AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಪ್ರವೇಶಕ್ಕೆ ಮತ್ತೆ ಕಡಿವಾಣ? ಸಿಎಂ ಯಡಿಯೂರಪ್ಪ ಎದುರು ಹೊಸ ಪ್ರಸ್ತಾಪ

ಕರ್ನಾಟಕದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಹೆಚ್ಚುತ್ತಿವೆ. ಇದು ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಕೊರೊನಾ ಪ್ರಕರಣ ಹೆಚ್ಚದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ.

ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಪ್ರವೇಶಕ್ಕೆ ಮತ್ತೆ ಕಡಿವಾಣ? ಸಿಎಂ ಯಡಿಯೂರಪ್ಪ ಎದುರು ಹೊಸ ಪ್ರಸ್ತಾಪ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 29, 2021 | 6:57 PM

Share

ಕೊರೊನಾಗೆ ತತ್ತರಿಸಿದ್ದ ಕನ್ನಡ ಚಿತ್ರರಂಗ ಈಗತಾನೇ ಸುಧಾರಿಸಿಕೊಳ್ಳುತ್ತಿದೆ. ಸ್ಟಾರ್​ ನಟರ ಚಿತ್ರಗಳು ಒಂದಾದಮೇಲೆ ಒಂದರಂತೆ ತೆರೆಗೆ ಬರುತ್ತಿದ್ದು, ಪ್ರೇಕ್ಷಕರು ಕೂಡ ಥಿಯೇಟರ್​ನತ್ತ ಮುಖ ಮಾಡುತ್ತಿದ್ದಾರೆ. ಈಗ ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣ ಹೆಚ್ಚುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಸಿದೆ. ಹೀಗಿರುವಾಗಲೇ ರಾಜ್ಯದ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರ ಬಳಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಹೆಚ್ಚುತ್ತಿವೆ. ಇದು ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಪ್ರಕರಣ ಹೆಚ್ಚದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ, ಕೊವಿಡ್​ ನಿಯಂತ್ರಣಕ್ಕೆ ಟಫ್​ ರೂಲ್ಸ್ ತರಲು ಸುಧಾಕರ್​ ಸಲಹೆ ನೀಡಿದ್ದಾರೆ.

​ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು. ಈ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಅವರಿಗೆ ಸುಧಾಕರ್​ ಸಲಹೆ ನೀಡಿದ್ದಾರೆ. ಒಂದೊಮ್ಮೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಲಹೆ ಸ್ವೀಕರಿಸಿದರೆ ಮುಂಬರುವ ಸಿನಿಮಾಗಳ ಕಲೆಕ್ಷನ್​ ಕುಸಿಯಲಿದೆ.

10 ದಿನಗಳ ಹಿಂದೆ ಈ ಬಗ್ಗೆ ಟ್ವೀಟ್​ ಮಾಡಿದ್ದ ಯಡಿಯೂರಪ್ಪ, ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದಿದ್ದರು.

ಬಿಬಿಎಂಪಿ ಪ್ರಸ್ತಾಪ ರದ್ದಾಗಿತ್ತು..

ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಇದು ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ಕರೆದಿದ್ದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕಡ್ಡಾಯವಾಗಿ ಮಾಸ್ಕ್​ ಧರಿಸುವಂತೆ ಕೋರಿದ್ದರು. ಈ ಮಧ್ಯೆ, ಬೃಹತ್​ ಬೆಂಗಳೂರು  ನಗರ ಪಾಲಿಕೆ ಬೆಂಗಳೂರಲ್ಲಿ ಚಿತ್ರಮಂದಿರದಲ್ಲಿ ಆಸನ ವ್ಯವಸ್ಥೆಯನ್ನು ಶೇ.50ಕ್ಕೆ ಇಳಿಸಬೇಕು ಎಂದು ಸರ್ಕಾರದ ಮುಂದೆ ಪ್ರಸ್ತಾವನೆ ಇರಿಸಿತ್ತು. ಆದರೆ, ಈ ಪ್ರಸ್ತಾಪವನ್ನು ಸರ್ಕಾರ ನಿರಕಾರಿಸಿತ್ತು.

ಇದನ್ನೂ ಓದಿ: ಹೋಳಿ ಹಬ್ಬಕ್ಕೆ ಅಭಿಮಾನಿಗಳಿಗೆ ರಾಬರ್ಟ್​ ಕಡೆಯಿಂದ ಸಿಕ್ತು ಕಲರ್​ಫುಲ್​ ಗಿಫ್ಟ್​!