AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೊಡ್ಡಣ್ಣ ನಿಧನ’ ಅಂತ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ; ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ

ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ದೊಡ್ಡಣ್ಣ, ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ದಿಟ್ಟ ಹೆಜ್ಜೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ವಿಕೃತ ಪೋಸ್ಟ್‌ಗಳನ್ನು ಹಂಚುವವರಿಗೆ ಭಾರಿ ಆತಂಕ ಶುರುವಾಗಿದೆ.

‘ದೊಡ್ಡಣ್ಣ ನಿಧನ’ ಅಂತ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ; ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ
ದೊಡ್ಡಣ್ಣ
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 17, 2026 | 8:34 AM

Share

ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಅವರು (Doddanna) ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಕಿಡಿಗೇಡಿಗಳಿಗೆ ಈಗ ಸರಿಯಾಗಿಯೇ ಕಾನೂನಿನ ಬಿಸಿ ಮುಟ್ಟಿದೆ. ತಾವಿನ್ನೂ ಆರೋಗ್ಯವಾಗಿ ಬದುಕಿರುವಾಗಲೇ ‘ಸತ್ತಿದ್ದಾರೆ’ ಎಂದು ಸುಳ್ಳು ಪೋಸ್ಟ್ ಹಾಕಿ ವಿಕೃತ ಆನಂದ ಪಟ್ಟವರ ವಿರುದ್ಧ ಹಿರಿಯ ನಟ ದೊಡ್ಡಣ್ಣ ಅವರು ಖುದ್ದಾಗಿ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ನಟ ದೊಡ್ಡಣ್ಣ ಅವರ ಈ ದಿಟ್ಟ ಹೆಜ್ಜೆಯಿಂದಾಗಿ, ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು ವೀವ್ಸ್‌ಗಾಗಿ ಇಂತಹ ಕೆಟ್ಟ ಕೆಲಸ ಮಾಡುತ್ತಿದ್ದ ಕಿಡಿಗೇಡಿಗಳಿಗೆ ಈಗ ಜೈಲು ಪಾಲಾಗುವ ಭಯ ಶುರುವಾಗಿದೆ

ಏನಿದು ಘಟನೆ?

ಇತ್ತೀಚೆಗೆ ಸಾಮಾಜಿಕ ಜಾಲತಾಣದ ‘ಪಬ್ಲಿಕ್ ಫ್ರೆಂಡ್’ (Public Friend) ಎಂಬ ಖಾತೆಯಲ್ಲಿ ನಟ ದೊಡ್ಡಣ್ಣ ಅವರು ಇನ್ನಿಲ್ಲ ಎಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗಿತ್ತು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ದೊಡ್ಡಣ್ಣ ಅವರ ಅಭಿಮಾನಿಗಳು ಹಾಗೂ ಚಿತ್ರರಂಗದ ಆಪ್ತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದಾದ ಬೆನ್ನಲ್ಲೇ ಸ್ವತಃ ದೊಡ್ಡಣ್ಣ ಅವರೇ ಮಾಧ್ಯಮಗಳ ಮುಂದೆ ಬಂದು, ‘ನಾನು ಚೆನ್ನಾಗಿದ್ದೇನೆ, ಆರೋಗ್ಯವಾಗಿದ್ದೇನೆ, ದಯವಿಟ್ಟು ಸುಳ್ಳು ಸುದ್ದಿ ನಂಬಬೇಡಿ’ ಎಂದು ಸ್ಪಷ್ಟನೆ ನೀಡಬೇಕಾಯಿತು.

ಇದೇ ಮೊದಲೇನಲ್ಲ… ಈ ಬಾರಿ ಬಿಡುವ ಮಾತೇ ಇಲ್ಲ

ದೊಡ್ಡಣ್ಣ ಅವರ ಬಗ್ಗೆ ಈ ರೀತಿ ನಿಧನದ ಸುದ್ದಿ ಹರಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಕೆಲವು ವರ್ಷಗಳಿಂದಲೂ ಆಗಾಗ ಇಂತಹ ವಿಕೃತ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇವೆ. ಪ್ರತಿ ಬಾರಿಯೂ ಸುಮ್ಮನಾಗುತ್ತಿದ್ದ ದೊಡ್ಡಣ್ಣ, ಈ ಬಾರಿ ಮಾತ್ರ ಕಿಡಿಗೇಡಿಗಳಿಗೆ ಸರಿಯಾದ ಪಾಠ ಕಲಿಸಲೇಬೇಕು ಎಂದು ನಿರ್ಧರಿಸಿ ಸೈಬರ್ ಠಾಣೆಯ ಮೆಟ್ಟಿಲೇರಿದ್ದಾರೆ.

‘ನಾನು ಬದುಕಿರುವಾಗಲೇ ಸತ್ತಿದ್ದೇನೆ ಎಂದು ಪೋಸ್ಟ್ ಹಂಚಿಕೊಳ್ಳಲಾಗಿದೆ. ಎಐ ಮೂಲಕ ಎಡಿಟ್ ಮಾಡಿ ವೈರಲ್ ಮಾಡಿರುವುದರಿಂದ ನನಗೆ ತೀವ್ರ ಮಾನಸಿಕ ನೋವು ಹಾಗೂ ಅತೀವ ಆಘಾತ ಉಂಟಾಗಿದೆ. ನನ್ನ ಕುಟುಂಬಸ್ಥರು ಮತ್ತು ಅಭಿಮಾನಿಗಳು ಈ ವದಂತಿಯಿಂದ ನೊಂದಿದ್ದಾರೆ. ಆದ್ದರಿಂದ ಇಂತಹ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದೊಡ್ಡಣ್ಣ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ನಾನು ಸತ್ತಿಲ್ಲ, ಟಿವಿ9 ನೋಡ್ತಾ ಆರಾಮಾಗಿದ್ದೇನೆ’; ದೊಡ್ಡಣ್ಣ ಸ್ಪಷ್ಟನೆ

ಕಳೆದ ಜೂನ್ 15 ರಂದು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೊಡ್ಡಣ್ಣ ಅವರು ಅಧಿಕೃತವಾಗಿ ದೂರು ನೀಡಿದ್ದಾರೆ. ದೂರನ್ನು ಗಂಭೀರವಾಗಿ ಪರಿಗಣಿಸಿರುವ ಸೈಬರ್ ಪೊಲೀಸರು, ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಭರ್ಜರಿ ಬೇಟೆ ಆರಂಭಿಸಿದ್ದಾರೆ. ಆ ‘ಪಬ್ಲಿಕ್ ಫ್ರೆಂಡ್’ ಖಾತೆಯ ಐಪಿ ಅಡ್ರೆಸ್ ಹಾಗೂ ಅದರ ಹಿಂದಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ತನಿಖೆ ಚುರುಕುಗೊಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡಣ್ಣ ಕುರಿತು ಇಂತಹ ನಕಲಿ ಪೋಸ್ಟ್‌ಗಳನ್ನು ಕ್ರಿಯೇಟ್ ಮಾಡಿದವರಿಗೆ ಮತ್ತು ಅದನ್ನು ಫಾರ್ವರ್ಡ್ ಮಾಡಿದವರಿಗೆ ನಡುಕ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!