‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಮೊದಲ ವಾರದ ಕಲೆಕ್ಷನ್ ಬಗ್ಗೆ ನಿರ್ದೇಶಕ ಶಶಾಂಕ್ ಟ್ವೀಟ್

Kausalya Supraja Rama: ತಮ್ಮ ನಿರ್ದೇಶನದ 'ಕೌಸಲ್ಯ ಸುಪ್ರಜಾ ರಾಮ' ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಶಶಾಂಕ್ ಟ್ವೀಟ್ ಮಾಡಿದ್ದಾರೆ.

'ಕೌಸಲ್ಯ ಸುಪ್ರಜಾ ರಾಮ' ಸಿನಿಮಾ ಮೊದಲ ವಾರದ ಕಲೆಕ್ಷನ್ ಬಗ್ಗೆ ನಿರ್ದೇಶಕ ಶಶಾಂಕ್ ಟ್ವೀಟ್
ಕೌಸಲ್ಯ ಸುಪ್ರಜಾ ರಾಮ
Follow us
ಮಂಜುನಾಥ ಸಿ.
|

Updated on: Aug 05, 2023 | 6:48 PM

ಕಳೆದ ಶುಕ್ರವಾರ (ಜುಲೈ 28) ಚಂದನವನದ ಪಾಲಿಗೆ ಶುಭ ಶುಕ್ರವಾರವಾಗಿತ್ತು. ಕಳೆದ ವಾರ ಮೂರು ಪ್ರಮುಖ ಕನ್ನಡ ಸಿನಿಮಾಗಳು ಬಿಡುಗಡೆ ಆದವು. ‘ಆಚಾರ್ ಆಂಡ್ ಕೋ‘ (Aachar And Co), ‘ಕೌಸಲ್ಯ ಸುಪ್ರಜಾ ರಾಮ‘ (Kausalya Supraja Rama) ಸಿನಿಮಾಗಳು ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದ ಜೊತೆಗೆ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಗಳಿಕೆಯನ್ನೂ ಮಾಡುತ್ತಿವೆ. ಅದರ ಹಿಂದಿನ ವಾರ ಬಿಡುಗಡೆ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಸಹ ಹಿಟ್ ಎನಿಸಿಕೊಂಡಿದೆ. ಅದರಲ್ಲಿಯೂ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾವನ್ನು ಪ್ರೇಕ್ಷಕರು ಕೊಂಡಾಡುತ್ತಿದ್ದಾರೆ. ಅದರ ಸಂದೇಶ, ನವಿರುತನ, ಆಯ್ಕೆ ಮಾಡಿಕೊಂಡಿರುವ ವಿಷಯದ ಬಗ್ಗೆ ಭರಪೂರ ಪ್ರಶಂಸೆ ವ್ಯಕ್ತವಾಗುತ್ತಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಬಿಡುಗಡೆ ಆಗಿ ವಾರವಾಗಿದ್ದು ಸಿನಿಮಾದ ಮೊದಲ ವಾರದ ಕಲೆಕ್ಷನ್ ಬಗ್ಗೆ ಮಾಡಲಾಗಿದ್ದ ಊಹಾಪೋಹದ ಟ್ವೀಟ್​ಗೆ ಪ್ರತಿಕ್ರಿಯೆಯಾಗಿ ಸಿನಿಮಾದ ನಿರ್ದೇಶಕ ಹಾಗೂ ಸಹ ನಿರ್ಮಾಪಕರೂ ಆಗಿರುವ ಶಶಾಂಕ್ ಟ್ವೀಟ್ ಮಾಡಿದ್ದಾರೆ.

”ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಒಂದು ವಾರದ ಕಲೆಕ್ಷನ್ 1.65 ಕೋಟಿಯಿಂದ 1.80 ಕೋಟಿ ವರೆಗೂ ಆಗಿದೆ” ಎಂದು ಟ್ವೀಟ್ಟರ್ ಹ್ಯಾಂಡಲ್ ಒಂದರ ಮೂಲಕ ಟ್ವೀಟ್ ಮಾಡಲಾಗಿತ್ತು, ಆ ಟ್ವೀಟ್​ಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ನಿರ್ದೇಶಕ ಶಶಾಂಕ್, ”ಈ ಅಂಕಿ-ಸಂಖ್ಯೆಗಳು ನಿಮಗೆ ಎಲ್ಲಿಂದ ಸಿಗುತ್ತವೆ, ಸಿನಿಮಾ ನಿಜಕ್ಕೂ ಬಹಳ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ನೀವು ನೀಡಿರುವ ಸಂಖ್ಯೆಗಿಂತಲೂ ಬಹಳ ಹೆಚ್ಚಿನ ಮೊತ್ತವನ್ನು ಸಿನಿಮಾ ಈವರೆಗೆ ಕಲೆಕ್ಷನ್ ಮಾಡಿದೆ. ಆತುರಪಟ್ಟು ತಪ್ಪು-ತಪ್ಪಾದ, ಊಹಿಸಿದ ಮೊತ್ತವನ್ನು ಬರೆದು ಗೊಂದಲ ಸೃಷ್ಟಿಸಬೇಡಿ, ನಾವೇ ಘೋಷಣೆ ಮಾಡುವ ವರೆಗೆ ತಾಳ್ಮೆಯಿಂದ ಕಾಯಿರಿ” ಎಂದಿದ್ದಾರೆ.

ಇದನ್ನೂ ಓದಿ:‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ ಟಿಎನ್​ ಸೀತಾರಾಮ್​ ಮೆಚ್ಚುಗೆ; ಸಾಹಿತಿಗಳಿಗೆ ಇಷ್ಟವಾಯ್ತು ಶಶಾಂಕ್​ ಸಿನಿಮಾ

ಶಶಾಂಕ್​ರ ಟ್ವೀಟ್​ ಆಧರಿಸಿ ಸಿನಿಮಾದ ಕಲೆಕ್ಷನ್ ಮೊದಲ ವಾರು ಸುಮಾರು 10 ಕೋಟಿಗೂ ಹೆಚ್ಚು ಆಗಿರಬಹುದು ಎಂದು ಕೆಲವರು ಅಂದಾಜಿಸುತ್ತಿದ್ದಾರೆ. ಅದು ಸಾಧ್ಯವೂ ಇದೆ. ಏಕೆಂದರೆ ಬಿಡುಗಡೆ ಆದ ಒಂದು ವಾರದ ಬಳಿಕವೂ ಸಿನಿಮಾದ ಶೋಗಳ ಸಂಖ್ಯೆಯಲ್ಲಿ ಹೆಚ್ಚಿನ ಇಳಿಕೆಯೇನೂ ಆಗಿಲ್ಲ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸಹ ಸಿನಿಮಾದ ಬಗ್ಗೆ ಧನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಫ್ಯಾಮಿಲಿ ಆಡಿಯೆನ್ಸ್ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಪುರುಷ ಅಹಂನ ವಿಷಯವನ್ನು ಆಧರಿಸಿದ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿದ್ದಾರೆ. ಬೃಂದಾ ಆಚಾರ್ಯ ಹಾಗೂ ಮಿಲನಾ ನಾಗರಾಜ್ ನಾಯಕಿ. ರಂಘಾಯಣ ರಘು, ಸುಧಾ ಬೆಳವಾಡಿ, ನಾಗಭೂಷಣ ಅವರುಗಳು ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಶಶಾಂಕ್ ಒಟ್ಟಿಗೆ ಮಾಜಿ ಸಚಿವ ಬಿಸಿ ಪಾಟೀಲ್ ಸಹ ಬಂಡವಾಳ ಹೂಡಿದ್ದಾರೆ. ಕಳೆದ ವಾರ ಬಿಡುಗಡೆ ಆಗಿದ್ದ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್