AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ದಿನೇಶ್​ಗೆ ಇದ್ದ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ; ವೈದ್ಯರು ವಿವರಿಸಿದ್ದು ಹೀಗೆ

ಹಿರಿಯ ನಟ ದಿನೇಶ್ ಮಂಗಳೂರು ಅವರು ಆಗಸ್ಟ್ 25ರಂದು ನಿಧನರಾಗಿದ್ದಾರೆ. ಅವರು ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬ್ರೈನ್ ಸ್ಟ್ರೋಕ್ ಮತ್ತು ಮೂತ್ರಪಿಂಡದ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರ ಮಗ ಸಜನ್ ಅವರು ತಂದೆಯ ಆರೋಗ್ಯ ಸ್ಥಿತಿ ಮತ್ತು ಅವರ ಕೊನೆಯ ದಿನಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ದಿನೇಶ್ ಅವರ ನಿಧನವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಹಿರಿಯ ನಟ ದಿನೇಶ್​ಗೆ ಇದ್ದ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ; ವೈದ್ಯರು ವಿವರಿಸಿದ್ದು ಹೀಗೆ
ದಿನೇಶ್
ರಾಜೇಶ್ ದುಗ್ಗುಮನೆ
|

Updated on: Aug 25, 2025 | 3:52 PM

Share

ಹಿರಿಯ ನಟ ದಿನೇಶ್ (Dinesh) ಮಂಗಳೂರು ಅವರು ನಿಧನ ಹೊಂದಿದ್ದಾರೆ. ಕರಾವಳಿ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದ ಅವರು ನಮ್ಮ ಜೊತೆ ಇಲ್ಲವಾಗಿದ್ದಾರೆ. ಇದು ಕನ್ನಡ ಚಿತ್ರರಂಗಕ್ಕೆ ಉಂಟಾದ ದೊಡ್ಡ ನಷ್ಟ. ದಿನೇಶ್ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಹಾಗಾದರೆ ದಿನೇಶ್ ಅವರು ನಿಧನಕ್ಕೂ ಮೊದಲು ಏನೆಲ್ಲ ಸಮಸ್ಯೆ ಎದುರಿಸಿದ್ದರು? ಅವರಿಗೆ ಇದ್ದ ಸಮಸ್ಯೆ ಏನು ಎಂಬಿತ್ಯಾದಿ ಪ್ರಶ್ನೆಗೆ ಅವರ ಮಗ ಸಜನ್ ಪ್ರತಿಕ್ರಿಯೆ ನೀಡಿದ್ದಾರೆ.

‘ತಂದೆಗೆ ವರ್ಷದ ಹಿಂದೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಗಸ್ಟ್ 6ರಂದು ಅಸ್ಪತ್ರೆಗೆ ದಾಖಲು ಮಾಡಿದ್ದೆವು. ಸ್ವಲ್ಪ ದಿನದ ಬಳಿಕ ಚೇತರಿಸಿಕೊಂಡಿದ್ದರು. ವಾರದ ಹಿಂದೆ ಮತ್ತೆ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು (ಆಗಸ್ಟ್ 25) ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ’ ಎಂದು ಅವರು ವಿವರ ನೀಡಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ದಿನೇಶ್ ನಟಿಸಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಜನ್ ಸ್ಪಷ್ಟನೆ ನೀಡಿದ್ದಾರೆ. ‘ಆ ದಿನಗಳು ಚಿತ್ರದಿಂದ ನನ್ನ ತಂದೆ ನಟನೆ ಆರಂಭಿಸಿದರು. ಅದರ ಬಳಿಕ ರಿಕ್ಕಿ, ಉಳಿದವರು ಕಂಡಂತೆ, ಕೆಜಿಎಫ್ ಸೇರಿದಂತೆ ಹಲವು ಚಿತ್ರದಲ್ಲಿ ನಟಿಸಿದ್ದಾರೆ. ಕಾಂತಾರ ಚಿತ್ರದಲ್ಲಿ ನಟನೆ ಮಾಡಿಲ್ಲ. ಕಾಂತಾರ ಸೆಟ್​ಗೂ ಹೋಗಲಿಲ್ಲ’ ಎಂದು ಅವರು ಹೇಳಿದ್ದಾರೆ. ದಿನೇಶ್ ಅವರ ಬೆಂಗಳೂರಿನ ಮನೆಯಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಆಗಸ್ಟ್ 26ರ ಮಧ್ಯಾಹ್ನದವರೆಗೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ
Image
‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’; ದರ್ಶನ್ ಧರಿಸಿದ್ದ ಜಾಕೆಟ್ ಬೆಲೆ ಎಷ್ಟು?
Image
ದಿನೇಶ್​ಗಾಗಿ ಮಂಗಳೂರು ಮೀನಿನ ಅಡುಗೆ ಮಾಡಿಸಿದ್ದ ಅಣ್ಣಾವ್ರು
Image
ವಿಚ್ಛೇದನದ ಹಂತದಲ್ಲಿ ಗೋವಿಂದ ದಾಂಪತ್ಯ; ಪತಿಯಿಂದ ಮೋಸ ಆಗಿದೆ ಎಂದ ಸುನೀತಾ
Image
‘ಸು ಫ್ರಮ್ ಸೋ’ ಹಂಚಿಕೆಗೆ ಸಹಾಯ ಮಾಡಿದ್ದ ದುಲ್ಖರ್ ​ ಋಣ ತೀರಿಸಿದ ರಾಜ್

ದಿನೇಶ್ ಆರೋಗ್ಯ ಸಮಸ್ಯೆ ಬಗ್ಗೆ ವೈದ್ಯರು ಹೇಳಿದ್ದೇನು?

ಕುಂದಾಪುರದ ಸರ್ಜನ್ ಆಸ್ಪತ್ರೆಯಲ್ಲಿ ದಿನೇಶ್ ನಿಧನ ಹೊಂದಿದ್ದಾರೆ. ಸರ್ಜನ್ ಆಸ್ಪತ್ರೆಯ ಮುಖ್ಯಸ್ಥ ಡಾ. ವಿಶ್ವೇಶ್ವರ ರಾವ್ ಹೇಳಿಕೆ ನೀಡಿದ್ದಾರೆ. ‘ನಟ ದಿನೇಶ್ ಮಂಗಳೂರು ಅವರಿಗೆ 2012ರಿಂದ ಅನಾರೋಗ್ಯ ಇತ್ತು. ಗ್ಯಾಂಗ್ರಿನ್ ಆಗಿ ಬೆರಳುಗಳನ್ನು ಕಟ್ ಮಾಡಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಕಾಪಾಡಿಕೊಂಡಿದ್ದರು’ ಎಂದಿದ್ದಾರೆ ವಿಶ್ವೇಶ್ವರ್ ರಾವ್.

ಇದನ್ನೂ ಓದಿ: ದಿನೇಶ್​ಗಾಗಿ ಮಂಗಳೂರು ಮೀನಿನ ಅಡುಗೆ ಮಾಡಿಸಿದ್ದ ಅಣ್ಣಾವ್ರು

‘ವರ್ಷದ ಹಿಂದೆ ದಿನೇಶ್​ಗೆ ಸ್ಟ್ರೋಕ್ ಆಗಿತ್ತು. ದೇಹದ ಒಂದು ಭಾಗ ಕಾರ್ಯ ನಿರ್ವಹಿಸುವುದು ಸ್ಥಗಿತಗೊಳಿಸಿತ್ತು. ಫಿಜಿಯೋಥೆರಪಿ ಮಾಡಲಾಗುತ್ತಿತ್ತು. ಇತ್ತೀಚಿಗೆ ಅವರಿಗೆ ಮತ್ತೊಮ್ಮೆ ಬ್ರೈನ್ ಹ್ಯಾಮರೇಜ್ ಉಂಟಾಯಿತು. ಮೆದುಳಿನಲ್ಲಿ ರಕ್ತನಾಳ ಒಡೆದ ಕಾರಣ ಬಹು ಅಂಗಾಂಗ ವೈಫಲ್ಯ ಉಂಟಾಯಿತು. ಅವರು ಬಿಪಿ, ಡಯಾಬಿಟಿಸ್, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಕೊನೆಯದಾಗಿ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ