ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್ ಈಗ ಬಹುಬೇಡಿಕೆಯ ನಟ. ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ
ಧನಂಜಯ್
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 07, 2020 | 2:46 PM

ಆನ್​ಲೈನ್​ನಲ್ಲಿ ಇತ್ತೀಚೆಗೆ ವಂಚನೆ ಮಾಡುವ ಜಾಲಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹುಟ್ಟಿಕೊಳ್ಳುತ್ತಿದೆ. ನಿಮ್ಮ ಬ್ಯಾಂಕ್​ ಖಾತೆಗೆ ಕನ್ನ ಹಾಕುವವರದ್ದೇ ಒಂದು ಗುಂಪಾದರೆ, ಅವಕಾಶ ನೀಡುತ್ತೇನೆಂದು ಪಂಗನಾಮ ಹಾಕುವವರದ್ದು ಮತ್ತೊಂದು ಗುಂಪು. ಇದೇ ರೀತಿ ಡಾಲಿ ಧನಂಜಯ್​ ಹೆಸರಲ್ಲಿ ಅವಕಾಶ ನೀಡುತ್ತೇನೆಂದು ಪೋಸ್ಟ್​​ಗಳನ್ನು ಹಾಕುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಆ ಬಗ್ಗೆ ಖುದ್ದು ಧನಂಜಯ್​ ಎಚ್ಚರಿಕೆ ನೀಡಿದ್ದಾರೆ.

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್​, ನಂತರ ಅದೇ ಹೆಸರಲ್ಲಿ ಖ್ಯಾತಿ ಪಡೆದುಕೊಂಡು ಬಿಟ್ಟರು. ಈಗಲೂ ಕೂಡ ಅನೇಕ ನಿರ್ದೇಶಕರು ಡಾಲಿ ಧನಂಜಯ್​ ಕಾಲ್​ಶೀಟ್​ಗೆ ಕಾದು ನಿಲ್ಲುತ್ತಾರೆ. ಈ ಮಧ್ಯೆ ಅನೇಕರು, ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ಅವಕಾಶ ನೀಡುವುದಾಗಿ ನಕಲಿ ಪೋಸ್ಟ್​ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಧನಂಜಯ್​ ತಮ್ಮ ಟ್ವಿಟರ್ ಅಕೌಂಟ್​ನಲ್ಲಿ ಫೇಸ್​ಬುಕ್​ನಲ್ಲಿ ಪ್ರಕಟವಾಗಿದ್ದ ಸ್ಕ್ರೀನ್​ಶಾಟ್​ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ, ಹೊಸ ಕನ್ನಡ ಸಿನಿಮಾಗೆ ನಾವು ಪೋಷಕ ಪಾತ್ರಧಾರಿಗಳನ್ನು ಹುಡುಕುತ್ತಿದ್ದೇವೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ನಟಿಸುತ್ತಿದ್ದಾರೆ. ಯಾರಿಗಾದರೂ ಆಸಕ್ತಿ ಇದ್ದರೆ ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿ. ವೃತ್ತಿಪರರಿಗೆ ಮಾತ್ರ ಆದ್ಯತೆ ಎಂದಿತ್ತು.

ಈ ಬಗ್ಗೆ ಬರೆದಿರುವ ಧನಂಜಯ್​, ಈ ರೀತಿಯ ಪೋಸ್ಟ್​​​ಗಳನ್ನು ನಂಬಿ ಮೋಸ ಹೋಗಬೇಡಿ. ಈ ತರಹ ಎರಡು ಮೂರು ಘಟನೆಗಳು ಗಮನಕ್ಕೆ ಬಂದಿವೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಯಾವುದೇ ವಿಚಾರವನ್ನು ನಂಬುವ ಮೊದಲು ಪರಿಶೀಲನೆ ನಡೆಸಿ ಎಂದು ಕೋರಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಡಾಲಿ ಧನಂಜಯ್​ 10ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಲಗ, ಯುವರತ್ನ ಸೇರಿ ಪ್ರಮುಖ ಸಿನಿಮಾಗಳು ಅವರ ಕೈಯಲ್ಲಿವೆ. ತೆಲುಗಿನ ಪುಷ್ಪ ಚಿತ್ರದಲ್ಲೂ ಧನಂಜಯ್​ ಬಣ್ಣ ಹಚ್ಚುತ್ತಿದ್ದಾರೆ.

ಮರಳಿ ಬನ್ನಿ ಚಿತ್ರಮಂದಿರಗಳಿಗೆ.. ಕಲಾವಿದರಿಂದ ಪ್ರೇಕ್ಷಕ ಮಹಾಪ್ರಭುಗೆ ವೀಡಿಯೊ ಆಹ್ವಾನ!

Published On - 2:45 pm, Mon, 7 December 20

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ