AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್​ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದ ವ್ಯಕ್ತಿ ವಿರುದ್ಧ ನಿರ್ದೇಶಕ ನಂದ ಕಿಶೋರ್​ ಆಕ್ರೋಶ

Nanda Kishore | Kichcha Sudeep: ‘ನಿನ್ನ ಪ್ರಚಾರಕ್ಕಾಗಿ ಕನ್ನಡದ ಧೀಮಂತ ನಟರ ಹೆಸರನ್ನು ಉಪಯೋಗಿಸಿಕೊಂಡು, ಅವರಿಗೆ ಅವಹೇಳಕಾರಿಯಾದ ಮಾತುಗಳನ್ನು ಹೇಳಿದ್ದೀಯ. ಈಗ ಮೊಬೈಲ್ ಸ್ವಿಚ್​ ಆಫ್ ಮಾಡಿಕೊಂಡು ಎಲ್ಲಿದ್ದೀಯಾ?’ ಎಂದು ಖಡಕ್​ ಆಗಿ ಕೇಳಿದ್ದಾರೆ ನಂದ ಕಿಶೋರ್​.

Kichcha Sudeep: ಕಿಚ್ಚ ಸುದೀಪ್​ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದ ವ್ಯಕ್ತಿ ವಿರುದ್ಧ ನಿರ್ದೇಶಕ ನಂದ ಕಿಶೋರ್​ ಆಕ್ರೋಶ
ನಂದ ಕಿಶೋರ್, ಕಿಚ್ಚ ಸುದೀಪ್
TV9 Web
| Edited By: |

Updated on:Jul 04, 2022 | 7:45 AM

Share

ಸೋಶಿಯಲ್​ ಮೀಡಿಯಾ ಜಗತ್ತಿನಲ್ಲಿ ಯಾರು ಏನು ಬೇಕಾದರೂ ಮಾತನಾಡಬಹುದು ಎಂಬಂತಾಗಿದೆ. ಕೆಲವು ವ್ಯಕ್ತಿಗಳು ವಿವೇಚನೆ ಇಲ್ಲದೇ ಏನೇನೋ ಮಾತನಾಡಿ, ಜನರ ಕೆಂಗಣ್ಣಿಗೆ ಗುರಿ ಆಗುತ್ತಾರೆ. ನಟ ಕಿಚ್ಚ ಸುದೀಪ್​ (Kichcha Sudeep) ಅವರ ಬಗ್ಗೆ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ಮಾತನಾಡಿರುವುದು ನಿರ್ದೇಶಕ ನಂದ ಕಿಶೋರ್​ (Nanda Kishore) ಗಮನಕ್ಕೆ ಬಂದಿದೆ. ಆ ಬಗ್ಗೆ ಅವರು ಗರಂ ಆಗಿದ್ದಾರೆ. ಅವಹೇಳನಕಾರಿಯಾಗಿ ಮಾತನಾಡಿದವನ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಲುವಾಗಿ ಅವರೊಂದು ವಿಡಿಯೋ ಮಾಡಿದ್ದು, ಕನ್ನಡ ಚಿತ್ರರಂಗದ (Kannada Film Industry) ಯಾವುದೇ ಕಲಾವಿದರ ಬಗ್ಗೆ ಮಾತನಾಡುವುದಕ್ಕೂ ಮುನ್ನ ಎಚ್ಚರಿಕೆ ಇರಲಿ ಎಂದು ಖಡಕ್​ ವಾರ್ನಿಂಗ್​ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗಿದೆ.

‘ಕನ್ನಡ ಚಿತ್ರರಂಗದ ಮೇರು ನಟ ಕಿಚ್ಚ ಸುದೀಪ್​ ಅವರ ಬಗ್ಗೆ ವ್ಯಕ್ತಿಯೊಬ್ಬ ತುಂಬ ತುಚ್ಛವಾಗಿ ಮಾತನಾಡಿದ ಒಂದು ವಿಡಿಯೋ ನೋಡಿದೆ. ಕನ್ನಡದ ಕಲಾಭಿಮಾನಿಗಳೇ ನಮ್ಮ ತಂದೆ-ತಾಯಿ ಇದ್ದಂತೆ. ಕನ್ನಡದ ನಟರು ಅವರದೇ ಚೌಕಟ್ಟಿನಲ್ಲಿ ಅನೇಕ ಸಹಾಯಗಳನ್ನು ಮಾಡಿದ್ದಾರೆ. ಕಲಾಭಿಮಾನಿಗಳನ್ನು ತಲೆಮೇಲೆ ಹೊತ್ತುಕೊಂಡು ತಿರುಗಾಡಿದ ಉದಾಹಣೆ ಇದೆ. ಚಿತ್ರರಂಗ ಒಂದು ಕುಟುಂಬ ಆದ್ದರಿಂದ ನಾನು ಈಗ ಮಾತನಾಡುತ್ತಿದ್ದೇನೆ’ ಎಂದು ನಂದ ಕಿಶೋರ್​ ಮಾತು ಆರಂಭಿಸಿದ್ದಾರೆ.

‘ಸುದೀಪ್​ ಅವರ ಸಾಧನೆ ದೊಡ್ಡದು. ಕನ್ನಡ ಚಿತ್ರರಂಗದ ಕಡೆಗೆ ಇಡೀ ಭಾರತೀಯ ಚಿತ್ರರಂಗ ತಿರುಗಿ ನೋಡುತ್ತಿದೆ ಎಂದರೆ ಅದಕ್ಕೆ ಇಂಥ ನಾಯಕರು ಕಾರಣ. ಅಂಥವರ ಬಗ್ಗೆ ದಾರಿಯಲ್ಲಿ ಹೋಗುವವರೆಲ್ಲ ಏನೋ ಒಂದು ಮಾತನಾಡುತ್ತಾರೆ ಎಂದರೆ ಬಹಳ ತಪ್ಪಾಗುತ್ತದೆ. ಕನ್ನಡದ ನಟರಿಗೆ ನಪುಂಸಕರು ಎಂದು ಹೇಳುವ ನಿನ್ನ ಭಾಷೆಯಲ್ಲಿಯೇ ಗೊತ್ತಾಗುತ್ತದೆ ನೀನು ಎಂಥ ಸಂಸ್ಕಾರದಿಂದ ಬಂದಿದ್ದೀಯ ಎಂಬುದು. ನಿನ್ನ ಪ್ರಚಾರಕ್ಕಾಗಿ ಕನ್ನಡದ ಧೀಮಂತ ನಟರ ಹೆಸರನ್ನು ಉಪಯೋಗಿಸಿಕೊಂಡು, ಅವರಿಗೆ ಅವಹೇಳನಕಾರಿಯಾದ ಮಾತುಗಳನ್ನು ಹೇಳಿದ್ದೀಯ. ನೀನು ನಪುಂಸಕನಾಗಿಲ್ಲದೇ ಇದ್ದರೆ, ಈಗ ಮೊಬೈಲ್ ಸ್ವಿಚ್​ ಆಫ್ ಮಾಡಿಕೊಂಡು ಎಲ್ಲಿದ್ದೀಯಾ?’ ಎಂದು ಖಡಕ್​ ಆಗಿ ಕೇಳಿದ್ದಾರೆ ನಂದ ಕಿಶೋರ್​.

ಇದನ್ನೂ ಓದಿ
Image
ಕಿಚ್ಚ ಸುದೀಪ್​ಗೆ ಸಿಕ್ತು ಮತ್ತೊಂದು ಬ್ಯಾಟ್ ಗಿಫ್ಟ್​; ಇದರಲ್ಲಿದೆ ಹಲವು ದಿಗ್ಗಜರ ಆಟೋಗ್ರಾಫ್​
Image
‘ವಿಕ್ರಾಂತ್ ರೋಣ’ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಿಂಚಿದ ಸುದೀಪ್​-ಜಾಕ್ವೆಲಿನ್
Image
Vikrant Rona Press Meet: ರಕ್ಷಿತ್​ ಶೆಟ್ಟಿಯ ಮಾತಿಗೆ ಫಿದಾ ಆಗಿ ವೇದಿಕೆಗೆ ಬಂದು ತಬ್ಬಿಕೊಂಡ ಕಿಚ್ಚ ಸುದೀಪ್​
Image
ಸಿನಿಮಾ ಕೆಲಸಕ್ಕೆ ಬ್ರೇಕ್​ ನೀಡಿ ಫೀಲ್ಡ್​ಗೆ ಇಳಿದು ಕ್ರಿಕೆಟ್​ ಆಡಿದ ಸುದೀಪ್​; ಮ್ಯಾಚ್ ಯಾರ ಜೊತೆ?

‘ಕನ್ನಡ ಚಿತ್ರರಂಗದವರ ಬಗ್ಗೆ ಮಾತನಾಡಬೇಕಾದರೆ ನಿನಗೊಂದು ಯೋಗ್ಯತೆ ಇರಬೇಕು. ಇಲ್ಲದಿದ್ದರೆ ನಿನ್ನಂಥವರಿಗೆ ಬೀದಿಯಲ್ಲಿ ನಿಲ್ಲಿಸಿ ಮೆಟ್ಟಲ್ಲಿ ಹೊಡಿತಾರೆ. ಮೊಬೈಲ್​ ಇದೆ ಎಂಬ ಕಾರಣಕ್ಕೆ ಎಲ್ಲಿ ಬೇಕಾದರೂ ಅಪ್​ಲೋಡ್​ ಮಾಡಬಹುದು ಅಂತ ಈ ರೀತಿ ಮಾತನಾಡಬಾರದು. ಯಾರಿಂದಲಾದರೂ ತಪ್ಪಾಗಿದ್ದರೆ ವಾಣಿಜ್ಯ ಮಂಡಳಿಗೆ ದೂರು ನೀಡು’ ಎಂದು ನಂದ ಕಿಶೋರ್​ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಕಿಚ್ಚ ಸುದೀಪ್​ಗೆ ಸಿಕ್ತು ಮತ್ತೊಂದು ಬ್ಯಾಟ್ ಗಿಫ್ಟ್​; ಇದರಲ್ಲಿದೆ ಹಲವು ದಿಗ್ಗಜರ ಆಟೋಗ್ರಾಫ್​

Published On - 7:22 am, Mon, 4 July 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!