‘ಎಡಗೈಯೇ ಅಪಘಾತಕ್ಕೆ ಕಾರಣ’ ಪೋಸ್ಟರ್ ಬಿಡುಗಡೆ: ಹಿಂದೆ ನಿಂತಿರುವ ವ್ಯಕ್ತಿ ಯಾರು?

Edagai Apagathakke Karana: ದಿಗಂತ್ ನಟನೆಯ 'ಎಡಗೈ ಅಪಘಾತಕ್ಕೆ ಕಾರಣ' ಸಿನಿಮಾ ತನ್ನ ಭಿನ್ನವಾದ ಹೆಸರಿನಿಂದಲೇ ಗಮನ ಸೆಳೆಯುತ್ತಿದೆ. ದೀಪಾವಳಿ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

'ಎಡಗೈಯೇ ಅಪಘಾತಕ್ಕೆ ಕಾರಣ' ಪೋಸ್ಟರ್ ಬಿಡುಗಡೆ: ಹಿಂದೆ ನಿಂತಿರುವ ವ್ಯಕ್ತಿ ಯಾರು?
ಎಡಗೈ ಅಪಘಾತಕ್ಕೆ ಕಾರಣ
Follow us
ಮಂಜುನಾಥ ಸಿ.
|

Updated on: Nov 12, 2023 | 7:05 PM

ದಿಗಂತ್ (Diganth) ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಶೂಟಿಂಗ್ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಸಿನಿಮಾದ ಹೆಸರೇ ಬಹಳ ಕುತೂಹಲಕಾರಿಯಾಗಿದೆ. ‘ಎಡಗೈ ಅಪಘಾತಕ್ಕೆ ಕಾರಣ’ ಎಂಬುದು ಎಡಗೈ ಬಳಸುವವರ ಬಗೆಗಿನ ಸಿನಿಮಾನಾ? ಅಥವಾ ತಮಗೆ ತಮ್ಮ ಅಂಗದ ಮೇಲೆ ಅಥವಾ ಕೈಯ್ಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ ಮಾಡುವ ಅಪರಾಧ ಸರಣಿಯ ಸಿನಿಮಾನಾ ಹೀಗೆ ಹಲವು ಅನುಮಾನಗಳನ್ನು ಸಿನಿಮಾದ ಹೆಸರು ಮೂಡಿಸುತ್ತಿದೆ.

ಈ ಕುತೂಹಲಕಾರಿ ಸಿನಿಮಾವನ್ನು ಯುವ ನಿರ್ದೇಶಕ ಸಮರ್ಥ್‌ ಕಡಕೋಳ್‌ ನಿರ್ದೇಶನ ಮಾಡಿದ್ದಾರೆ. ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಟೇಬಲ್ ಹಿಂಬದಿಯಲ್ಲಿ ಬಚ್ಚಿಟ್ಟುಕೊಂಡು ಕುಳಿತಿರುವ ನಾಯಕ ಹಾಗೂ ನಾಯಕಿ ಚಿತ್ರ ಪೋಸ್ಟರ್​ನಲ್ಲಿದೆ. ಆದರೆ ಅವರು ಬಚ್ಚಿಟ್ಟುಕೊಂಡಿರುವ ಟೇಬಲ್​ ಹಿಂದೆ ವ್ಯಕ್ತಿಯೋರ್ವ ನಿಂತಿದ್ದಾರೆ. ಆ ವ್ಯಕ್ತಿಯ ಕಣ್ಣಿಗೆ ಕಾಣದಂತೆ ನಾಯಕ-ನಾಯಕಿ ಬಚ್ಚಿಟ್ಟುಕೊಂಡಿದ್ದಾರೆ ಹಾಗಾದರೆ ಅವರು ಯಾರು ಎನ್ನುವ ಕುತೂಹಲ ಪೋಸ್ಟರ್ ಮೂಡಿಸುತ್ತಿದೆ. ಅಲ್ಲದೆ ಪೋಸ್ಟರ್​ನಲ್ಲಿ ದಿಗಂತ್​ರ ಎಡಗೈ ತುಸು ಹೆಚ್ಚೇ ಭಿನ್ನವಾಗಿ ಕಾಣುತ್ತಿದೆ.

ಇದನ್ನೂ ಓದಿ:ಪೌಡರ್ಗೆ ಸಿದ್ಧವಾದ ದಿಗಂತ್, ಬೆಂಬಲ ನೀಡಿದ ಕಿಚ್ಚ ಸುದೀಪ್

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಕ್ಕೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ ಆಗಿದೆ. ಸಿನಿಮಾದಲ್ಲಿ ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಅಂಶಗಳು ಇರಲಿವೆ. ಸಿನಿಮಾದ ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಸಿನಿಮಾ ಇದಾಗಿದೆ. ಸಿನಿಮಾದಲ್ಲಿ ದಿಗಂತ್ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಹಳ ವರ್ಷಗಳ ಬಳಿಕ ದಿಗಂತ್ ಹಾಗೂ ನಿಧಿ ಸುಬ್ಬಯ್ಯ ಒಟ್ಟಿಗೆ ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಮತ್ತು ಗುರುದತ್ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ. ಒಂದಷ್ಟು ಪೋಸ್ಟರ್, ಝಲಕ್ ಮೂಲಕ ಗಮನಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ