AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ

KD The Devil: ಏಪ್ರಿಲ್ 30ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿರುವ ‘ಕೆಡಿ’ ಸಿನಿಮಾದ ಟ್ರೇಲರ್ ಇಂದು (ಏಪ್ರಿಲ್ 22) ರಿಲೀಸ್ ಮಾಡಲಾಗಿದೆ. ನಟ ಧ್ರುವ ಸರ್ಜಾ ಅವರ ಆ್ಯಕ್ಷನ್ ಅಬ್ಬರ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಅವರಿಗೆ ಸಂಜಯ್ ದತ್ ಕೂಡ ಸಾಥ್ ನೀಡಿದ್ದಾರೆ.

KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ
Dhruva Sarja
ಮದನ್​ ಕುಮಾರ್​
|

Updated on:Apr 22, 2026 | 7:39 PM

Share

ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಟ್ರೇಲರ್ (KD Trailer) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಧ್ರುವ ಸರ್ಜಾ (Dhruva Sarja) ಜೊತೆ ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ. ರವಿಶಂಕರ್ ಸೇರಿದಂತೆ ಹಲವು ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಏಪ್ರಿಲ್ 30ರಂದು ಈ ಸಿನಿಮಾ ತೆರೆಕಾಣಲಿದೆ.

ಬಿಡುಗಡೆಗೂ ಮುನ್ನವೇ ಹಲವು ಕಾರಣಗಳಿಂದ ‘ಕೆಡಿ’ ಸಿನಿಮಾ ಸಖತ್ ಸುದ್ದಿ ಆಗಿದೆ. ‘ಸರ್ಸೆ ನಿನ್ನ ಸೆರಗ’ ಹಾಡಿನಿಂದಾಗಿ ದೇಶಾದ್ಯಂತ ಈ ಸಿನಿಮಾ ಬಗ್ಗೆ ಚರ್ಚೆ ಆಗಿತ್ತು. ಇತ್ತೀಚೆಗೆ ಈ ಚಿತ್ರದ ಸೆನ್ಸಾರ್ ಪ್ರಕ್ರಿಯೆ ಬಗ್ಗೆಯೂ ಚಿತ್ರತಂಡದಿಂದ ಅಸಮಾಧಾನ ವ್ಯಕ್ತವಾಗಿತ್ತು. ಈ ಎಲ್ಲ ಕಾರಣಗಳಿಂದ ಸಿನಿಮಾ ಬಗ್ಗೆ ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ.

‘ಕೆಡಿ’ ಸಿನಿಮಾದ ಟ್ರೇಲರ್:

‘ಆನಂದ್ ಆಡಿಯೋ’ ಮೂಲಕ ‘ಕೆಡಿ’ ಟ್ರೇಲರ್ ಅನಾವರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ರೆಟ್ರೋ ಕಾಲದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಆ ಕಾಲಘಟ್ಟಕ್ಕೆ ತಕ್ಕಂತೆ ಸೆಟ್ ನಿರ್ಮಾಣ ಮಾಡಿ ಬಹುತೇಕ ಚಿತ್ರೀಕರಣ ಮಾಡಲಾಗಿದೆ. ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದೆ.

ಇದನ್ನೂ ಓದಿ: ‘ಜನ ನಾಯಗನ್’ ರೀತಿ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ’ ಸಿನಿಮಾಗೂ ಸೆನ್ಸಾರ್ ಸಮಸ್ಯೆ

ವೆಂಕಟ್ ಕೆ. ನಾರಾಯಣ್ ಅವರು ನಿರ್ಮಾಣ ಮಾಡಿರುವ ‘ಕೆಡಿ’ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ನೀಡಿದ್ದಾರೆ. ಈಗಾಗಲೇ ಹಾಡುಗಳು ಸೂಪರ್ ಹಿಟ್ ಆಗಿವೆ. ವಿಲಿಯಂ ಡೇವಿಡ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಟ್ರೇಲರ್ ಬಿಡುಗಡೆ ವೇಳೆ ಧ್ರುವ ಸರ್ಜಾ ಮಾತನಾಡಿದರು. ‘ನೀವೆಲ್ಲರೂ ನಮಗೆ 2 ಗಂಟೆ 20 ನಿಮಿಷ ಸಮಯ ಕೊಡಿ. ಇದು ಫ್ಯಾಮಿಲಿ ಎಂಟರ್​ಟೇನರ್ ಸಿನಿಮಾ. ಆದರೆ ಸ್ವಲ್ಪ ಕ್ರೌರ್ಯ ಇದೆ. ಏಪ್ರಿಲ್ 30ರಂದು ನಿಮ್ಮನ್ನು ನಂಬಿಕೊಂಡೇ ನಿಮ್ಮ ಮುಂದೆ ಬರುತ್ತಿದ್ದೇವೆ. ಈ ಚಿತ್ರದ ಹೀರೋ ನಾನಲ್ಲ, ನಮ್ಮ ನಿರ್ದೇಶಕರು. ಅವರು ಈ ಚಿತ್ರಕ್ಕೆ ಎಷ್ಟು ಕಷ್ಟಪಟ್ಟಿದ್ದಾರೆ ಎಂಬುದು ಸಿನಿಮಾ ನೋಡಿದರೆ ನಿಮಗೆ ತಿಳಿಯುತ್ತದೆ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:24 pm, Wed, 22 April 26

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್