AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್‌ ಅಭಿಮಾನಿಗಳಿಂದ ಡಿಸೆಂಬರ್‌ 17ಕ್ಕೆ ನಡೆಯಲಿದೆ ಬೃಹತ್‌ ಪ್ರತಿಭಟನೆ; ಕಾರಣ ಏನು?

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಡಿ.17ರಂದು ಪ್ರತಿಭಟನೆ ಮಾಡಲು ವಿಷ್ಣುವರ್ಧನ್​ ಅಭಿಮಾನಿಗಳು ನಿರ್ಧರಿಸಿದ್ದಾರೆ. ‘ಒಂದು ವೇಳೆ, ಈ ಪ್ರತಿಭಟನೆಗೆ ಸರ್ಕಾರ ಸ್ಪಂದಿಸದಿದ್ದರೆ ದೆಹಲಿಗೆ ಹೋಗಿ ಹೋರಾಟ ಮುಂದುವರಿಸುತ್ತೇವೆ. ಸರ್ಕಾರದ ಮಂತ್ರಿಗಳ ಎಲ್ಲ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗುತ್ತೇವೆ’ ಎಂದು ಅಭಿಮಾನಿಗಳು ತಿಳಿಸಿದ್ದಾರೆ.

ವಿಷ್ಣುವರ್ಧನ್‌ ಅಭಿಮಾನಿಗಳಿಂದ ಡಿಸೆಂಬರ್‌ 17ಕ್ಕೆ ನಡೆಯಲಿದೆ ಬೃಹತ್‌ ಪ್ರತಿಭಟನೆ; ಕಾರಣ ಏನು?
ವಿಷ್ಣುವರ್ಧನ್​ ಅಭಿಮಾನಿಗಳು
ಮದನ್​ ಕುಮಾರ್​
|

Updated on: Nov 28, 2023 | 6:45 PM

Share

ನಟ ವಿಷ್ಣುವರ್ಧನ್​ (Dr Vishnuvardhan) ಅವರ ಪುಣ್ಯಭೂಮಿ ಮತ್ತು ಸ್ಮಾರಕಕ್ಕೆ ಸಂಬಂಧಿಸಿದಂತೆ ಅನೇಕ ವರ್ಷಗಳಿಂದ ಜಟಾಪಟಿ ನಡೆಯುತ್ತಲೇ ಇದೆ. ಈಗ ವಿಷ್ಣು ಅಭಿಮಾನಿಗಳು ಮತ್ತೆ ಗರಂ ಆಗಿದ್ದಾರೆ. ಡಾ. ವಿಷ್ಣುವರ್ಧನ್‌ ಅವರ ಸ್ಮಾರಕವನ್ನು ಮೈಸೂರಿಗೆ ಸ್ಥಳಾಂತರ ಮಾಡಿದ್ದು ಗೊತ್ತೇ ಇದೆ. ಆದರೆ ಸ್ಮಾರಕ ಎಲ್ಲಿಯೇ ನಿರ್ಮಾಣ ಆಗಿದ್ದರೂ ಅಂತ್ಯಸಂಸ್ಕಾರ ಆಗಿರುವ ಜಾಗದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಅವರ ಅಭಿಮಾನಿಗಳು (Vishnuvardhan Fans) ಹಠ ಹಿಡಿದು ಕುಳಿತಿದ್ದಾರೆ. ಅದರಂತೆ, ಪ್ರತಿ ವರ್ಷವೂ ‘ಸಾಹಸ ಸಿಂಹ’ ಅವರ ಹುಟ್ಟುಹಬ್ಬ ಹಾಗೂ ಪುಣ್ಯಸ್ಮರಣೆಯನ್ನು ಬಹಳ ಅದ್ದೂರಿಯಾಗಿ ಅಭಿಮಾನ್‌ ಸ್ಟುಡಿಯೋದ (Abhiman Studio) ಡಾ. ವಿಷ್ಣು ಪುಣ್ಯಭೂಮಿಯಲ್ಲಿ ಆಚರಿಸುವುದನ್ನು ಮುಂದುವರಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಈಗೊಂದು ವಿವಾದ ಎದುರಾಗಿದೆ.

ವಿಷ್ಣುವರ್ಧನ್​ ಅವರ ಅಂತ್ಯ ಸಂಸ್ಕಾರ ನಡೆದ ಅಭಿಮಾನ್‌ ಸ್ಟುಡಿಯೋದ ಒಳಗೆ ಪ್ರವೇಶಿಸಲು ಅಭಿಮಾನಿಗಳಿಗೆ ನಿರ್ಬಂಧಗಳನ್ನು ಹೇರಲಾಗುತ್ತಿದೆ. ಸ್ಟುಡಿಯೋದ ಮಾಲೀಕರಿಂದ ಈ ರೀತಿ ಆಗುತ್ತಿದೆ ಎಂದು ವಿಷ್ಣು ಅಭಿಮಾನಿಗಳು ಆರೋಪಿಸಿದ್ದಾರೆ. ಪ್ರತಿವರ್ಷದ ಹುಟ್ಟುಹಬ್ಬ ಹಾಗೂ ಪುಣ್ಯಸ್ಮರಣೆಗೆ ಹಲವಾರು ತೊಂದರೆಗಳನ್ನು ನೀಡಲಾಗುತ್ತಿದೆ ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​

ವಿಷ್ಣುವರ್ಧನ್​ ಅವರಿಗೆ ಎರಡೆರಡು ಕಡೆ ಸ್ಮಾರಕ ಮತ್ತು ಪುಣ್ಯಭೂಮಿ ಮಾಡುವುದು ರಾಜ್ಯ ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿ ಪಡಿಸಲು ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುತ್ತೇವೆ ಎಂದು ಸರ್ಕಾರಕ್ಕೆ ವಿಷ್ಣು ಫ್ಯಾನ್ಸ್​ ತಿಳಿದ್ದಾರೆ. ಹಾಗಿದ್ದರೂ ಕೂಡ ಸರ್ಕಾರದ ಕಡೆಯಿಂದ ಸೂಕ್ತ ಪ್ರತಿಕ್ರಿಯೆ ಬಂದಿಲ್ಲ ಎಂಬ ಕಾರಣದಿಂದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಆ ಕುರಿತು ‘ಡಾ. ವಿಷ್ಣುವರ್ಧನ್​ ಅಭಿಮಾನಿ ಸಂಘಗಳ ಒಕ್ಕೂಟ’ದ ಮುಖಂಡ ವೀರಕಪುತ್ರ ಶ್ರೀನಿವಾಸ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಪ್ರತಿಭಟನೆ ಕುರಿತ ಸಮಾಲೋಚನಾ ಸಭೆಯನ್ನು ಭಾನುವಾರ (ನ.26) ವೀರಕಪುತ್ರ ಶ್ರೀನಿವಾಸ್​ ಅವರ ನೇತೃತ್ವದಲ್ಲಿ ನಡೆಸಲಾಯಿತು. ಅದರಲ್ಲಿ ಐನೂರಕ್ಕೂ ಹೆಚ್ಚು ಮಂದಿ ಭಾಗಿ ಆಗಿದ್ದರು.

ಇದನ್ನೂ ಓದಿ: ವಿಷ್ಣುವರ್ಧನ್ ಸ್ಮಾರಕದಲ್ಲಿ ಅನಿರುದ್ಧ್ ಹೊಸ ಸಿನಿಮಾಕ್ಕೆ ಚಾಲನೆ: ಕತೆ ತುಸು ಭಿನ್ನ

ಡಿಸೆಂಬರ್‌ 17ರಂದು ಡಾ. ವಿಷ್ಣುವರ್ಧನ್‌ ಅಭಿಮಾನಿ ಸಂಘಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಮಾಡಲಾಗುವುದು. ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ ಆರರ ತನಕ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ಕನ್ನಡಪರ ಸಂಘಟನೆಗಳು, ಕಲಾವಿದರ ಸಂಘ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ವಿಷ್ಣುವರ್ಧನ್‌ ಅವರ ಒಡನಾಡಿಗಳೆಲ್ಲರೂ ಭಾಗವಹಿಸುತ್ತಿದ್ದಾರೆ ಎಂಬ ನಿರೀಕ್ಷೆ ಇದೆ. ಅಂದಾಜು 50 ಸಾವಿರ ಜನರು ಸೇರುವ ಸಾಧ್ಯತೆ ಇದೆ ಎಂದು ವೀರಕಪುತ್ರ ಶ್ರೀನಿವಾಸ್​ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ