.
ನಾಯಕ ಕಿರಣ್ ಆನಂದ್ ಮಾತನಾಡಿ, ‘ನನ್ನ ಮೊದಲ ಸಿನಿಮಾ ಕನ್ನಲ್ಲಿ ಅವರ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಶ್ರೀಧರ್ ಅವರು ನಮ್ಮ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಇದು ನಮ್ಮ ಅದೃಷ್ಟ. ನಾಯಕಿ ಲೇಖಾ ಅವರು ಅವರಿಂದ ಕಲಿಯುವುದು ಸಾಕಷ್ಟಿದೆ. ನಿರ್ಮಾಪಕರು ನನಗೆ ಅಣ್ಣನಿಗಿಂತ ಹೆಚ್ಚು, ಚಿತ್ರತಂಡದಲ್ಲಿ ಕುಟುಂಬದ ಭಾವ ಇದೆ’ ಎಂದರು.
ನಿರ್ದೇಶಕ ಮಹೇಂದರ್ ಮಾತನಾಡಿ, ‘ಯುವ ತಂಡ ಈ ಒಟ್ಟಿಗೆ ಕೆಲಸ ಮಾಡುತ್ತಿದೆ. ತೆರೆ ಹಿಂದೆ ಇರುವವರೆಲ್ಲ ನನ್ನ ಅಚ್ಚುಮೆಚ್ಚಿನ ಶಿಷ್ಯಂದಿರೇ. ಕಲೆ ಎನ್ನುವುದು ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಎಲ್ಲರನ್ನೂ ಅಪ್ಪಿಕೊಳ್ಳುತ್ತದೆ. ಇದು ಸತ್ಯವಾದ ಮಾತು. ಬಹಳಷ್ಟು ಹೊಸಬರು ಇದ್ದೀರಾ. ನಿಮ್ಮನ್ನು ಕಲೆ ಕೈಬೀಸಿ ಕರೆದಿದೆ. ಅದು ನಿಮ್ಮನ್ನೇ ಅಪ್ಪಿಕೊಳ್ಳಲಿ ಎಂದು ಹಾರೈಸಿದರು.
’ಲೈಫ್ ಟುಡೆ’ ಪ್ರೀತಿ ಮತ್ತು ಕುಟುಂಬದ ಕಥಾಹಂದರ ಹೊಂದಿರುವ ಸಿನಿಮಾ. ಈ ಸಿನಿಮಾದ ಮೂಲಕ ಕಿರಣ್ ಆನಂದ್ ನಾಯಕನಾಗಿ ಎಂಟ್ರಿ ನೀಡುತ್ತಿದ್ದಾರೆ. ಲೇಖಾ ಚಂದ್ರ ನಾಯಕಿಯಾಗಿ ನಟಿಸುತ್ತಿದ್ದಾರೆ. ಜನವರಿ ಅಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗಲಿದೆ. ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜಿಸಿದೆ. ’ಲೈಫ್ ಟುಡೆ’ ಸಿನಿಮಾಕ್ಕೆ ಶ್ರೀಧರ್ ವಿ ಸಂಭ್ರಮ ಸಂಗೀತ ನಿರ್ದೇಶನವಿದ್ದು, ಸತೀಶ್ ಕುಮಾರ್ ಕ್ಯಾಮೆರಾ ಹಿಡಿಯಲಿದ್ದಾರೆ.  ಮೇಘನಾ ಪ್ರೊಡಕ್ಷನ್ ಮೇಘನಾ ಪ್ರದೀಪ್ ’ಲೈಫ್ ಟುಡೆ’ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ