AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ ಪತ್ನಿ ಪ್ರೇರಣಾ ಸೀಮಂತ ಶಾಸ್ತ್ರ; ವಿಡಿಯೋ ನೋಡಿ ಶುಭ ಕೋರಿದ ಅಭಿಮಾನಿಗಳು

ಇತ್ತೀಚೆಗೆ ಎಲ್ಲ ಕಡೆಗಳಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಖುಷಿಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಧ್ರುವ ಸರ್ಜಾ ಅವರ ಕುಟುಂಬದರು ಪ್ರೇರಣಾಗೆ ಸೀಮಂತ ಶಾಸ್ತ್ರ ನೆರವೇರಿಸಿದ್ದಾರೆ. ಹಾಗಾಗಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿ ತಮ್ಮ ಪಾಲಿಗೆ ತುಂಬ ಸ್ಪೆಷಲ್​ ಆಗಿತ್ತು ಎಂದು ಧ್ರುವ ಸರ್ಜಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಧ್ರುವ ಸರ್ಜಾ ಪತ್ನಿ ಪ್ರೇರಣಾ ಸೀಮಂತ ಶಾಸ್ತ್ರ; ವಿಡಿಯೋ ನೋಡಿ ಶುಭ ಕೋರಿದ ಅಭಿಮಾನಿಗಳು
ಪ್ರೇರಣಾ ಸೀಮಂತ ಶಾಸ್ತ್ರ
ಮದನ್​ ಕುಮಾರ್​
|

Updated on: Sep 11, 2023 | 3:09 PM

Share

ಸ್ಯಾಂಡಲ್​ವುಡ್​ನ ಖ್ಯಾತ ನಟ ಧ್ರುವ ಸರ್ಜಾ (Dhruva Sarja) ಅವರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣ ಆಗಿದೆ. ಅವರ ಪತ್ನಿ ಪ್ರೇರಣಾ ಈಗ ತುಂಬು ಗರ್ಭಿಣಿ. ಧ್ರುವ ಸರ್ಜಾ ಮತ್ತು ಪ್ರೇರಣಾ (Prerana) ಅವರು ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ತಾವು ಮತ್ತೆ ತಂದೆ ಆಗುತ್ತಿರುವ ವಿಷಯವನ್ನು ಧ್ರುವ ಸರ್ಜಾ ಅವರು ಇತ್ತೀಚೆಗಷ್ಟೇ ರಿವೀಲ್​ ಮಾಡಿದ್ದರು. ಈಗ ಬಹಳ ಸಂಭ್ರಮದಿಂದ ಪ್ರೇರಣಾ ಅವರ ಸೀಮಂತ ಶಾಸ್ತ್ರ (Prerana Baby Shower) ಮಾಡಲಾಗಿದೆ. ಕುಟುಂಬದವರು ಮತ್ತು ಆಪ್ತರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಧ್ರುವ ಸರ್ಜಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಶುಭ ಕೋರಿದ್ದಾರೆ.

ಇತ್ತೀಚೆಗೆ ಎಲ್ಲ ಕಡೆಗಳಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಖುಷಿಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಧ್ರುವ ಸರ್ಜಾ ಅವರ ಕುಟುಂಬದರು ಪ್ರೇರಣಾಗೆ ಸೀಮಂತ ಶಾಸ್ತ್ರ ನೆರವೇರಿಸಿದ್ದಾರೆ. ಹಾಗಾಗಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿ ತಮ್ಮ ಪಾಲಿಗೆ ತುಂಬ ಸ್ಪೆಷಲ್​ ಆಗಿತ್ತು ಎಂದು ಧ್ರುವ ಸರ್ಜಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ವಿಡಿಯೋ ಹಂಚಿಕೊಂಡ ಕೆಲವೇ ನಿಮಿಷಗಳಲ್ಲಿ ಸಾವಿರಾರು ಅಭಿಮಾನಿಗಳು ಲೈಕ್​ ಮಾಡಿದ್ದಾರೆ. ಕಮೆಂಟ್​ಗಳ ಮೂಲಕ ಶುಭಾಶಯ ತಿಳಿಸಲಾಗಿದೆ.

ಧ್ರುವ ಸರ್ಜಾ ಸಹೋದರ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದು ಆ ಕುಟುಂಬಕ್ಕೆ ಆದಂತಹ ದೊಡ್ಡ ನಷ್ಟ. ಪ್ರತಿ ಕ್ಷಣವೂ ಚಿರು ನೆನಪು ಕಾಡುತ್ತದೆ. ವಿಶೇಷ ಸಂದರ್ಭಗಳಲ್ಲಿ ಚಿರುಗೆ ಕುಟುಂಬದವರು ನಮನ ಸಲ್ಲಿಸುತ್ತಾರೆ. ಈಗ ಪ್ರೇರಣಾ ಅವರ ಸೀಮಂತ ಸಮಾರಂಭದಲ್ಲೂ ಚಿರು ನೆನಪನ್ನು ಮಾಡಿಕೊಳ್ಳಲಾಗಿದೆ. ಚಿರಂಜೀವಿ ಅವರ ಸಮಾಧಿ ಇರುವ ಫಾರ್ಮ್​ ಹೌಸ್​ನಲ್ಲೇ ಸೀಮಂತ ನಡೆದಿದೆ. ಇಡೀ ಫಾರ್ಮ್​ ಹೌಸ್​ ಸಿಂಗಾರಗೊಂಡಿತ್ತು. ಬಂಧು-ಬಳಗದವರು ಆಗಮಿಸಿ ಪ್ರೇರಣಾಗೆ ಆಶೀರ್ವಾದ ಮಾಡಿದ್ದಾರೆ.

ಧ್ರುವ ಸರ್ಜಾ ಬರ್ತ್​ಡೇ ದಿನ ರಿಲೀಸ್ ಆಗಲಿದೆ ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ ‘ರಾಜಮಾರ್ತಾಂಡ’

‘ಧ್ರುವ ಅವರು ಈ ಕಾರ್ಯಕ್ರಮವನ್ನು ದೊಡ್ಡ ಹೋಟೆಲ್​ನಲ್ಲಿ ಮಾಡಬಹುದು. ಆದರೆ ಅವರು ಅಣ್ಣನ ಸಮಾಧಿ ಹತ್ತಿರ ಮಾಡಿದ್ದಾರೆ. ಅವರಿಗೆ ಅಣ್ಣನ ಮೇಲೆ ಇರುವ ಪ್ರೀತಿ ಯಾವಾಗಲೂ ಶಾಶ್ವತ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಧ್ರುವ ಸರ್ಜಾ ಅವರು ಬ್ಯುಸಿ ಆಗಿದ್ದಾರೆ. ‘ಮಾರ್ಟಿನ್​’, ‘ಕೆಡಿ’ ಮುಂತಾದ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಧ್ರುವ ಮತ್ತು ಪ್ರೇರಣಾ ಅವರು 2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ದಂಪತಿಗೆ 2022ರ ಅಕ್ಟೋಬರ್​ನಲ್ಲಿ ಹೆಣ್ಣು ಮಗು ಜನಿಸಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ