AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಂಚೇಂದ್ರಿಯಂ’ ಚಿತ್ರದ ಹಾಡು, ಟೀಸರ್ ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್

ಅನೇಕ ಹೊಸಬರ ತಂಡಕ್ಕೆ ಡಾ. ವಿ. ನಾಗೇಂದ್ರ ಪ್ರಸಾದ್​ ಅವರು ಬೆಂಬಲ ನೀಡುತ್ತಾರೆ. ಈಗ ಅವರ ‘ಪಂಚೇಂದ್ರಿಯಂ’ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ. ಸಿನಿಮಾದ ಹಾಡುಗಳು ಮತ್ತು ಟೀಸರ್​ ಬಿಡುಗಡೆ ಮಾಡುವ ಮೂಲಕ ತಮ್ಮ ಬೆಂಬಲ ನೀಡಿದ್ದಾರೆ. ಈ ಸಿನಿಮಾಗೆ ಆರನ್​ ಕಾರ್ತಿಕ್​ ವೆಂಕಟೇಶ್​ ನಿರ್ಮಾಣ ಮಾಡಿದ್ದಾರೆ. ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

‘ಪಂಚೇಂದ್ರಿಯಂ’ ಚಿತ್ರದ ಹಾಡು, ಟೀಸರ್ ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್
ಪಂಚೇಂದ್ರಿಯಂ ಸಿನಿಮಾ ಸುದ್ದಿಗೋಷ್ಠಿ
ಮದನ್​ ಕುಮಾರ್​
|

Updated on: Mar 29, 2024 | 9:16 PM

Share

‘ಪಂಚೇಂದ್ರಿಯಂ’ ಎಂಬ ಡಿಫರೆಂಟ್​ ಶೀರ್ಷಿಕೆಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಹೆಚ್. ಸೋಮಶೇಖರ್ ಅವರು ಈ ಸಿನಿಮಾವನ್ನು ‘ರಾಜ್ ಪ್ರಿಯ ಪ್ರೊಡಕ್ಷನ್ಸ್’ ಲಾಂಛನದ ಮೂಲಕ ನಿರ್ಮಿಸಿದ್ದಾರೆ. ಆರನ್ ಕಾರ್ತಿಕ್ ವೆಂಕಟೇಶ್ ಅವರು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ‘ಪಂಚೇಂದ್ರಿಯಂ’ (Panchendriyam) ಸಿನಿಮಾದ ಹಾಡುಗಳು ಮತ್ತು ಟೀಸರ್ ರಿಲಿಸ್​ ಮಾಡಲಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ಗೀತರಚನಕಾರ ಡಾ. ವಿ. ನಾಗೇಂದ್ರ ಪ್ರಸಾದ್ (Dr V Nagendra Prasad) ಅವರು ಟೀಸರ್ ಮತ್ತು ಹಾಡುಗಳನ್ನು ಅನಾವರಣ ಮಾಡಿ ‘ಪಂಚೇಂದ್ರಿಯಂ’ ತಂಡಕ್ಕೆ ಶುಭ ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ.

ನಿರ್ದೇಶಕ ಆರನ್ ಕಾರ್ತಿಕ್ ವೆಂಕಟೇಶ್ ಅವರು ‘ಪಂಚೇಂದ್ರಿಯಂ’ ಸಿನಿಮಾ ಬಗ್ಗೆ ವಿವರ ನೀಡಿದರು. ‘ದೃಷ್ಟಿ, ಶ್ರವಣ, ರುಚಿ, ವಾಸನೆ ಮತ್ತು ಸ್ಪರ್ಶ ಇವು ಮನುಷ್ಯನ ದೇಹವನ್ನು ರೂಪಿಸುವ 5 ಅಂಗಗಳು. ದೇವರು ಈ ಪಂಚೇಂದ್ರಿಯಗಳನ್ನು ಸದ್ಬಳಿಕೆಗಾಗಿ ಮನುಷ್ಯನಿಗೆ ಕೊಟ್ಟಿದ್ದಾನೆ. ನಾವು ಅವುಗಳ ದುರ್ಬಳಕೆ ಮಾಡಿಕೊಂಡಾಗ ಏನಾಗುತ್ತದೆ ಎಂಬುದೇ ಈ ಸಿನಿಮಾದ ಮುಖ್ಯ ಕಥಾಹಂದರ’ ಎಂದು ಅವರು ಹೇಳಿದ್ದಾರೆ.

ಈ ಸಿನಿಮಾದಲ್ಲಿ 6 ಹಾಡುಗಳಿವೆ. ನಿರ್ದೇಶಕರೇ ಸಂಗೀತ ನೀಡಿದ್ದಾರೆ. ನಾಲ್ಕು ಫೈಟಿಂಗ್​ ಸೀನ್​ಗಳಿವೆ. ಹೆಚ್. ಸೋಮಶೇಖರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಸಿನಿಮಾದ ದ್ವಿತೀಯ ನಾಯಕನಾಗಿ ಅಫ್ಜಲ್ ಅವರು ನಟಿಸಿರುವುದೂ ಅಲ್ಲದೇ, ಕಾರ್ಯಕಾರಿ ನಿರ್ಮಾಪಕನಾಗಿಯೂ ಕೆಲಸ ಮಾಡಿದ್ದಾರೆ. ವಿನಯ್ ಸೂರ್ಯ ಅವರು ‘ಪಂಚೇಂದ್ರಿಯಂ’ ಚಿತ್ರಕ್ಕೆ ನಾಯಕರಾಗಿದ್ದಾರೆ. ವಿದ್ಯಾಶ್ರೀ ಹಾಗೂ ರಾಘವಿ ಅವರು ನಾಯಕಿಯರಾಗಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ತೆರೆಗೆ ಬರಲು ಸಿದ್ಧವಾಯ್ತು ‘ದಾಸವರೇಣ್ಯ ಶ್ರೀ ವಿಜಯ ದಾಸರು’ ಸಿನಿಮಾ; ವಿದೇಶದಲ್ಲೂ ರಿಲೀಸ್  

ದಾಬಸ್ ಪೇಟೆ, ದೇವರಾಯನದುರ್ಗ ಮುಂತಾದ ಕಡೆಗಳಲ್ಲಿ ‘ಪಂಚೇಂದ್ರಿಯಂ’ ಸಿನಿಮಾಗೆ ಚಿತ್ರೀಕರಣ ಮಾಡಲಾಗಿದೆ. ಅಂದುಕೊಂಡಂತೆ ನಡೆದರೆ ಏಪ್ರಿಲ್ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡವದರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ಇದು ನಮ್ಮ ಸಂಸ್ಥೆಯಲ್ಲಿ ನಿರ್ಮಾಣವಾದ 2ನೇ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹ ಬೇಕು’ ಎಂದು ನಿರ್ಮಾಪಕ ಹೆಚ್. ಸೋಮಶೇಖರ್ ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಒಂದು ಸ್ಕ್ಯಾಮ್​ ಕಥೆ; ಏಪ್ರಿಲ್​ 12ರಂದು ಬಯಲಾಗುತ್ತೆ ಹಗರಣ

ವಿನಯ್ ಸೂರ್ಯ ಅವರು ಈ ಮೊದಲು ‘ಜಕ್ಕಣಾಚಾರಿ ಅವನ ತಮ್ಮ ಶುಕ್ಲಾಚಾರಿ’ ಸಿನಿಮಾದಲ್ಲಿ ಬಾಲನಟನಾಗಿ ನಟಿಸಿದ್ದರು. ಈಗ ಅವರು ‘ಪಂಚೇಂದ್ರಿಯಂ’ ಸಿನಿಮಾದ ಮೂಲಕ ಹೀರೋ ಆಗಿದ್ದಾರೆ. ‘ಸಿರಿ ಮ್ಯೂಸಿಕ್’ ಸುರೇಶ್ ಚಿಕ್ಕಣ್ಣ ಕೂಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. ಯತಿರಾಜ್, ಗಣೇಶ್ ರಾವ್, ವಿಕ್ಟರಿ ವಾಸು, ಪವನ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್