ರಾಮ ನವಮಿಯಂದು ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್​ ನ್ಯೂಸ್; ‘ಮಾರ್ಟಿನ್​’ ರಿಲೀಸ್ ಡೇಟ್ ಘೋಷಣೆ

ಇಂದು (ಏಪ್ರಿಲ್​ 10) ರಾಮ ನವಮಿ. ಧ್ರುವ ಸರ್ಜಾ ಕುಟುಂಬ ಆಂಜನೇಯನ ಭಕ್ತರು. ಈ ಕಾರಣಕ್ಕೆ ರಾಮ ನವಮಿ ಹಬ್ಬದ ದಿನದಂದು ‘ಮಾರ್ಟಿನ್​’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಮಾಡಲಾಗಿದೆ.

ರಾಮ ನವಮಿಯಂದು ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್​ ನ್ಯೂಸ್; ‘ಮಾರ್ಟಿನ್​’ ರಿಲೀಸ್ ಡೇಟ್ ಘೋಷಣೆ
ಧ್ರುವ ಸರ್ಜಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Apr 10, 2022 | 4:26 PM

ಸಿನಿಮಾ ವಿಚಾರದಲ್ಲಿ ಧ್ರುವ ಸರ್ಜಾ (Dhruva Sarja) ಎಂದಿಗೂ ತರಾತುರಿ ಮಾಡಿದವರಲ್ಲ. ಸಾಕಷ್ಟು ಸಮಯ ತೆಗೆದುಕೊಂಡು ಒಪ್ಪಿಕೊಂಡ ಸಿನಿಮಾದ ಕೆಲಸ ಮುಗಿಸುತ್ತಾರೆ. ‘ಪೊಗರು’ ಸಿನಿಮಾದ ಗೆಲುವಿನ ಬಳಿಕ ಅವರು ‘ಮಾರ್ಟಿನ್​’ ಸಿನಿಮಾ (Martin Movie) ಒಪ್ಪಿಕೊಂಡರು. ಸದ್ಯ ಆ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ಈಗ ಚಿತ್ರತಂಡದಿಂದ ಗುಡ್​ನ್ಯೂಸ್ ಒಂದು ಸಿಕ್ಕಿದೆ. ಸಿನಿಮಾ ರಿಲೀಸ್ ದಿನಾಂಕ ಯಾವಾಗ ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ‘ಮಾರ್ಟಿನ್’​ ಸಿನಿಮಾ ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರಕ್ಕಾಗಿ ಧ್ರುವ ಸಾಕಷ್ಟು ವರ್ಕೌಟ್​ ಮಾಡಿದ್ದಾರೆ. ಸಿನಿಮಾದ ಪೋಸ್ಟರ್​ಗಳನ್ನು ನೋಡಿದರೆ ಅವರ ಶ್ರಮ ಎದ್ದು ಕಾಣುತ್ತದೆ. ಅವರ ಕಟ್ಟುಮಸ್ತಾದ ದೇಹ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಚಿತ್ರತಂಡ ರಿಲೀಸ್ ದಿನಾಂಕವನ್ನು ಇಲ್ಲಿಯವರೆಗೆ ರಿವೀಲ್​ ಮಾಡಿರಲಿಲ್ಲ. ಈಗ ‘ಮಾರ್ಟಿನ್​’ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, 2022ರ ಸೆಪ್ಟೆಂಬರ್ 30ರಂದು ಸಿನಿಮಾ ಬಿಡುಗಡೆ ಆಗಲಿದೆ.

ಇಂದು (ಏಪ್ರಿಲ್​ 10) ರಾಮ ನವಮಿ. ಧ್ರುವ ಸರ್ಜಾ ಕುಟುಂಬ ಆಂಜನೇಯನ ಭಕ್ತರು. ಈ ಕಾರಣಕ್ಕೆ ರಾಮ ನವಮಿ ಹಬ್ಬದ ದಿನದಂದು ‘ಮಾರ್ಟಿನ್​’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಮಾಡಲಾಗಿದೆ. ಮೋಷನ್ ಪೋಸ್ಟರ್​ ಕೂಡ ಹಂಚಿಕೊಳ್ಳಲಾಗಿದ್ದು, ಧ್ರುವ ಅವರು ಮಳೆಯ ಕೆಳಗೆ ನಿಂತಿದ್ದಾರೆ. ಅವರ ತೋಳಿನ ಮೇಲೆ ‘ಇಂಡಿಯನ್’ ಎಂದು ಬರೆದಿರುವ ಹಚ್ಚೆ ಹೈಲೈಟ್ ಆಗಿದೆ. ಅವರ ಕಟ್ಟುಮಸ್ತಾದ ದೇಹ ಎಲ್ಲರ ಗಮನ ಸೆಳೆದಿದೆ.

ವೈಭವಿ ಶಾಂಡಿಲ್ಯ ಅವರು ‘ಮಾರ್ಟಿನ್​’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಅವರು ಮೊದಲು ನಟಿಸಿದ್ದು ಮರಾಠಿಯ ‘ಎಕ್​ ಅಲ್ಬೇಲಾ’ ಸಿನಿಮಾದಲ್ಲಿ. ನಂತರ ಅವರಿಗೆ ತಮಿಳು ಮತ್ತು ತೆಲುಗು ಚಿತ್ರರಂಗದಿಂದ ಅವಕಾಶಗಳು ಬರಲಾರಂಭಿಸಿದವು. ‘ರಾಜ್​ ವಿಷ್ಣು’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು. ಅದಲ್ಲದೇ, ಬಹುನಿರೀಕ್ಷಿತ ‘ಗಾಳಿಪಟ 2’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇದರ ಜತೆಗೆ ‘ಮಾರ್ಟಿನ್​​’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ.

‘ಮಾರ್ಟಿನ್’ ಚಿತ್ರಕ್ಕೆ ಎ.ಪಿ. ಅರ್ಜುನ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ನಟನೆಯ ಮೊದಲ ಸಿನಿಮಾ ‘ಅದ್ದೂರಿ’ಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು ಈಗ ಮತ್ತೊಮ್ಮೆ ಧ್ರುವ ಜತೆ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: Martin: ಕಾಶ್ಮೀರದಲ್ಲಿ ‘ಮಾರ್ಟಿನ್’ ಭರ್ಜರಿ ಶೂಟಿಂಗ್; ವೈರಲ್ ಆಯ್ತು ಧ್ರುವ ಸರ್ಜಾ ಫೋಟೋಗಳು

‘ಮಾರ್ಟಿನ್’​ ಚಿತ್ರಕ್ಕೆ ವೈಭವಿ ಶಾಂಡಿಲ್ಯ ನಾಯಕಿ; ಧ್ರುವ ಸರ್ಜಾಗೆ ಜೋಡಿಯಾದ ಬಹುಭಾಷಾ ನಟಿ

Published On - 3:56 pm, Sun, 10 April 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್