ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

TV9 Digital Desk

| Edited By: Rajesh Duggumane

Updated on: Oct 20, 2021 | 3:02 PM

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ​ ನಿರ್ದೇಶಕ ನರ್ತನ್ ​ಜತೆ ಯಶ್ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ.

ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?
ನರ್ತನ್​-ಯಶ್​
Follow us

‘ಕೆಜಿಎಫ್​ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಈ ಸಿನಿಮಾದ ಮೊದಲ ಚಾಪ್ಟರ್​ ತೆರೆಕಂಡ ನಂತರ ಯಶ್​ ಸಿನಿಮಾಗೆ ದೊಡ್ಡ ಮೈಲೇಜ್​ ಸಿಕ್ಕಿದೆ. ಅವರ ಜತೆ ಸಿನಿಮಾ ಮಾಡಬೇಕು ಎಂದು ಸ್ಟಾರ್​ ಡೈರೆಕ್ಟರ್​ಗಳು ಕಾದು ಕೂತಿದ್ದಾರೆ. ಯಶ್​ 19ನೇ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಶೀಘ್ರವೆ ಘೋಷಣೆ ಆಗಲಿದೆ ಎನ್ನಲಾಗುತ್ತಿತ್ತು. ಹೀಗಿರುವಾಗಲೇ ಫೇಕ್​ ಟ್ವೀಟ್ ಒಂದು ಹರಿದಾಡುತ್ತಿದೆ.

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ​ ನಿರ್ದೇಶಕ ನರ್ತನ್ ​ಜತೆ ಯಶ್ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ. ಮೂಲಗಳ ಪ್ರಕಾರ ನರ್ತನ್​ ಸಿನಿಮಾದಲ್ಲಿ ಯಶ್​ ನೇವಿ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಚರ್ಚೆಯಲ್ಲಿದೆ. ಶಿವರಾಜ್​ಕುಮಾರ್​ ಹಾಗೂ ಶ್ರೀಮುರಳಿ ಕಾಂಬಿನೇಷನ್​ನಲ್ಲಿ ತೆರೆಗೆ ತಂದ ‘ಮಫ್ತಿ’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದು ನರ್ತನ್​. ಹೀಗಾಗಿ, ಅವರ​ ಬಗ್ಗೆ ನಿರೀಕ್ಷೆ ಇದೆ.

ಈಗ ನರ್ತನ್​ ಹೆಸರಿನಲ್ಲಿ ಫೇಕ್​ ಟ್ವಿಟರ್​ ಖಾತೆ ಮಾಡಿರುವ ವ್ಯಕ್ತಿಯೊಬ್ಬರು ಟ್ವೀಟ್​ ಒಂದನ್ನು ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ‘ಯಶ್​ 19ನೇ ಸಿನಿಮಾ ಬಗ್ಗೆ ನವೆಂಬರ್​ 4ರಂದು ಘೋಷಣೆ ಮಾಡುತ್ತೇವೆ. ಹೊಂಬಾಳೆ ಫಿಲ್ಮ್ಸ್​ ಇದಕ್ಕೆ ಬಂಡವಾಳ ಹೂಡುತ್ತಿದೆ’ ಎಂದು ಬರೆದುಕೊಳ್ಳಲಾಗಿದೆ. ಈ ಸುದ್ದಿಯನ್ನು ಅನೇಕರು ನಂಬಿದ್ದಾರೆ.

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಈ ಚಿತ್ರದ ಕೊನೆಯ ಹಂತದ ಕೆಲಸದಲ್ಲಿ ಪ್ರಶಾಂತ್​ ನೀಲ್​ ಬ್ಯುಸಿಯಾಗಿದ್ದಾರೆ.

‘ಕೆಜಿಎಫ್​ 2’ ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

ತಾಜಾ ಸುದ್ದಿ

Related Stories

Click on your DTH Provider to Add TV9 Kannada