AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆ ನೋವಿನ ಬಗ್ಗೆ ದಿಲೀಪ್​ ರಾಜ್​​ಗೆ ಮೊದಲೇ ಸಿಕ್ಕಿತ್ತು ಸೂಚನೆ?

ನಟ, ನಿರ್ಮಾಪಕ ದಿಲೀಪ್ ರಾಜ್ ಮೇ 13ರಂದು ಹೃದಯಾಘಾತದಿಂದ ನಿಧನರಾಗಿದ್ದು ಅಭಿಮಾನಿಗಳಿಗೆ ಆಘಾತ ತಂದಿದೆ. ನಟಿ ಅಭಿನಯ ಅವರು ದಿಲೀಪ್ ರಾಜ್ ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿ ನೀಡಿದ್ದು, ಅವರಿಗೆ ಬೆಳಗಿನ ಜಾವ ಫುಲ್ ಬಾಡಿ ಚೆಕಪ್ ಮಾಡಿಸಿಕೊಳ್ಳುವ ಯೋಚನೆ ಇತ್ತು. ನೋವು ಎಂದು ಹೇಳುತ್ತಿದ್ದ ದಿಲೀಪ್ ರಾಜ್ ವೈದ್ಯರ ಅಪಾಯಿಂಟ್​​ಮೆಂಟ್ ಪಡೆದಿದ್ದರೂ ಆಸ್ಪತ್ರೆಗೆ ಹೋಗುವ ಮುನ್ನವೇ ಇಹಲೋಕ ತ್ಯಜಿಸಿದರು.

ಎದೆ ನೋವಿನ ಬಗ್ಗೆ ದಿಲೀಪ್​ ರಾಜ್​​ಗೆ ಮೊದಲೇ ಸಿಕ್ಕಿತ್ತು ಸೂಚನೆ?
ದಿಲೀಪ್ ರಾಜ್
ರಾಜೇಶ್ ದುಗ್ಗುಮನೆ
|

Updated on: May 14, 2026 | 7:35 AM

Share

ನಟ ದಿಲೀಪ್ ರಾಜ್ ಅವರು ಮೇ 13ರಂದು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಸಂಭವಿಸಿತು. ಮುಂಜಾನೆಯೇ ಅವರು ತೀರಿ ಹೋದರು. ಹೃದಯಾಘಾತದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ದಿಲೀಪ್ ರಾಜ್ ಸಾವಿನ ಬಗ್ಗೆ ಒಂದು ಪ್ರಮುಖ ಅಪ್​​ಡೇಟ್ ಸಿಕ್ಕಿದೆ. ಕಿರುತೆರೆ ನಟಿ ಅಭಿನಯ ಅವರು ಒಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ದಿಲೀಪ್ ರಾಜ್ ನಟಿಸಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿತ್ತು. ದಿಲೀಪ್ ರಾಜ್ ಅವರೇ ಇದನ್ನು ನಿರ್ಮಿಸಿದ್ದರು. 2021ರ ಆಗಸ್ಟ್ 9ರಂದು ಆರಂಭ ಆಗಿ, 2024ರ ಮಾರ್ಚ್ 14ರಂದು ಧಾರಾವಾಹಿ ಕೊನೆಗೊಂಡಿತು. ಈ ಧಾರಾವಾಹಿಯಲ್ಲಿ ಅಭಿನಯ ಅವರು ನಟಿಸಿದ್ದರು. ಅವರು ಕೌಸಲ್ಯ ಹೆಸರಿನ ಪಾತ್ರ ಮಾಡಿದ್ದರು. ದಿಲೀಪ್ ಅಂತಿಮ ದರ್ಶನ ಪಡೆದು ಅಭಿನಯ ಮಾತನಾಡಿದರು.

‘ನನಗೆ ಹಿಟ್ಲರ್ ಕಲ್ಯಾಣದಲ್ಲಿ ಒಳ್ಳೆಯ ಪಾತ್ರ ನೀಡಿದ್ದ. ಆ ಬಳಿಕ ಬ್ರಹ್ಮಗಂಟು ಧಾರಾವಾಹಿಯಲ್ಲಿ ಅವಕಾಶ ಕೊಟ್ಟಿದ್ದ. ಸೆಟ್​​ಗೆ ಬರೋದೆ ಇಲ್ವಲ್ಲ ಎಂದರೆ ನೀವು ಚೆನ್ನಾಗಿ ಮಾಡಿಕೊಂಡು ಹೋಗ್ತೀರಾ ಬಿಡಿ ಎಂದು ಹೇಳುತ್ತಿದ್ದ. ನಟನೆಯನ್ನು ಹೊಗಳುತ್ತಿದ್ದ. ದೇವರು ಇಷ್ಟು ನಿಷ್ಠುರ ಆಗಬಾರದಿತ್ತು’ ಎಂದಿದ್ದಾರೆ ಅಭಿನಯ.

‘ವರ್ಕ್​ ಪ್ರೆಷರೋ ಏನೋ ಗೊತ್ತಿಲ್ಲ, ನೋವು ಎಂದು ಹೇಳುತ್ತಿದ್ದನಂತೆ. ಹೀಗಾಗಿ, ಬೆಳಿಗ್ಗೆ 8 ಗಂಟೆಗೆ ಫುಲ್ ಬಾಡಿ ಚೆಕಪ್ ಮಾಡಿಸಿಕೊಳ್ಳುವ ಆಲೋಚನೆಯೂ ಅವನಿಗೆ ಇತ್ತು. ಇದಕ್ಕಾಗಿ ವೈದ್ಯರ ಅಪಾಯಿಂಟ್​​ಮೆಂಟ್ ತೆಗೆದುಕೊಂಡಿದ್ದ. ಆದರೆ ಅವನೇ ಹೋಗಿಬಿಟ್ಟ’ ಎಂದು ಅಭಿನಯ ಹೇಳಿದ್ದಾರೆ.

ಇದನ್ನೂ ಓದಿ: ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ

ನಟ ದಿಲೀಪ್ ರಾಜ್ ಅವರ ನಿಧನದ ಸುದ್ದಿ ವರ ಅಭಿಮಾನಿಗಳಿಗೆ ಆಘಾತ ತಂದಿದೆ. ಅವರು ಹಿರಿತೆರೆ ಹಾಗೂ ಕಿರುತೆರೆ ಮೂಲಕ ಮನೆಮಾತಾಗಿದ್ದಾರೆ. ನಟನೆಯ ಜೊತೆಗೆ ಯಶಸ್ವಿ ನಿರ್ಮಾಪಕರಾಗಿಯೂ ಅವರು ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ