ಸಿನಿಮಾ ತೆರೆಗೆ ಬರುವ ಮೊದಲೇ ಕನ್ನಡದ ಹೀರೋ, ಡೈರೆಕ್ಟರ್​ ಇಬ್ಬರೂ ಕೊವಿಡ್​ಗೆ ಬಲಿ

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಈಗ ಕೊರೊನಾಗೆ ಚಿತ್ರರಂಗದಿಂದ ಮತ್ತೊಬ್ಬರು ಬಲಿಯಾಗಿದ್ದಾರೆ.

ಸಿನಿಮಾ ತೆರೆಗೆ ಬರುವ ಮೊದಲೇ ಕನ್ನಡದ ಹೀರೋ, ಡೈರೆಕ್ಟರ್​ ಇಬ್ಬರೂ ಕೊವಿಡ್​ಗೆ ಬಲಿ
ಡಿ.ಎಸ್.‌ ಮಂಜುನಾಥ್ ಮತ್ತು ಅಭಿರಾಮ್

Updated on: May 28, 2021 | 8:32 PM

ಕೊರೊನಾ ವೈರಸ್​ ಎರಡನೇ ಅಲೆಗೆ ಸ್ಯಾಂಡಲ್​ವುಡ್​ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಏಪ್ರಿಲ್​ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್​ನಿಂದ ಮೃತಪಟ್ಟಿದ್ದಾರೆ.  ಅವರಿಗೆ 34 ವರ್ಷ ವಯಸ್ಸಾಗಿತ್ತು. 

ಡಿ.ಎಸ್.‌ ಮಂಜುನಾಥ್.‌ ’ಸಂಯುಕ್ತ-2’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಮತ್ತು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಂತರ ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾವನ್ನು ನಿರ್ಮಿಸಿ ಹೆಸರು ಮಾಡಿದರು. ಸದ್ಯ ‘೦% ಲವ್‌’ ಚಿತ್ರದಲ್ಲಿ ಹೀರೋ ಆಗಿ ಕೂಡ ನಟಿಸುತ್ತಿದ್ದರು. ‘ಸಂಯುಕ್ತ 2’ ಮತ್ತು ‘೦% ಲವ್‌’ ಎರಡೂ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಅಭಿರಾಮ್.‌ ಈಗ ಅಭಿರಾಮ್‌ ಕೂಡಾ ಮಂಜುನಾಥ್‌ ಅವರನ್ನು ಹಿಂಬಾಲಿಸಿ ಹೊರಟಿದ್ದಾರೆ ಅನ್ನೋದು ಬೇಸರದ ಸಂಗತಿ.

ಅಭಿರಾಮ್​ ಕಳೆದೊಂದು ವಾರದಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು. ಆದರೆ, ಅವರು ಪರೀಕ್ಷೆ ಮಾಡಿಸಿಕೊಳ್ಳದೆ ಮನೆಯಲ್ಲೇ ಇದ್ದರು. ಆದರೆ, ಇತ್ತೀಚೆಗೆ ಉಸಿರಾಟದ ತೊಂದರೆ ಅವರಲ್ಲಿ ಹೆಚ್ಚಾಗಿತ್ತು. ಈಗ ಅವರು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಕೊವಿಡ್​ ಇದ್ದಿದ್ದರಿಂದಲೇ ಉಸಿರಾಟದ ತೊಂದರೆ ಉಂಟಾಗಿ ಹೃದಯಾಘಾತವಾಗಿದೆ ಎನ್ನಲಾಗಿದೆ. ಸಿದ್ಧಪಡಿಸಿದ ಸಿನಿಮಾ ತೆರೆಗೆ ಬರುವ ಮುನ್ನವೇ ಚಿತ್ರದ ಹೀರೋ ಮತ್ತು ಡೈರೆಕ್ಟರ್‌ ಮೃತಪಟ್ಟಿದ್ದಾರೆ ಅನ್ನೋದು ಬೇಸರದ ಸಂಗತಿ.

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು. ಈಗ ಮಂಜುನಾಥ್​ ಜತೆ ನಿರ್ದೇಶಕರು ಕೂಡ ಮೃತಪಟ್ಟಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ: KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Published On - 7:58 pm, Fri, 28 May 21

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us