ಶಿವರಾಜ್​ಕುಮಾರ್​ ನಟನೆಯ ಹೊಸ ಸಿನಿಮಾಗೆ ದಿನಕರ್​ ತೂಗುದೀಪ ನಿರ್ದೇಶನ

ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ದಿನಕರ್​ ತೂಗುದೀಪ ಅವರು ಇದೇ ಮೊದಲ ಬಾರಿಗೆ ಕೈ ಜೋಡಿಸುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾಗೆ ಪ್ರಿಯದರ್ಶಿನಿ ರಾಮರೆಡ್ಡಿ ಅವರು ಕಥೆ ಬರೆದಿದ್ದಾರೆ. ‘ಬಿಂದ್ಯಾ ಮೂವೀಸ್’ ಸಂಸ್ಥೆಯ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ.

ಶಿವರಾಜ್​ಕುಮಾರ್​ ನಟನೆಯ ಹೊಸ ಸಿನಿಮಾಗೆ ದಿನಕರ್​ ತೂಗುದೀಪ ನಿರ್ದೇಶನ
ಶಿವರಾಜ್​ ಕುಮಾರ್​, ದಿನಕರ್​ ತೂಗುದೀಪ
Follow us
ಮದನ್​ ಕುಮಾರ್​
|

Updated on: Dec 31, 2023 | 12:18 PM

ನಟ ಶಿವರಾಜ್​ಕುಮಾರ್​ (Shivarajkumar) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ. ‘ಜೈಲರ್​’, ‘ಘೋಸ್ಟ್​’ ಸಿನಿಮಾಗಳ ಮೂಲಕ ರಂಜಿಸಿದ್ದ ಅವರು 2024ರಲ್ಲೂ ಭರ್ಜರಿ ಮನರಂಜನೆ ನೀಡಲಿದ್ದಾರೆ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಶಿವರಾಜ್​ಕುಮಾರ್​ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದೆ. ವಿಶೇಷ ಏನೆಂದರೆ, ಶಿವಣ್ಣ ನಟಿಸಲಿರುವ ಈ ನೂತನ ಚಿತ್ರಕ್ಕೆ ಖ್ಯಾತ ನಿರ್ದೇಶಕ ದಿನಕರ್​ ತೂಗುದೀಪ (Dinakar Thoogudeepa) ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇವರಿಬ್ಬರ ಕಾಂಬಿನೇಷನ್​ ಎಂಬ ಕಾರಣಕ್ಕೆ ಈ ಸಿನಿಮಾ ಭಾರಿ ಕೌತುಕ ಮೂಡಿಸಿದೆ.

ದಿನಕರ್ ತೂಗುದೀಪ ಅವರು ಈ ಹಿಂದೆ ‘ಜೊತೆ ಜೊತೆಯಲಿ’, ‘ನವಗ್ರಹ’, ‘ಸಾರಥಿ’ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದರು. ಇದೇ ಮೊದಲ ಬಾರಿಗೆ ಅವರು ಶಿವರಾಜ್​ಕುಮಾರ್​ ಜೊತೆ ಕೈ ಜೋಡಿಸುತ್ತಿರುವುದು ವಿಶೇಷ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ‘ಜೈಲರ್​’ ಸಿನಿಮಾದ ನರಸಿಂಹ ಪಾತ್ರದ ಮೇಲೆ ಹೊಸ ಸಿನಿಮಾ ಬರುತ್ತಾ? ಇಲ್ಲಿದೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ

ಈ ಸಿನಿಮಾಗೆ ‘ಬಿಂದ್ಯಾ ಮೂವೀಸ್’ ಸಂಸ್ಥೆಯ ಮೂಲಕ ಆರ್. ಕೇಶವ್ ಮತ್ತು ಬಿ.ಎಸ್. ಸುಧೀಂದ್ರ ಅವರು ಬಂಡವಾಳ ಹೂಡಲಿದ್ದಾರೆ. ಇದು ಪಕ್ಕಾ ಮಾಸ್ ಕಮರ್ಷಿಯಲ್ ಶೈಲಿಯ ಕಥೆಯನ್ನು ಹೊಂದಿರಲಿದೆ. ಈ ಸಿನಿಮಾಗೆ ಪ್ರಿಯದರ್ಶಿನಿ ರಾಮರೆಡ್ಡಿ ಅವರು ಕಥೆ ಬರೆದಿದ್ದಾರೆ. ಸದ್ಯಕ್ಕೆ ಪ್ರೀ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ: Shivarajkumar: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

ಶಿವರಾಜ್​ಕುಮಾರ್​ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಸದ್ಯಕ್ಕೆ ಈ ಸಿನಿಮಾದ ತಾಂತ್ರಿಕವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಸಿನಿಮಾದ ಟೈಟಲ್​ ಅನಾವರಣ ಮಾಡಲು ತಂಡ ನಿರ್ಧರಿಸಿದೆ. ನ್ಯೂ ಇಯರ್​ ಹೊಸ್ತಿಲಲ್ಲಿ ಹೊಸ ಸಿನಿಮಾ ಅನೌನ್ಸ್​ ಆಗಿದ್ದಕ್ಕೆ ಶಿವರಾಜ್​ಕುಮಾರ್ ಫ್ಯಾನ್ಸ್ ಖುಷಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ