ಬೆಂಗಳೂರು: ಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಪುತ್ರಿಯ ಆರತಕ್ಷತೆ ಸಮಾರಂಭವು ಇಂದು ನೆರವೇರಿತು. ನಗರದ ಖಾಸಗಿ ಹೋಟೆಲ್ನಲ್ಲಿ ಆರತಕ್ಷತೆ ಸಮಾರಂಭವನ್ನು ಆಯೋಜಿಸಲಾಗಿತ್ತು.
ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಹಾಗೂ ಅಕ್ಷಯ್ ಡಿಸೆಂಬರ್ 28ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆರತಕ್ಷತೆಗೆ ರಾಜಕಾರಣಿಗಳು ಹಾಗೂ ಚಿತ್ರರಂಗದ ಗಣ್ಯಾತಿಗಣ್ಯರು ಆಗಮಿಸಿ ನವಜೋಡಿಗೆ ಶುಭಹಾರೈಸಿದರು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವದಂಪತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಶುಭ ಹಾರೈಸಿದರು.
Published On - 11:22 pm, Sat, 16 January 21