AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗ ಸತ್ತು ಹೋಯ್ತು, ಊಟ ಇಲ್ಲ ಅಂತಾರೆ: ಮತ್ತೆ ಸಿನಿಮಾ ಮಂದಿ ಮೇಲೆ ಗುಡುಗಿದ ಡಿಕೆಶಿ

ಚಿತ್ರರಂಗದವರು ಕಷ್ಟ ಬಂದಾಗ ಸರ್ಕಾರದ ಸಹಾಯ ಕೇಳುತ್ತಾರೆ. ಆದರೆ ಚಿತ್ರೋತ್ಸವದಲ್ಲಿ ಹೆಚ್ಚಿನವರು ಭಾಗಿಯಾಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಸಖತ್ ಚರ್ಚೆ ಆಗುತ್ತಿದೆ. ಅವರ ಹೇಳಿಕೆಯನ್ನು ಕೆಲವರು ಖಂಡಿಸಿದ್ದಾರೆ. ಅಂಥವರಿಗೆ ಈಗ ಡಿಕೆಶಿ ಮತ್ತೊಮ್ಮೆ ತಿರುಗೇಟು ನೀಡಿದ್ದಾರೆ.

ಚಿತ್ರರಂಗ ಸತ್ತು ಹೋಯ್ತು, ಊಟ ಇಲ್ಲ ಅಂತಾರೆ: ಮತ್ತೆ ಸಿನಿಮಾ ಮಂದಿ ಮೇಲೆ ಗುಡುಗಿದ ಡಿಕೆಶಿ
Dk Shivakumar
ಮದನ್​ ಕುಮಾರ್​
|

Updated on: Mar 02, 2025 | 4:03 PM

Share

16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ವೇಳೆ ಕನ್ನಡ ಚಿತ್ರರಂಗದವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಎಚ್ಚರಿಕೆ ನೀಡಿದ್ದರು. ಅವರ ಹೇಳಿಕೆಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇಂದು (ಮಾರ್ಚ್​ 2) ಮತ್ತೆ ಡಿಕೆ ಶಿವಕುಮಾರ್​ (DK Shivakumar) ಗುಡುಗಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು. ಫಿಲ್ಮ್ ಫೆಸ್ಟಿವಲ್​ ಉದ್ಘಾಟನೆಯಲ್ಲಿ ಚಿತ್ರರಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಬಾರದೇ ಇರುವುದನ್ನು ಅವರು ಖಂಡಿಸಿದರು.

ನಿಮ್ಮ ಹೇಳಿಕೆಯಿಂದ ಸಿನಿಮಾದವರು ಬೇಸರಗೊಂಡಿದ್ದಾರಲ್ಲ ಎಂದು ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ‘ಸಿನಿಮಾದವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನನಗೆ ಗೊತ್ತಿರುವ ಸತ್ಯವನ್ನು ಹೇಳಿದ್ದೇನೆ. ಅವರು ಪ್ರತಿಭಟನೆ ಮಾಡಲಿ, ಹೋರಾಟ ಮಾಡಲಿ. ನಮ್ಮ ನೀರು, ನಮ್ಮ ಹಕ್ಕು. ಅವರು ಯಾವಾಗಲೂ ನೆಲ, ಜಲದ ವಿಚಾರಕ್ಕೆ ಪಕ್ಷಾತೀತವಾಗಿ ಸಹಕಾರ ನೀಡುತ್ತೇವೆ ಅಂತ ಹೇಳುತ್ತಿದ್ದರು. ಆದರೆ ಮೇಕೆದಾಟು ಯಾತ್ರೆಗೆ ಯಾರೂ ಬರಲಿಲ್ಲ’ ಎಂದಿದ್ದಾರೆ ಡಿಕೆ ಶಿವಕುಮಾರ್.

‘ಮೇಕೆದಾಟು ಯಾತ್ರೆಗೆ ಬಂದು ಪ್ರೇಮ್ ಕೇಸ್ ಹಾಕಿಸಿಕೊಂಡ. ಬಿಜೆಪಿಯವರು ಅವನ ಮೇಲೆ ಕೇಸ್ ಹಾಕಿದರು.ದುನಿಯಾ ವಿಜಯ್ ಮತ್ತು ಸಾಧು ಕೋಕಿಲ ಮೇಲೂ ಕೇಸ್ ಹಾಕಿದರು. ಬೇಕಿದ್ದರೆ ನಮ್ಮ ಮೇಲೆ ಕೇಸ್ ಹಾಕಿಕೊಳ್ಳಲಿ. ನಿನ್ನೆ ನಡೆದ ಫಿಲ್ಮ್ ಫೆಸ್ಟಿವಲ್ ಕಾರ್ಯಕ್ರಮ ನನ್ನದಾ? ಚಿತ್ರರಂಗದ್ದು. ಆದಕ್ಕೆ ಅನೇಕರು ಬಂದಿಲ್ಲ. ಫಿಲ್ಮ್ ಇಂಡಸ್ಟ್ರಿ ಸತ್ತು ಹೋಯ್ತು, ಚಿತ್ರಮಂದಿರಗಳೆಲ್ಲ ಮುಚ್ಚಿ ಹೋಯ್ತು, ಊಟ ಇಲ್ಲ ಅಂತೆಲ್ಲ ಚಿತ್ರರಂಗದವರು ಮಾತನಾಡುತ್ತಾರೆ. ಆದರೆ ಫಿಲ್ಮ್ ಫೆಸ್ಟಿವಲ್​ ಗೆ ಅವರ ಪ್ರೋತ್ಸಾಹ ಇಲ್ಲ. ಹಾಗಾದ್ರೆ ಅಂತಾರಾಷ್ಟ್ರೀಯ ಚಿತ್ರೋತ್ಸವನ್ನು ಸರ್ಕಾರ ಯಾರಿಗಾಗಿ ಮಾಡುತ್ತಿದೆ’ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

‘ಚಿತ್ರರಂಗ ಎಂದರೆ ಸ್ಕ್ರಿಪ್ಟ್ ರೈಟರ್, ಕ್ಯಾಮೆರಾಮ್ಯಾನ್, ನಿರ್ಮಾಪಕ, ನಟ-ನಟಿಯರು, ನಿರ್ದೇಶಕರು ಎಲ್ಲರೂ ಇದ್ದಾರೆ. ಅವರಿಗೆ ಸೇರಿದ ಈ ಹಬ್ಬದಲ್ಲಿ, ಈ ಸಂಭ್ರಮದಲ್ಲಿ ಅವರೇ ಆಚರಣೆ ಮಾಡಿಕೊಳ್ಳಲಿಲ್ಲ ಎಂದರೆ ಯಾರು ಏನು ಬೇಕಾದರೂ ಹೇಳಲಿ’ ಎಂದು ಡಿಕೆಶಿ ಹೇಳಿದ್ದಾರೆ. ಆ ಮೂಲಕ ತಮ್ಮ ಬಗ್ಗೆ ಕೇಳಿಬಂದ ಟೀಕೆಗಳಿಗೆ ಅವರು ಉತ್ತರ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.