AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಪುಣ್ಯತಿಥಿ: ನುಡಿನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ, ಇತರ ಗಣ್ಯರು; ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಕೆ

Dr Rajkumar Death Anniversary: ನಟಸಾರ್ವಭೌಮ, ವರನಟ ಡಾ.ರಾಜ್‌ಕುಮಾರ್‌ ಅವರ 16ನೇ ವರ್ಷದ ಪುಣ್ಯತಿಥಿಯಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಗಣ್ಯರು, ಅಭಿಮಾನಿಗಳು ರಾಜ್‌ಕುಮಾರ್ ಅವರನ್ನು ಸ್ಮರಿಸಿದ್ದಾರೆ. ಕುಟುಂಬಸ್ಥರು ರಾಜ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ರಾಜ್​ ಪುಣ್ಯತಿಥಿ: ನುಡಿನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ, ಇತರ ಗಣ್ಯರು; ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಕೆ
ಡಾ.ರಾಜ್​ಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 12, 2022 | 11:36 AM

Share

ನಟಸಾರ್ವಭೌಮ, ವರನಟ ಡಾ.ರಾಜ್‌ಕುಮಾರ್‌ (Dr Rajkumar Death Anniversary) ಅವರ 16ನೇ ವರ್ಷದ ಪುಣ್ಯತಿಥಿಯಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai), ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಗಣ್ಯರು, ಅಭಿಮಾನಿಗಳು ರಾಜ್‌ಕುಮಾರ್ ಅವರನ್ನು ಸ್ಮರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಕೂ ಖಾತೆಯಲ್ಲಿ ‘ಕನ್ನಡಿಗರ ಹೆಮ್ಮೆ, ಕಲಾಸರಸ್ವತಿಯ ವರಪುತ್ರ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ಅಣ್ಣಾವ್ರು ಕನ್ನಡಿಗರ ಹೃದಯಮಂದಿರದಲ್ಲಿ ಚಿರಸ್ಥಾಯಿಯಾಗಿದ್ದಾರೆ’ ಎಂದು ಬರೆದಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮಾಡಿ, ‘ನಾಡಿನ ಕಲಾರಂಗದ ಸರ್ವಶ್ರೇಷ್ಠ ವ್ಯಕ್ತಿತ್ವ, ನಟಸಾರ್ವಭೌಮ, ಬಂಗಾರದ ಮನುಷ್ಯ ಶ್ರೀ ಡಾ.ರಾಜ್‍ಕುಮಾರ್ ಅವರ ಪುಣ್ಯತಿಥಿಯಂದು ಆದರಪೂರ್ವಕ ನಮನಗಳು. ಮನಮುಟ್ಟುವ ನಟನೆ, ಕಂಠಸಿರಿಯ ಮೂಲಕ ಅವರು ಸದಾ ನಮ್ಮೊಂದಿಗೆ ನೆಲೆಸಿದ್ದಾರೆ. ಅಣ್ಣಾವ್ರು ಎಂದಿಗೂ ಅಮರ’ ಎಂದು ಬರೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೋಸ್ಟ್:

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂ ಮಾಡಿ, ‘‘ಅಭಿನಯದಲ್ಲಿ ನಟಸಾರ್ವಭೌಮ, ವ್ಯಕ್ತಿತ್ವದಲ್ಲಿ ಬಂಗಾರದ ಮನುಷ್ಯ. ಹೀಗೆಂದರೆ ಕನ್ನಡಿಗರಿಗೆ ನೆನಪಾಗುವುದು ವರನಟ ಡಾ.ರಾಜ್ ಕುಮಾರ್. ಡಾ.ರಾಜ್ ಅವರು ನಮ್ಮನ್ನಗಲಿ ಇಂದಿಗೆ 16 ವರ್ಷ. ಸಾಂಸ್ಕೃತಿಕ ರಾಯಭಾರಿಯಾಗಿ ನಮ್ಮ ನಾಡು-ನುಡಿಗೆ ಅವರ ಸೇವೆ ಅಪಾರ. ಅಭಿಮಾನಿ ದೇವರುಗಳ ಪಾಲಿನ ಪ್ರೀತಿಯ ಅಣ್ಣಾವ್ರು ಕನ್ನಡದ ಜನಮಾನಸದಲ್ಲಿ ಎಂದಿಗೂ ಅಜರಾಮರ’’ ಎಂದು ಬರೆದಿದ್ದಾರೆ.

‘‘ಸದಭಿರುಚಿಯ ನಟನೆ ಮತ್ತು ಸಿರಿಕಂಠದ ಮೂಲಕ ಕನ್ನಡ ನಾಡಿನ ಜನಮಾನಸದಲ್ಲಿ ಅಜರಾಮರರಾಗಿರುವ ವರನಟ ಡಾ.ರಾಜ್‌ಕುಮಾರ್‌ ಅವರ ಪುಣ್ಯ ತಿಥಿಯಂದು ಗೌರವ ನಮನಗಳು. ನಮ್ಮೆಲ್ಲರ ನೆಚ್ಚಿನ ಅಣ್ಣಾವ್ರ ಕನ್ನಡ ಪ್ರೇಮ ಹಾಗೂ ಸಾಮಾಜಿಕ ಕಳಕಳಿ ಸದಾ ಪ್ರೇರಣೆ’’ ಎಂದು ಸಚಿವ ಅಶ್ವಥ್ ನಾರಾಯಣ್ ಅವರು ಕೂ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ‘‘ವರನಟ, ಗಾನ ಗಂಧರ್ವ, ಪದ್ಮಭೂಷಣ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯತಿಥಿಯಂದು ಆ ಅಪ್ರತಿಮ ಕಲಾವಿದನಿಗೆ ಅಭಿಮಾನಪೂರ್ವಕ ನಮನಗಳು. ಕನ್ನಡ ಚಿತ್ರರಂಗ ಮಾತ್ರವಲ್ಲ, ನಾಡು ನುಡಿಗಾಗಿ ಅವರು ಸಲ್ಲಿಸಿರುವ ಕೊಡುಗೆ, ಅವರ ವ್ಯಕ್ತಿತ್ವ, ಅವರ ಸಾಧನೆಗಳೆಲ್ಲವೂ, ಪ್ರತಿಯೊಬ್ಬ ಕನ್ನಡಿಗನ ಹೃದಯದಲ್ಲಿ ಚಿರಸ್ಥಾಯಿಯಾಗಿದೆ’’ ಎಂದು ಹೇಳಿದ್ದಾರೆ.

ಡಾ.ರಾಜ್​ಗೆ ನಮನ ಸಲ್ಲಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ:

ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ‘‘ಕರ್ನಾಟಕದ ಕಣ್ಮಣಿ, ಕನ್ನಡದ ಅಸ್ಮಿತೆ, ನಮ್ಮ ನೆಲದ ಸಾಕ್ಷಿಪ್ರಜ್ಞೆ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರು, ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ದಿನದಂದು ಆ ಮೇರುನಟನಿಗೆ ನನ್ನ ಗೌರವ ಪ್ರಣಾಮಗಳು’’ ಎಂದು ಬರೆದಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಇಲ್ಲಿದೆ:

ಡಾ.ರಾಜ್ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ:

ವರನಟ ಡಾ.ರಾಜ್​ಕುಮಾರ್ ಅಗಲಿ ಇಂದಿಗೆ 16 ವರ್ಷ ಸಂದಿದೆ. ಅಣ್ಣಾವ್ರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಸಮಾಧಿಗೆ ದೊಡ್ಮನೆ ಕುಟುಂಬ ಭೇಟಿ ನೀಡಿ ಪೂಜೆ ಸಲ್ಲಿಸಿದೆ. ಕಂಠೀರವ ಸ್ಟುಡಿಯೋದ ಅಣ್ಣಾವ್ರ ಸಮಾಧಿಗೆ ಶಿವಣ್ಣ, ರಾಘಣ್ಣ ಹಾಗೂ ಪುನೀತ್​ ಕುಟುಂಬದಿಂದ ಪೂಜೆ ಹಾಗೂ ನಮನ ಸಲ್ಲಿಸಲಾಗಿದೆ.

ಇದನ್ನೂ ಓದಿ: Dr Rajkumar Death Anniversary: ಡಾ. ರಾಜ್ ಪುಣ್ಯಸ್ಮರಣೆ; ಸಹನಟರು, ಕುಟುಂಬದೊಂದಿಗೆ ಅಣ್ಣಾವ್ರು- ಅಪರೂಪದ ಫೋಟೋಗಳು ಇಲ್ಲಿವೆ

ರಾಜ್ ಪುಣ್ಯಸ್ಮರಣೆ: ರಾಜ್​ಕುಮಾರ್ ಕೊಟ್ಟ ಆದರ್ಶಗಳನ್ನು ಚಾಚೂತಪ್ಪದೆ ಪಾಲಿಸುತ್ತಿದ್ದಾರೆ ಮಕ್ಕಳು; ವಿಶೇಷ ಮಾಹಿತಿ ಬಿಚ್ಚಿಟ್ಟ ಪ್ರಥಮ್

Published On - 11:20 am, Tue, 12 April 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?