‘ಎಡಗೈ ಅಪಘಾತಕ್ಕೆ ಕಾರಣ’ ಟೀಸರ್ ಬಿಡುಗಡೆಗೆ ಸಿದ್ಧ: ದಿಗಂತ್ಗೆ ಕಿಚ್ಚನ ಬಲ
Diganth-Sudeep: ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ.
ದಿಗಂತ್ರ (Diganth) ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ರೆಡಿಯಾಗುತ್ತಿವೆ. ಅದರಲ್ಲಿ ಪ್ರಮುಖವಾದುದು ‘ಎಡಗೈ ಅಪಘಾತಕ್ಕೆ ಕಾರಣ’. ತನ್ನ ಭಿನ್ನ ಹೆಸರಿಂದಲೂ ಸಾಕಷ್ಟು ಕುತೂಹಲವನ್ನು ಈ ಸಿನಿಮಾ ಕೆರಳಿಸಿದೆ. ಸಾಕಷ್ಟು ಸಮಯದಿಂದ ಈ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿತ್ತು, ಇದೀಗ ಸಿನಿಮಾದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದ್ದು, ಕಿಚ್ಚ ಸುದೀಪ್ (Kichcha Sudeep) ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ.
ಎಡಗೈ ಬಳಸುವವರ ಕಥೆ ಆಧಾರಿತ ಸಿನಿಮಾ ‘ಎಡಗೈಯೇ ಅಪಘಾತಕ್ಕೆ ಕಾರಣ’. ಸಿನಿಮಾದ ಟೀಸರ್ ಡಿಸೆಂಬರ್ 28ಕ್ಕೆ ಬಿಡುಗಡೆ ಆಗಲಿದ್ದು, ಸಿನಿಮಾದ ಟೀಸರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಲಿರುವುದು ವಿಶೇಷ. ಆ ಮೂಲಕ ದಿಗಂತ್ ಸಿನಿಮಾಗೆ ಸಾಥ್‌ಕೊಡಲಿದ್ದಾರೆ ಅಭಿನಯ ಚಕ್ರವರ್ತಿ.
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಸಮರ್ಥ್ ಬಿ ಕಡಕೊಳ್ ನಿರ್ದೇಶನ ಮಾಡಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಈ ಸಿನಿಮಾದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗಂತ್ಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದಾರೆ. ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ:‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡಕ್ಕೆ ನಿರೂಪ್ ಭಂಡಾರಿ ಎಂಟ್ರಿ; ಸ್ವಾಗತ ಕೋರಿದ ದಿಗಂತ್
‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ