AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಯನ್ ನನ್ನ ಮೊದಲ ಮಗ’; ಖುಷಿ ಖುಷಿಯಿಂದ ಮಾತನಾಡಿದ ಧ್ರುವ ಸರ್ಜಾ

ಧ್ರುವ ಸರ್ಜಾ ಅವರು ಇಂದು (ಸೆಪ್ಟೆಂಬರ್ 18) ಬೆಳಗ್ಗೆ ಖುಷಿ ಸುದ್ದಿ ನೀಡಿದರು. ತಾವು ಮತ್ತೆ ತಂದೆ ಆಗಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ಸದ್ಯ ಪ್ರೇರಣಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಧ್ರುವ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯನ್ನು ಮಾತನಾಡಿಸಿದ್ದಾರೆ.

‘ರಾಯನ್ ನನ್ನ ಮೊದಲ ಮಗ’; ಖುಷಿ ಖುಷಿಯಿಂದ ಮಾತನಾಡಿದ ಧ್ರುವ ಸರ್ಜಾ
ಧ್ರುವ-ಮೇಘನಾ-ರಾಯನ್
ರಾಜೇಶ್ ದುಗ್ಗುಮನೆ
|

Updated on: Sep 18, 2023 | 12:06 PM

Share

ಧ್ರುವ ಸರ್ಜಾ (Dhruva Sarja) ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಎರಡನೇ ಬಾರಿ ತಂದೆ ಆಗಿದ್ದಾರೆ. ಧ್ರುವ-ಪ್ರೇರಣಾ ದಂಪತಿಗೆ ಕಳೆದ ಅಕ್ಟೋಬರ್​ನಲ್ಲಿ ಹೆಣ್ಣುಮಗು ಜನಿಸಿತ್ತು. ಈಗ ಗಂಡು ಮಗುವಿಗೆ ಅವರು ತಂದೆ ಆಗಿದ್ದಾರೆ. ಧ್ರುವ ಸರ್ಜಾ ಅವರು ಈ ಸಂದರ್ಭದಲ್ಲಿ ಅಣ್ಣನ ತುಂಬಾನೇ ಮಿಸ್ ಮಾಡಿಕೊಂಡಿದ್ದಾರೆ. ಇದು ನನಗೆ ಮೂರನೇ ಮಗು ಎಂದಿದ್ದಾರೆ. ಅವರು ಈ ರೀತಿ ಹೇಳೋಕೆ ಕಾರಣವೇನು? ಆ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

ಧ್ರುವ ಸರ್ಜಾ ಅವರು ಇಂದು (ಸೆಪ್ಟೆಂಬರ್ 18) ಬೆಳಗ್ಗೆ ಖುಷಿ ಸುದ್ದಿ ನೀಡಿದರು. ತಾವು ಮತ್ತೆ ತಂದೆ ಆಗಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ಸದ್ಯ ಪ್ರೇರಣಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಧ್ರುವ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯನ್ನು ಮಾತನಾಡಿಸಿದ್ದಾರೆ. ಮಗುವನ್ನು ಎತ್ತಿಕೊಂಡಿದ್ದಾರೆ. ಆ ಬಳಿಕ ಅವರು ಮಾಧ್ಯಮದ ಜೊತೆ ಮಾತನಾಡಿದರು.

‘ಎಲ್ಲರಿಗೂ ಗಣೇಶ ಹಬ್ಬದ ಶುಭಾಶಯ. ಎರಡನೇ ಮಗು ಆಗಿದೆ. ಲೆಕ್ಕದ ಪ್ರಕಾರ ನನಗೆ ಇದು ಮೂರನೇ ಮಗು. ರಾಯನ್ ನನ್ನ ಮೊದಲ ಮಗ. ಆ ಬಳಿಕ ಹೆಣ್ಣು ಮಗು ಹುಟ್ಟಿತು. ಅವಳಿಗೆ ಇನ್ನೂ ಹೆಸರು ಇಟ್ಟಿಲ್ಲ. ಈಗ ಮತ್ತೊಂದು ಮಗು ಆಗಿದೆ. ಮನೆಯಲ್ಲಿ ಈಗ ಮೂರು ಮಕ್ಕಳಿದ್ದಾರೆ. ಸದ್ಯ ಪ್ರೇರಣಾ, ಮಗ ಆರೋಗ್ಯವಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ಮಗು ಯಾವಾಗ ಹುಟ್ಟಿದರೂ ಅದು ಒಳ್ಳೆಯ ದಿನವೇ ಆಗಿರುತ್ತದೆ. ಇಂದು ಲೆಜೆಂಡರಿಗಳು ಹುಟ್ಟಿದ ದಿನ. ಗೌರಿ ಗಣೇಶ ಹಬ್ಬ ಬೇರೆ. ಹೀಗಾಗಿ ಸಖತ್ ವಿಶೇಷ. ಗಂಡು ಮಗು ಆಗಿದ್ರೂ, ಹೆಣ್ಣು ಮಗು ಆಗಿದ್ರೂ ಯಾವುದಾದ್ರೂ ಅದನ್ನು ನಾವು ಖುಷಿಯಿಂದಲೇ ಸ್ವೀಕರಿಸುತ್ತಿದ್ದೆವು. ಅಣ್ಣನ ಮಿಸ್ ಮಾಡಿಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಧ್ರುವ ಸರ್ಜಾ.

ಇದನ್ನೂ ಓದಿ: ಮತ್ತೊಮ್ಮೆ ತಂದೆಯಾದ ಧ್ರುವ ಸರ್ಜಾ; ವಿಶೇಷ ದಿನದಂದು ಜನಿಸಿತು ಮಗು

ಧ್ರುವ ಸರ್ಜಾ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯ ತಿಳಿಸಲಾಗುತ್ತಿದೆ. ಅವರು ಮಗನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್