AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ

ಬಿಡುಗಡೆಗೂ ಮುನ್ನವೇ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ನಡುವೆ ಪೈಪೋಟಿ ಶುರುವಾಗಿದೆ. ಈ ಎರಡೂ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆಮಾಡಿದ್ದು, ಕಾತುರ ಹೆಚ್ಚಾಗಿದೆ. ಎರಡರಲ್ಲಿ ಯಾವ ಸಿನಿಮಾಗೆ ಹೆಚ್ಚು ಕಲೆಕ್ಷನ್ ಆಗಲಿದೆ ಎಂಬುದನ್ನು ತಿಳಿಯಲು ಸಿನಿಪ್ರಿಯರು ಕಾಯುತ್ತಿದ್ದಾರೆ.

ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ
Yash, Ranveer Singh
ಮದನ್​ ಕುಮಾರ್​
|

Updated on: Mar 02, 2026 | 3:44 PM

Share

ಈ ವರ್ಷದ ಬಹುದೊಡ್ಡ ಬಾಕ್ಸ್ ಆಫೀಸ್ ಕ್ಲ್ಯಾಶ್ ಮಾರ್ಚ್ 19ರಂದು ನಡೆಯಲಿದೆ. ಅಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಬಿಡುಗಡೆ ಆಗಲಿವೆ. ಎರಡೂ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಇದೆ. ಭಾರತದಲ್ಲಿ ಈ ಸಿನಿಮಾಗಳ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಇನ್ನೂ ಆರಂಭ ಆಗಿಲ್ಲ. ಆದರೆ ಅಮೆರಿಕದಲ್ಲಿ ಬುಕಿಂಗ್ ಶುರುವಾಗಿದೆ. ವರದಿಗಳ ಪ್ರಕಾರ, ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾಗಿಂತಲೂ ರಣವೀರ್ ಸಿಂಗ್ ಅಭಿನಯದ ‘ಧುರಂದರ್ 2’ ಸಿನಿಮಾ ಸದ್ಯಕ್ಕೆ ಮುನ್ನಡೆ ಸಾಧಿಸಿದೆ.

Sacnilk ವರದಿ ಪ್ರಕಾರ, ‘ಧುರಂಧರ್ 2’ ಚಿತ್ರಕ್ಕೆ ಮಾರ್ಚ್ 2ರ ತನಕ ಅಮೆರಿಕದ 151 ಲೊಕೇಷನ್​​ಗಳಲ್ಲಿ 209 ಶೋಗಳ ಟಿಕೆಟ್ ಬುಕಿಂಗ್ ಶುರುವಾಗಿದೆ. ಆ ಪೈಕಿ 1953 ಟಿಕೆಟ್​ಗಳು ಮಾರಾಟ ಆಗಿವೆ. ಇದರಿಂದ ಚಿತ್ರಕ್ಕೆ ಅಂದಾಜು 30 ಲಕ್ಷ ರೂಪಾಯಿ ಆದಾಯ ಬಂದಿದೆ. ‘ಧುರಂಧರ್ 2’ ಚಿತ್ರಕ್ಕೆ ವಿದೇಶಿ ಪ್ರೇಕ್ಷಕರಲ್ಲಿ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಈ ಸಂಖ್ಯೆಗಳೇ ಸಾಕ್ಷಿಯಾಗಿವೆ.

ಇನ್ನು, ‘ಟಾಕ್ಸಿಕ್’ ಸಿನಿಮಾಗೆ ಅಮೆರಿಕದ 81 ಲೊಕೇಷನ್​​ಗಳ 122 ಶೋಗಳಿಗೆ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಆ ಪೈಕಿ ಕೇವಲ 189 ಟಿಕೆಟ್​ಗಳು ಬುಕ್ ಆಗಿವೆ. ಅದರಿಂದ ಅಂದಾಜು 3.3 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ. ಈ ಸಂಖ್ಯೆಗಳನ್ನು ಗಮನಿಸಿದರೆ ಅಮೆರಿಕದಲ್ಲಿ ‘ಟಾಕ್ಸಿಕ್’ ಚಿತ್ರಕ್ಕಿಂತಲೂ ‘ಧುರಂಧರ್ 2’ ಸಿನಿಮಾಗೆ ಕ್ರೇಜ್ ಜಾಸ್ತಿ ಇದೆ ಎಂಬುದು ತಿಳಿಯುತ್ತಿದೆ.

ಆದರೆ ಇದೇ ಅಂತಿಮವಲ್ಲ. ಸಿನಿಮಾದ ಬಿಡುಗಡೆಗೆ ಇನ್ನೂ 17 ದಿನಗಳು ಬಾಕಿ ಇವೆ. ಟ್ರೇಲರ್ ರಿಲೀಸ್ ಆಗುತ್ತಿದ್ದಂತೆಯೇ ಗೇಮ್ ಬದಲಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ‘ಧುರಂಧರ್ 2’ ಚಿತ್ರಕ್ಕಿಂತಲೂ ‘ಟಾಕ್ಸಿಕ್’ ಸಿನಿಮಾಗೆ ಹೆಚ್ಚು ಅಡ್ವಾನ್ಸ್ ಟಿಕೆಟ್ ಬುಕಿಂಗ್ ಆಗಲೂಬಹುದು. ಹೆಚ್ಚಿನ ಅಪ್​ಡೇಟ್ ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ

‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿದ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಇನ್ನು, ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದರಿಂದ ಸಹಜವಾಗಿಯೇ ಇದರ ಸೀಕ್ವೆಲ್ ನೋಡಲು ಜನರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ