ಧ್ರುವ ಸರ್ಜಾ ನಟನೆಯ ‘ಮಾರ್ಟಿನ್​’ ಬಗ್ಗೆ ಸಿಕ್ತು ಹೊಸ ಅಪ್​ಡೇಟ್​; ಫೆ.23ಕ್ಕೆ ಟೀಸರ್ ರಿಲೀಸ್

Martin Movie Teaser: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ಕಳೆದ ಸೆಪ್ಟೆಂಬರ್ 30ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಶೂಟಿಂಗ್ ವಿಳಂಬ ಆಗಿದ್ದರಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್​’ ಬಗ್ಗೆ ಸಿಕ್ತು ಹೊಸ ಅಪ್​ಡೇಟ್​; ಫೆ.23ಕ್ಕೆ ಟೀಸರ್ ರಿಲೀಸ್
ಧ್ರುವ ಸರ್ಜಾ
Follow us
ರಾಜೇಶ್ ದುಗ್ಗುಮನೆ
|

Updated on:Feb 15, 2023 | 11:14 AM

ಧ್ರುವ ಸರ್ಜಾ (Dhruva Sarja) ಅವರ ‘ಪೊಗರು’ ಸಿನಿಮಾ ತೆರೆಗೆ ಬಂದು ಎರಡು ವರ್ಷ ಕಳೆದಿದೆ. ಈ ಚಿತ್ರ ತೆರೆಗೆ ಬಂದ ಬಳಿಕ ಅವರು ‘ಮಾರ್ಟಿನ್​’ ಸಿನಿಮಾ (Martin Movie) ಒಪ್ಪಿಕೊಂಡರು. ಕಾರಣಾಂತರಗಳಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಿವೆ. ಎ.ಪಿ. ಅರ್ಜುನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಫೆಬ್ರವರಿ 23ಕ್ಕೆ ಚಿತ್ರದ ಟೀಸರ್ ರಿಲೀಸ್ ಆಗಲಿದೆ. ಈ ವಿಚಾರವನ್ನು ಚಿತ್ರತಂಡದವರು ಅಧಿಕೃತ ಮಾಡಿದ್ದಾರೆ.

‘ಮಾರ್ಟಿನ್’ ಚಿತ್ರವನ್ನು ವಾಸವಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಉದಯ್ ಕೆ.ಮೆಹ್ತಾ ನಿರ್ಮಾಣ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ಕಳೆದ ಸೆಪ್ಟೆಂಬರ್ 30ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಶೂಟಿಂಗ್ ವಿಳಂಬ ಆಗಿದ್ದರಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಈಗ ಟೀಸರ್ ರಿಲೀಸ್ ಆಗುತ್ತಿರುವ ವಿಚಾರ ತಿಳಿದು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಪೋಸ್ಟರ್ ಮೂಲಕ ಗಮನ ಸೆಳೆದಿರುವ ಈ ಸಿನಿಮಾ ಈಗ ಟೀಸರ್ ಮೂಲಕ ಸದ್ದು ಮಾಡಲು ರೆಡಿ ಆಗಿದೆ.

ಎ.ಪಿ. ಅರ್ಜುನ್ ಹಾಗೂ ಧ್ರುವ ಇಬ್ಬರೂ ‘ಅದ್ದೂರಿ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇಬ್ಬರೂ ಮತ್ತೊಮ್ಮೆ ಒಂದಾಗಿರುವುದಕ್ಕೆ ಸಾಕಷ್ಟು ನಿರೀಕ್ಷೆ ಇದೆ. ‘ಮಾರ್ಟಿನ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹೊಸ ರಿಲೀಸ್ ದಿನಾಂಕ ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ವೈಭವಿ ಶಾಂಡಿಲ್ಯ ಅವರು ‘ಮಾರ್ಟಿನ್​’ ಚಿತ್ರಕ್ಕೆ ನಾಯಕಿ ಆಗಿದ್ದಾರೆ.

ಡಿಕೆ ಬಗ್ಗೆ ನಿರೀಕ್ಷೆ

ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಅವರು ‘ಕೆಡಿ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇದ್ದಾರೆ. ಈ ಚಿತ್ರದ ಟೈಟಲ್ ಅನಾವರಣ ಅದ್ದೂರಿಯಾಗಿ ಆಗಿತ್ತು. ಈ ಚಿತ್ರದ ಶೂಟಿಂಗ್ ಕೆಲಸಗಳು ಭರದಿಂದ ಸಾಗುತ್ತಿವೆ. ‘ಮಾರ್ಟಿನ್’ ರಿಲೀಸ್ ಆದ ಬಳಿಕ ಅವರು ಸಂಪೂರ್ಣವಾಗಿ ‘ಕೆಡಿ’ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:14 am, Wed, 15 February 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್