Dr Rajkumar Birth Anniversary: ರಾಜ್​ಕುಮಾರ್​ ಜನ್ಮದಿನಕ್ಕೆ ಪುನೀತ್​ ನೀಡಿದ ಸುಮಧುರ ಕಾಣಿಕೆ

Puneeth Rajkumar: ಬದಲಾದ ಈ ಪರಿಸ್ಥಿತಿಯಲ್ಲಿ ಸೋಶಿಯಲ್​ ಮೀಡಿಯಾ ಮೂಲಕವೇ ‘ನಟ ಸಾರ್ವಭೌಮ’ನ ಹುಟ್ಟುಹಬ್ಬದ ಸಂಭ್ರಮ ಕಳೆಕಟ್ಟಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಮೇರುನಟನ ಜನ್ಮದಿನಕ್ಕೆ ಶುಭಕೋರುತ್ತಿದ್ದಾರೆ.

Dr Rajkumar Birth Anniversary: ರಾಜ್​ಕುಮಾರ್​ ಜನ್ಮದಿನಕ್ಕೆ ಪುನೀತ್​ ನೀಡಿದ ಸುಮಧುರ ಕಾಣಿಕೆ
ಡಾ. ರಾಜ್​ಕುಮಾರ್​ - ಪುನೀತ್​ ರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Apr 24, 2021 | 10:05 AM

ಕನ್ನಡ ಸಿನಿಪ್ರಿಯರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿರುವ ಡಾ. ರಾಜ್​ಕುಮಾರ್​ ಅವರ 92ನೇ ಜನ್ಮದಿನದ ಅಂಗವಾಗಿ ಇಂದು (ಏ.24) ಎಲ್ಲರಿಂದ ಶುಭಾಶಯಗಳು ಹರಿದುಬರುತ್ತಿವೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ನಟ ಪುನೀತ್​ ರಾಜ್​ಕುಮಾರ್​ ಅವರು ಅಪ್ಪಾಜಿಗೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬದ ಶುಭಕೋರಿದ್ದಾರೆ. ಒಂದು ಹಾಡಿನ ಮೂಲಕ ಮೇರುನಟನ ಜನ್ಮದಿನದ ಸಂಭ್ರಮವನ್ನು ಅವರು ಹೆಚ್ಚಿಸಿದ್ದಾರೆ.

1976ರಲ್ಲಿ ತೆರಕಂಡ ‘ಬಡವರು ಬಂಧು’ ಸಿನಿಮಾದ ‘ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ..’ ಹಾಡು ಇಂದಿಗೂ ಎವರ್​ಗ್ರೀನ್​. ಆ ಗೀತೆಯನ್ನು ಪುನೀತ್​ ಮತ್ತೊಮ್ಮೆ ಹಾಡಿದ್ದಾರೆ. ‘ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ. ಬಿಸಿಲು-ಮಳೆಗೆ ನರಳದಂತೆ ನಿನ್ನ ನೆರಳಲಿ ಸಲಹಿದೆ. ಆ ಪ್ರೀತಿಯ ಮನ ಮರೆಯುದೇ..’ ಎಂಬ ಸಾಲುಗಳನ್ನು ತುಂಬ ಭಾವುಕವಾಗಿ ಪುನೀತ್​ ಹಾಡಿದ್ದಾರೆ. ತಂದೆಯನ್ನು ನೆನಪಿಸಿಕೊಂಡು ಅವರು ಭಾವಪರವಶರಾಗಿ ಧ್ವನಿ ನೀಡಿದ್ದಾರೆ.

ಈ ವಿಡಿಯೋವನ್ನು ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅದು ಎಲ್ಲರಿಗೂ ಸಖತ್​ ಇಷ್ಟ ಆಗುತ್ತಿದೆ. ಅಭಿಮಾನಿಗಳ ಇದನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಪ್ರತಿವರ್ಷವೂ ಏ.24 ಬಂದರೆ ಅಣ್ಣಾವ್ರ ಅಭಿಮಾನಿಗಳ ಸಂಭ್ರಮ ಜೋರಾಗಿರುತ್ತಿತ್ತು. ಆದರೆ ಈ ಬಾರಿ ಲಾಕ್​ಡೌನ್​ ನಿಯಮಗಳ ಕಾರಣದಿಂದ ಮೇರುನಟನ ಜನ್ಮದಿನವನ್ನು ಸಿಂಪಲ್​ ಆಗಿ ಆಚರಿಸಲಾಗುತ್ತಿದೆ.

ರಾಜ್ಯದ ಮೂಲೆಮೂಲೆಗಳಿಂದ ಬರುತ್ತಿದ್ದ ಜನರು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ರಾಜ್​ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸುತ್ತಿದ್ದರು. ರಕ್ತದಾನ, ನೇತ್ರದಾನ ನೋಂದಣಿ, ಉಚಿತ ಆರೋಗ್ಯ ತಪಾಸಣೆ, ಅನ್ನ ಸಂತರ್ಪಣೆ ಮುಂತಾದ ಸಮಾಜಮುಖಿ ಕಾರ್ಯಗಳು ನಡೆಯುತ್ತಿದ್ದವು. ಆದರೆ ಆ ಎಲ್ಲ ಕಾರ್ಯಗಳಿಗೆ ಕೊವಿಡ್​-19 ಬ್ರೇಕ್​ ಹಾಕಿದೆ. ಅದರಲ್ಲೂ ಶನಿವಾರ ಮತ್ತು ಭಾನುವಾರ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಯಾರೂ ಕೂಡ ರಾಜ್​ ಸಮಾಧಿ ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ.

ಬದಲಾದ ಈ ಪರಿಸ್ಥಿತಿಯಲ್ಲಿ ಸೋಶಿಯಲ್​ ಮೀಡಿಯಾ ಮೂಲಕವೇ ‘ನಟ ಸಾರ್ವಭೌಮ’ನ ಹುಟ್ಟುಹಬ್ಬದ ಸಂಭ್ರಮ ಕಳೆಕಟ್ಟಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಮೇರುನಟನ ಜನ್ಮದಿನಕ್ಕೆ ಶುಭಕೋರುತ್ತಿದ್ದಾರೆ. ರಾಘವೇಂದ್ರ ರಾಜ್​ಕುಮಾರ್​, ಪವನ್​ ಒಡಯರ್​, ರಮೇಶ್​ ಅರವಿಂದ್​, ಸಿಂಪಲ್​ ಸುನಿ, ಜಗ್ಗೇಶ್​, ವಸಿಷ್ಠ ಸಿಂಹ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಅಣ್ಣಾವ್ರನ್ನು ಸ್ಮರಿಸಿಕೊಂಡಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಕೂಡ ಟ್ವಿಟರ್​ ಮೂಲಕ ಡಾ. ರಾಜ್​ ಜನ್ಮದಿನಕ್ಕೆ ಶುಭಕೋರಿದ್ದಾರೆ.

ಇದನ್ನೂ ಓದಿ: Dr. Rajkumar Birth Anniversary: ರಾಜ್​ಕುಮಾರ್​ ಜತೆ ಫೋಟೋ ತೆಗೆಸಿಕೊಳ್ಳಲು ಲವರ್​​ ಕಾಯಿಸಿದ್ದೆ

(Dr Rajkumar 92nd Birth Anniversary: Puneeth Rajkumar BS Yediyurappa and others pay tribute to Legendary Kannada Superstar)

ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ