‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​

ಪೃಥ್ವಿ ಅಂಬಾರ್​ ಅವರು ‘ದಿಯಾ’ ಬಳಿಕ ಮತ್ತೆ ಪ್ರೇಮ್​ ಕಹಾನಿ ಇರುವ ಒಂದು ರೊಮ್ಯಾಂಟಿಕ್ ಚಿತ್ರದಲ್ಲಿ ನಟಿಸಿದ್ದಾರೆ. ‘ಜೂನಿ’ ಎಂಬುದು ಈ ಸಿನಿಮಾದ ಶೀರ್ಷಿಕೆ. ವೈಭವ್ ಮಹಾದೇವ್ ನಿರ್ದೇಶನ ಮಾಡಿದ್ದಾರೆ. ಪೃಥ್ವಿ ಅಂಬಾರ್​ ಜೊತೆ ರಿಷಿಕಾ ನಾಯಕ್ ತೆರೆ ಹಂಚಿಕೊಂಡಿದ್ದಾರೆ. 2024ರ ಜನವರಿಯಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ.

‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​
ಜೂನಿ ಸಿನಿಮಾ ಫಸ್ಟ್​ ಲುಕ್​
Follow us
ಮದನ್​ ಕುಮಾರ್​
|

Updated on: Nov 29, 2023 | 12:25 PM

ನಟ ಪೃಥ್ವಿ ಅಂಬಾರ್​ (Pruthvi Ambaar) ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. 2020ರಲ್ಲಿ ‘ದಿಯಾ’ ಸಿನಿಮಾ ಮೂಲಕ ಅವರಿಗೆ ಸಿಕ್ಕ ಜನಪ್ರಿಯತೆ ಅಪಾರ. ತ್ರಿಕೋನ ಪ್ರೇಮಕಥೆ ಹೊಂದಿದ್ದ ಆ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಪೃಥ್ವಿ ಅಂಬಾರ್​ ಅವರಿಗೆ ಸಾಲು ಸಾಲು ಅವಕಾಶಗಳು ಹರಿದುಬರಲು ಆರಂಭ ಆದವು. ಪರಭಾಷೆಯಲ್ಲೂ ಅವರಿಗೆ ಚಾನ್ಸ್​ ಸಿಗುತ್ತಿದೆ. ಕನ್ನಡದಲ್ಲಿ ಹೊಸ ಹೊಸ ತಂಡಗಳ ಜೊತೆ ಪೃಥ್ವಿ ಅಂಬಾರ್​ ಸಿನಿಮಾ (Pruthvi Ambaar Movies) ಮಾಡುತ್ತಿದ್ದಾರೆ. ಈಗ ಅವರು ಇನ್ನೊಂದು ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾಗೆ ‘ಜೂನಿ’ (Juny) ಎಂದು ಟೈಟಲ್​ ಇಡಲಾಗಿದೆ.

ಪೃಥ್ವಿ ಅಂಬಾರ್ ಅಭಿನಯಿಸಿರುವ ‘ಜೂನಿ’ ಸಿನಿಮಾಗೆ ಯುವ ಪ್ರತಿಭೆ ವೈಭವ್ ಮಹಾದೇವ್ ಅವರು ನಿರ್ದೇಶನ ಮಾಡಿದ್ದಾರೆ. ಮುಖ್ಯ ಭೂಮಿಕೆ ನಿಭಾಯಿಸಿರುವ ಪೃಥ್ವಿಗೆ ರಿಷಿಕಾ ನಾಯಕ್ ಅವರು ಜೋಡಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಡಿಫರೆಂಟ್​ ಆಗಿರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ಸಿನಿಮಾದ ಶೀರ್ಷಿಕೆ ಭಿನ್ನವಾಗಿದೆ. ಶೀರ್ಷಿಕೆಯ ಅರ್ಥ ಏನು ಎಂದು ತಿಳಿಯಲು ಸಿನಿಪ್ರಿಯರಲ್ಲಿ ಕುತೂಹಲ ಮೂಡಿದೆ.

ಇದನ್ನೂ ಓದಿ: ವಿಷ್ಣುವರ್ಧನ್‌ ಅಭಿಮಾನಿಗಳಿಂದ ಡಿಸೆಂಬರ್‌ 17ಕ್ಕೆ ನಡೆಯಲಿದೆ ಬೃಹತ್‌ ಪ್ರತಿಭಟನೆ; ಕಾರಣ ಏನು?

ಈ ಮೊದಲು ‘ಜನ್ನಿ’ ಎಂಬ ಕಿರುಚಿತ್ರವನ್ನು ವೈಭವ್ ಮಹಾದೇವ್ ನಿರ್ದೇಶಿಸಿದ್ದರು. ಈಗ ‘ಜೂನಿ’ ಸಿನಿಮಾಗೆ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ. ಪ್ರಾಗ್ ಫಿಲ್ಮ್ ಸ್ಕೂಲ್​ನಲ್ಲಿ ನಿರ್ದೇಶನದ ಕೋರ್ಸ್ ಮುಗಿಸಿ ಬಂದಿರುವ ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ‘ಜೂನಿ’ ತಂಡದಿಂದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಶೀಘ್ರದಲ್ಲೇ ಟೀಸರ್, ಟ್ರೇಲರ್ ಮತ್ತು ಹಾಡುಗಳು ಕೂಡ ರಿಲೀಸ್​ ಆಗಲಿವೆ.

ಇದನ್ನೂ ಓದಿ: ತೆಲುಗು ಯುವನಟನ ‘ಹರೋಮ್ ಹರ’ ಸಿನಿಮಾ ಟೀಸರ್ ರಿಲೀಸ್ ಮಾಡಲಿರುವ ಸುದೀಪ್

ಒಂದು ರೊಮ್ಯಾಂಟಿಕ್ ಕಥೆಯನ್ನು ‘ಜೂನಿ’ ಸಿನಿಮಾ ಹೊಂದಿರಲಿದೆ. ‘ದಿಯಾ’ ಬಳಿಕ ಮತ್ತೊಮ್ಮೆ ಲವ್​ ಸ್ಟೋರಿ ಸಿನಿಮಾದಲ್ಲಿ ಪೃಥ್ವಿ ನಟಿಸಿರುವುದು ವಿಶೇಷ. ‘ತ್ರಿಶೂಲ ಕ್ರಿಯೇಷನ್’ ಮೂಲಕ ಮೋಹನ್ ಕುಮಾರ್ ಎಸ್. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶ್ರೇಯಸ್ ವೈ.ಎಸ್. ಅವರು ಸಹ-ನಿರ್ಮಾಪಕರಾಗಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮುಗಿಸಿರುವ ‘ಜೂನಿ’ ಚಿತ್ರತಂಡ 2024ರ ಜನವರಿಯಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುಲು ತಯಾರಿ ನಡೆಸುತ್ತಿದೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ನಾರಾಯಣ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ ಮಾಡಿದ್ದಾರೆ. ನವೀನ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್