‘ಪತಿಯನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಇಲ್ಲ’; ದಿಲೀಪ್ ರಾಜ್ ಪತ್ನಿಯ ಭಾವುಕ ಪೋಸ್ಟ್

ನಟ-ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನದಿಂದ ಪತ್ನಿ ಶ್ರೀವಿದ್ಯಾ ಆಘಾತಕ್ಕೊಳಗಾಗಿದ್ದಾರೆ. ಪತಿಯ ನೆನಪಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಹಂಚಿಕೊಂಡಿರುವ ಅವರು, “ಮತ್ತೆ ನೋಡುವವರೆಗೂ ನನ್ನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ” ಎಂದು ಬರೆದಿದ್ದಾರೆ. ದಿಲೀಪ್ ಮತ್ತು ಶ್ರೀವಿದ್ಯಾ 'ಕೃಷ್ಣ ರುಕ್ಕು' ಧಾರಾವಾಹಿ ಸೇರಿದಂತೆ ಹಲವು ಯೋಜನೆಗಳಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು.

‘ಪತಿಯನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಇಲ್ಲ’; ದಿಲೀಪ್ ರಾಜ್ ಪತ್ನಿಯ ಭಾವುಕ ಪೋಸ್ಟ್
ಶ್ರೀವಿದ್ಯಾ-ದಿಲೀಪ್

Updated on: May 14, 2026 | 3:08 PM

ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ವಾರ್ತೆ ಅಭಿಮಾನಿಗಳಿಗೆ ಶಾಕ್ ನೀಡಿದೆ. ಪತಿಯ ಜೊತೆ ಕಳೆದ 25 ವರ್ಷಗಳಿಂದ ಸಂಸಾರ ನಡೆಸಿಕೊಂಡು ಬರುತ್ತಿದ್ದ ಪತ್ನಿ ಶ್ರೀವಿದ್ಯಾ ಅವರ ಮನಸ್ಸು ಒಡೆದುಹೋಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪತಿಯನ್ನು ಕಳೆದುಕೊಂಡ ನೋವಿನಲ್ಲೂ ಬೆಂಬಲವಾಗಿ ನಿಂತವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ದಿಲೀಪ್ ನೆನಪಿನ ಬಗ್ಗೆ ಭಾವುಕ ಸಾಲುಗಳನ್ನು ಬರೆದಿದ್ದಾರೆ.

ಪತ್ನಿ ಶ್ರೀವಿದ್ಯಾ ಅವರ ಪೋಸ್ಟ್‌ನಲ್ಲಿ ಏನಿದೆ?

‘ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ. ದಿಲೀಪ್ ಅವರು ಕಲೆ, ಸಿನಿಮಾ ಮತ್ತು ನಾವು ಇನ್ನು ಮುಂದೆ ಅನುಭವಿಸುವ ಪ್ರತಿಯೊಂದು ದಯೆಯ ರೂಪದಲ್ಲಿ ನಮ್ಮೊಂದಿಗೇ ಇರುತ್ತಾರೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ಮತ್ತೆ ನೋಡುವವರೆಗೂ ಶಾಂತಿ ಇಲ್ಲ’:

ಪತಿಯನ್ನು ಕಳೆದುಕೊಂಡ ದುಃಖವನ್ನು ವ್ಯಕ್ತಪಡಿಸುತ್ತಾ, ‘ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರಿಗೆ ಹೊಸ ಜೀವನ ಸಿಗಲಿ. ಆದರೆ ಒಂದು ವಿಷಯ ಮಾತ್ರ ಖಚಿತ – ನಾನು ಅವರನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ’ ಎಂದು ಬರೆಯುವ ಮೂಲಕ ಪತಿಯ ಮೇಲಿರುವ ಅಪಾರ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಿಲೀಪ್ ರಾಜ್ ಕೊನೆಯ ಕ್ಷಣಗಳು ಹೇಗಿತ್ತು? ಪತ್ನಿಯ ಹೋರಾಟ ಹೀಗಿತ್ತು

ಮನೆಮಾತಾಗಿದ್ದ ಜೋಡಿ:

ದಿಲೀಪ್ ರಾಜ್ ಮತ್ತು ಶ್ರೀವಿದ್ಯಾ ಕೇವಲ ದಂಪತಿಗಳಾಗಿ ಮಾತ್ರವಲ್ಲದೆ, ವೃತ್ತಿಜೀವನದಲ್ಲೂ ಪರಸ್ಪರ ಬೆಂಬಲವಾಗಿ ನಿಂತಿದ್ದರು. ಇತ್ತೀಚಿನ ‘ಕೃಷ್ಣ ರುಕ್ಕು’ ಧಾರಾವಾಹಿ ಸೇರಿದಂತೆ ಹಲವು ಯಶಸ್ವಿ ಧಾರಾವಾಹಿಗಳನ್ನು ಈ ಜೋಡಿ ಜೊತೆಯಾಗಿ ನಿರ್ಮಿಸಿತ್ತು. ದಿಲೀಪ್ ನಿಧನದ ನಂತರ ಅವರ ಪತ್ನಿಯ ಈ ಪೋಸ್ಟ್ ಕಂಡು ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us