AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆದ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್

ಚಯನ್ ಶೆಟ್ಟಿ ನಿರ್ದೇಶನ ಮಾಡಿರುವ ‘ಮ್ಯಾರೇಜ್ ಪಾರ್ಟಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಕಥೆ ಏನಿರಬಹುದು ಎಂಬ ಕೌತುಕವನ್ನು ಮೂಡಿಸುವ ರೀತಿಯಲ್ಲಿ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಲಿರುವ ಈ ಚಿತ್ರಕ್ಕೆ ವಿನೀತ್ ಕುಮಾರ್ ಹೀರೋ ಆಗಿದ್ದಾರೆ.

ಗಮನ ಸೆಳೆದ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್
Marriage Party First Look Poster
ಮದನ್​ ಕುಮಾರ್​
|

Updated on: Jul 14, 2026 | 10:42 PM

Share

ಮುಖ್ಯಾಂಶಗಳು

  • ‘ಮ್ಯಾರೇಜ್ ಪಾರ್ಟಿ’ ಚಿತ್ರದಲ್ಲಿ ಇರಲಿದೆ ಕಲಾವಿದರ ದಂಡು.
  • ಕರಾವಳಿ ಹಿನ್ನೆಲೆಯಲ್ಲಿ ಸಾಗುವ ಕಥೆ ಹೊಂದಿರುವ ಸಿನಿಮಾ.
  • ‘ಅಧಿಪತ್ರ’ ಬಳಿಕ ಚಯನ್ ಶೆಟ್ಟಿ ನಿರ್ದೇಶನ ಮಾಡಿರುವ ಚಿತ್ರ.

ಕರಾವಳಿ ಭಾಗದ ಕಥೆಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿವೆ. ಅಂಥ ಸಿನಿಮಾಗಳತ್ತ ಜನರು ಆಸಕ್ತಿ ತೋರಿಸುತ್ತಿದ್ದಾರೆ. ‘ಸು ಫ್ರಂ ಸೋ’ (Su From So), ‘ಕಾಂತಾರ’ ಮುಂತಾದ ಸಿನಿಮಾಗಳೇ ಈ ಮಾತಿಗೆ ಸಾಕ್ಷಿ. ಈಗ ಅದೇ ರೀತಿ ಕರಾವಳಿ ಭಾಗದ ಕಥೆಯನ್ನು ಹೊಂದಿರುವ ಇನ್ನೊಂದು ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ಯುವ ನಿರ್ದೇಶಕ ಚಯನ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಶ್ರೀ ವಾರಾಹಿ ಫಿಲ್ಮ್ಸ್’ ಬ್ಯಾನರ್ ಮೂಲಕ ಸಂತೋಷ್ ವಿ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರವೀಗ ಪ್ರೇಕ್ಷಕರ ಎದುರು ಬರಲು ಸಜ್ಜಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ.

ಚಯನ್ ಶೆಟ್ಟಿ ನಿರ್ದೇಶನದ ಎರಡನೇ ಸಿನಿಮಾ:

ಈ ಹಿಂದೆ ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಹೀರೋ ಆಗಿ ನಟಿಸಿದ್ದ ‘ಅಧಿಪತ್ರ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಚಯನ್ ಶೆಟ್ಟಿ ಅವರಿಗೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ತಮ್ಮ ನಿರ್ದೇಶನದಲ್ಲಿ ಬರುತ್ತಿರುವ ‘ಮ್ಯಾರೇಜ್ ಪಾರ್ಟಿ’ ಸಿನಿಮಾಗಾಗಿ ಅವರು ಡಿಫರೆಂಟ್ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾಮಿಡಿ ಕಹಾನಿಯನ್ನು ಜನರ ಎದುರು ಅವರು ತರುತ್ತಿದ್ದಾರೆ.

ಹೀರೋ ಆಗಿ ಬಡ್ತಿ ಪಡೆದ ವಿನೀತ್ ಕುಮಾರ್:

ಹಾಸ್ಯಪ್ರಧಾನವಾಗಿ ‘ಮ್ಯಾರೇಜ್ ಪಾರ್ಟಿ’ ಸಿನಿಮಾ ರೂಪುಗೊಂಡಿದೆ ಎಂದು ಚಿತ್ರತಂಡ ತಿಳಿಸಿದೆ. ಈಗಾಗಲೇ ಕೆಲವು ತುಳು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಗಮನ ಸೆಳೆದಿರುವ ವಿನೀತ್ ಕುಮಾರ್ ಅವರು ‘ಮ್ಯಾರೇಜ್ ಪಾರ್ಟಿ’ ಮೂಲಕ ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ಕರಾವಳಿ ಭಾಗದಲ್ಲಿ ಘಟಿಸುವ ರಸವತ್ತಾದ ಕಥೆಯೊಂದನ್ನು ಈ ಸಿನಿಮಾ ತೆರೆದಿಡಲಿದೆ.

ಇದನ್ನೂ ಓದಿ: ‘ಸು ಫ್ರಂ ಸೋ’ ಸಿನಿಮಾ ನೋಡಿ ಮೆಚ್ಚಿದ ಬಾಲಿವುಡ್ ಸ್ಟಾರ್: ರೀಮೇಕ್​ ಬಗ್ಗೆ ಚರ್ಚೆ?

ಪಾತ್ರವರ್ಗ ಮತ್ತು ತಾಂತ್ರಿಕ ಬಳಗ:

ಈ ಸಿನಿಮಾಗೆ ಶ್ರೀಕಾಂತ್ ಅವರು ಛಾಯಾಗ್ರಹಣ ಮಾಡಿದ್ದಾರೆ. ರಿತ್ವಿಕ್ ಮುರಳೀಧರ್ ಅವರು ಸಂಗೀತ ನೀಡಿದ್ದಾರೆ. ‘ಸು ಫ್ರಂ ಸೋ’ ಖ್ಯಾತಿಯ ನಿತಿನ್ ಶೆಟ್ಟಿ ಅವರು ಸಂಕಲನ ಮಾಡುತ್ತಿದ್ದಾರೆ. ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ಸಾಹಿತ್ಯ ಬರೆದಿದ್ದಾರೆ. ಪ್ರಕಾಶ್ ತುಮಿನಾಡು, ನವೀನ್ ಡಿ. ಪಡೀಲ್, ದೀಪಕ್ ರೈ, ರಕ್ಷಿತಾ, ನಮಿತಾ ಕಿರಣ್, ರಾಮ್‌ದಾಸ್, ಪುಷ್ಪರಾಜ್ ಬೋಳಾರ್, ರಘು ಪಾಂಡೇಶ್ವರ, ಜ್ಯೋತಿಷ್ ಶೆಟ್ಟಿ, ಪಿಡಿ ಸತೀಶ್, ರಾಧಾಕೃಷ್ಣ, ಭೀಮ್ ರಾವ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us