‘ಎಡಗೈಯೇ ಅಪಘಾತಕ್ಕೆ ಕಾರಣ’ ಎನ್ನುತ್ತ ಶೂಟಿಂಗ್​ ಶುರು ಮಾಡಿದ ದಿಗಂತ್​ ಮಂಚಾಲೆ

Diganth Manchale New Movie: ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಬೆಂಗಳೂರಿನಲ್ಲಿ ಮುಹೂರ್ತ ಮಾಡಲಾಗಿದೆ. ಈ ಸಿನಿಮಾದಲ್ಲಿ ದಿಗಂತ್​ ಮಂಚಾಲೆ ಅವರಿಗೆ ಜೋಡಿಯಾಗಿ ಧನೂ ಹರ್ಷ ನಟಿಸಲಿದ್ದಾರೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಎನ್ನುತ್ತ ಶೂಟಿಂಗ್​ ಶುರು ಮಾಡಿದ ದಿಗಂತ್​ ಮಂಚಾಲೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ತಂಡ
Follow us
TV9 Web
| Updated By: ಮದನ್​ ಕುಮಾರ್​

Updated on:Sep 09, 2022 | 3:34 PM

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟ ದಿಗಂತ್​ ಮಂಚಾಲೆ (Diganth Manchale) ಬ್ಯುಸಿ ಆಗಿದ್ದಾರೆ. ಈ ವರ್ಷ ಅವರಿಗೆ ಸಖತ್​ ಸ್ಪೆಷಲ್​. ಇತ್ತೀಚೆಗಷ್ಟೇ ತೆರೆಕಂಡ ‘ಗಾಳಿಪಟ 2’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಅದರಲ್ಲಿ ಅವರು ನಿಭಾಯಿಸಿದ ಪಾತ್ರ ಎಲ್ಲರಿಗೂ ಇಷ್ಟ ಆಗಿದೆ. ಅಭಿಮಾನಿಗಳಿಂದ ದಿಗಂತ್​ ನಟನೆಗೆ ಸಖತ್​ ಮೆಚ್ಚುಗೆ ಸಿಕ್ಕಿದೆ. ಆ ಗೆಲುವಿನ ಖುಷಿ ನಡುವೆಯೇ ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಹೌದು, ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಚಿತ್ರದಲ್ಲಿ ದಿಗಂತ್​ ನಾಯಕನಾಗಿ ನಟಿಸುತ್ತಿದ್ದು, ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಅಲ್ಲದೇ ಶೂಟಿಂಗ್​ ಕೂಡ ಪ್ರಾರಂಭ ಆಗಿದೆ. ಶೀರ್ಷಿಕೆ ಮೂಲಕವೇ ಈ ಸಿನಿಮಾ ಸಖತ್​ ನಿರೀಕ್ಷೆ ಮೂಡಿಸಿದೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ಒಂದು ಭಿನ್ನವಾದ ಕಥೆ ಇರಲಿದೆ. ವಿಶ್ವ ಎಡಚರ ದಿನದಂದು ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಲಾಗಿತ್ತು. ಈಗ ಬೆಂಗಳೂರಿನ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಸಸ್ಪೆನ್ಸ್ ಥ್ರಿಲ್ಲರ್, ಡಾರ್ಕ್​ ಕಾಮಿಡಿ ಪ್ರಕಾರದ ಈ ಚಿತ್ರಕ್ಕೆ ಸಮರ್ಥ್ ಬಿ. ಕಡ್ಕೋಲ್ ನಿರ್ದೇಶನ ಮಾಡಲಿದ್ದು, ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ದಿಗಂತ್ ಅವರಿಗೆ ಜೋಡಿಯಾಗಿ ಹೊಸ ನಟಿ ಧನೂ ಹರ್ಷ ನಟಿಸಲಿದ್ದಾರೆ.

ಬೆಂಗಳೂರಿನಲ್ಲಿ ಮುಹೂರ್ತ ಮಾಡಿಕೊಂಡ ಬೆನ್ನಲ್ಲೇ ಇಂದಿನಿಂದ (ಸೆಪ್ಟೆಂಬರ್​ 9) ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಚಿತ್ರೀಕರಣ ಆರಂಭ ಆಗಿದೆ. ಅಭಿಮನ್ಯು ಸದಾನಂದ್ ಛಾಯಾಗ್ರಹಣ ಮಾಡುತ್ತಿದ್ದಾರೆ. ರಾಹುಲ್ ವಿ, ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಬರೆದಿದ್ದಾರೆ. ದಿಗಂತ್ ಅವರ ವೃತ್ತಿಜೀವನದಲ್ಲಿ ಇದೊಂದು ಭಿನ್ನ ಸಿನಿಮಾ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
Actor Diganth: ದಿಗಂತ್​ ಈಗ ಹೇಗಿದ್ದಾರೆ? ಗಾಯದ ಬಗ್ಗೆ ವೈದ್ಯರು ಹೇಳಿದ್ದೇನು?
Image
Actor Diganth: ದಿಗಂತ್​ಗೆ ಗಂಭೀರ ಗಾಯ: ಏರ್​ಲಿಫ್ಟ್​ ಮೂಲಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್​
Image
Actor Diganth: ಅಷ್ಟಕ್ಕೂ ನಟ ದಿಗಂತ್​ಗೆ ಆಗಿದ್ದೇನು?
Image
ದಿಗಂತ್​ ಖಾಸಗಿ ಜೀವನದ ಬಗ್ಗೆ ಜನ ಗೂಗಲ್​ನಲ್ಲಿ ಹುಡುಕಿದ ಪ್ರಶ್ನೆಗಳಿಗೆ ಅವರೇ ಕೊಟ್ರು ನೇರ ಉತ್ತರ

ಗಮನಿಸಬೇಕಾದ ವಿಚಾರ ಏನೆಂದರೆ, ಪ್ರಪಂಚದಲ್ಲಿ ಹಲವು ವಿಷಯಗಳನ್ನು ಬಲಗೈ ಬಳಕೆಗೆ ಅನುಕೂಲ ಆಗುವಂತೆ ವ್ಯವಸ್ಥೆ  ಮಾಡಲಾಗಿರುತ್ತದೆ. ಆದರೆ ಎಡಗೈ ಬಳಕೆದಾರರ ಸಂಖ್ಯೆ ಬಹಳ ಕಡಿಮೆ ಇದೆ. ಇದರಿಂದ ಅವರಿಗೆ ಒಂದಷ್ಟು ತೊಂದರೆಗಳು ಆಗುತ್ತಿವೆ. ಅದರ ಬಗೆಗಿನ ಕಥೆ ಇದಾಗಿದ್ದು, ಶೀಘ್ರದಲ್ಲೇ ಇನ್ನುಳಿದ ಕಲಾವಿದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

ಜೂನ್​ ತಿಂಗಳಲ್ಲಿ ದಿಗಂತ್​ ಅವರು ಕುತ್ತಿಗೆಗೆ ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಅವರ ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳ ಪ್ರಾರ್ಥಿಸಿದ್ದರು. ಕೆಲವೇ ದಿನಗಳಲ್ಲಿ ದಿಗಂತ್​ ಮತ್ತೆ ಫಿಟ್​ ಆ್ಯಂಡ್​ ಫೈನ್​ ಆಗಿ ಕಾಣಿಸಿಕೊಂಡಿದ್ದು ಮಾತ್ರವಲ್ಲದೇ ಚಿತ್ರೀಕರಣದಲ್ಲೂ ಭಾಗಿ ಆಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:34 pm, Fri, 9 September 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ