
ಸಿನಿಮಾ ವಿಚಾರದಲ್ಲಿ ಧ್ರುವ ಸರ್ಜಾ (Dhruva Sarja) ಎಂದಿಗೂ ತರಾತುರಿ ಮಾಡಿದವರಲ್ಲ. ಸಾಕಷ್ಟು ಸಮಯ ತೆಗೆದುಕೊಂಡು ಒಪ್ಪಿಕೊಂಡ ಸಿನಿಮಾದ ಕೆಲಸ ಮುಗಿಸುತ್ತಾರೆ. ‘ಪೊಗರು’ ಸಿನಿಮಾದ ಗೆಲುವಿನ ಬಳಿಕ ಅವರು ‘ಮಾರ್ಟಿನ್’ ಸಿನಿಮಾ (Martin Movie) ಒಪ್ಪಿಕೊಂಡರು. ಸದ್ಯ ಆ ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದೆ. ಈಗ ಚಿತ್ರತಂಡದಿಂದ ಗುಡ್ನ್ಯೂಸ್ ಒಂದು ಸಿಕ್ಕಿದೆ. ಸಿನಿಮಾ ರಿಲೀಸ್ ದಿನಾಂಕ ಯಾವಾಗ ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ‘ಮಾರ್ಟಿನ್’ ಸಿನಿಮಾ ಸಾಕಷ್ಟು ಹೈಪ್ ಸೃಷ್ಟಿ ಮಾಡಿದೆ. ಈ ಚಿತ್ರಕ್ಕಾಗಿ ಧ್ರುವ ಸಾಕಷ್ಟು ವರ್ಕೌಟ್ ಮಾಡಿದ್ದಾರೆ. ಸಿನಿಮಾದ ಪೋಸ್ಟರ್ಗಳನ್ನು ನೋಡಿದರೆ ಅವರ ಶ್ರಮ ಎದ್ದು ಕಾಣುತ್ತದೆ. ಅವರ ಕಟ್ಟುಮಸ್ತಾದ ದೇಹ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಚಿತ್ರತಂಡ ರಿಲೀಸ್ ದಿನಾಂಕವನ್ನು ಇಲ್ಲಿಯವರೆಗೆ ರಿವೀಲ್ ಮಾಡಿರಲಿಲ್ಲ. ಈಗ ‘ಮಾರ್ಟಿನ್’ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, 2022ರ ಸೆಪ್ಟೆಂಬರ್ 30ರಂದು ಸಿನಿಮಾ ಬಿಡುಗಡೆ ಆಗಲಿದೆ.
ಇಂದು (ಏಪ್ರಿಲ್ 10) ರಾಮ ನವಮಿ. ಧ್ರುವ ಸರ್ಜಾ ಕುಟುಂಬ ಆಂಜನೇಯನ ಭಕ್ತರು. ಈ ಕಾರಣಕ್ಕೆ ರಾಮ ನವಮಿ ಹಬ್ಬದ ದಿನದಂದು ‘ಮಾರ್ಟಿನ್’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಮಾಡಲಾಗಿದೆ. ಮೋಷನ್ ಪೋಸ್ಟರ್ ಕೂಡ ಹಂಚಿಕೊಳ್ಳಲಾಗಿದ್ದು, ಧ್ರುವ ಅವರು ಮಳೆಯ ಕೆಳಗೆ ನಿಂತಿದ್ದಾರೆ. ಅವರ ತೋಳಿನ ಮೇಲೆ ‘ಇಂಡಿಯನ್’ ಎಂದು ಬರೆದಿರುವ ಹಚ್ಚೆ ಹೈಲೈಟ್ ಆಗಿದೆ. ಅವರ ಕಟ್ಟುಮಸ್ತಾದ ದೇಹ ಎಲ್ಲರ ಗಮನ ಸೆಳೆದಿದೆ.
ವೈಭವಿ ಶಾಂಡಿಲ್ಯ ಅವರು ‘ಮಾರ್ಟಿನ್’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಅವರು ಮೊದಲು ನಟಿಸಿದ್ದು ಮರಾಠಿಯ ‘ಎಕ್ ಅಲ್ಬೇಲಾ’ ಸಿನಿಮಾದಲ್ಲಿ. ನಂತರ ಅವರಿಗೆ ತಮಿಳು ಮತ್ತು ತೆಲುಗು ಚಿತ್ರರಂಗದಿಂದ ಅವಕಾಶಗಳು ಬರಲಾರಂಭಿಸಿದವು. ‘ರಾಜ್ ವಿಷ್ಣು’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು. ಅದಲ್ಲದೇ, ಬಹುನಿರೀಕ್ಷಿತ ‘ಗಾಳಿಪಟ 2’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇದರ ಜತೆಗೆ ‘ಮಾರ್ಟಿನ್’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ.
‘ಮಾರ್ಟಿನ್’ ಚಿತ್ರಕ್ಕೆ ಎ.ಪಿ. ಅರ್ಜುನ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ನಟನೆಯ ಮೊದಲ ಸಿನಿಮಾ ‘ಅದ್ದೂರಿ’ಗೆ ಆ್ಯಕ್ಷನ್-ಕಟ್ ಹೇಳಿದ್ದ ಅವರು ಈಗ ಮತ್ತೊಮ್ಮೆ ಧ್ರುವ ಜತೆ ಕೈ ಜೋಡಿಸಿದ್ದಾರೆ.
ಇದನ್ನೂ ಓದಿ: Martin: ಕಾಶ್ಮೀರದಲ್ಲಿ ‘ಮಾರ್ಟಿನ್’ ಭರ್ಜರಿ ಶೂಟಿಂಗ್; ವೈರಲ್ ಆಯ್ತು ಧ್ರುವ ಸರ್ಜಾ ಫೋಟೋಗಳು
‘ಮಾರ್ಟಿನ್’ ಚಿತ್ರಕ್ಕೆ ವೈಭವಿ ಶಾಂಡಿಲ್ಯ ನಾಯಕಿ; ಧ್ರುವ ಸರ್ಜಾಗೆ ಜೋಡಿಯಾದ ಬಹುಭಾಷಾ ನಟಿ
Published On - 3:56 pm, Sun, 10 April 22