AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಜೂ.ಎನ್​ಟಿಆರ್ ಅಸಮಾಧಾನ? ಸ್ಕ್ರಿಪ್ಟ್ ಬದಲಿಸಲು ಸೂಚನೆ

ಜೂ. ಎನ್​​ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಸಿನಿಮಾ ಒಂದು ಮೂಡಿ ಬರುತ್ತಿದೆ.ಈ ಸಿನಿಮಾದ ಶೂಟಿಂಗ್ ಫೂಟೇಜ್ ಬಗ್ಗೆ NTR ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎಂಬ ವದಂತಿಗಳು ಹರಡಿವೆ. ತಮ್ಮ ಹಿಂದಿನ ಸಿನಿಮಾಗಳ ನಂತರ, ಈ ಪ್ರಾಜೆಕ್ಟ್ ಬಗ್ಗೆ NTR ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ ಎನ್ನಲಾಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಜೂ.ಎನ್​ಟಿಆರ್ ಅಸಮಾಧಾನ? ಸ್ಕ್ರಿಪ್ಟ್ ಬದಲಿಸಲು ಸೂಚನೆ
ನೀಲ್-ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Oct 21, 2025 | 7:07 AM

Share

ಜೂನಿಯರ್ ಎನ್​ಟಿಆರ್ (JR NTR) ಹಾಗೂ ಪ್ರಶಾಂತ್ ನೀಲ್ ಸಿನಿಮಾ ಘೋಷಣೆ ಆಗಿ ಸಾಕಷ್ಟು ಸಮಯ ಕಳೆದಿದೆ. ಆದರೆ, ಸಿನಿಮಾದ ಕೆಲಸಗಳು ಇನ್ನೂ ಅಧಿಕೃತವಾಗಿ ಆರಂಭ ಆಗಿರಲಿಲ್ಲ. ಈಗ ಕೆಲ ಹಂತದ ಶೂಟಿಂಗ್ ಪೂರ್ಣಗೊಂಡಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಸಿನಿಮಾ ಬಗ್ಗೆ ಶಾಕಿಂಗ್ ವಿಚಾರ ಒಂದು ಹೊರ ಬಿದ್ದಿದೆ. ಶೂಟ್​ನ ಫೂಟೇಜ್ ನೋಡಿರೋ ಜೂನಿಯರ್ ಎನ್​ಟಿಆರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವದಂತಿಗಳು ಹಬ್ಬಿವೆ.

ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಸಾಧಾರಣ ಎನಿಸಿಕೊಂಡಿತು. ಆ ಬಳಿಕ ಬಂದ ‘ವಾರ್ 2’ ಸಿನಿಮಾ ಡಿಸಾಸ್ಟರ್ ಆಯಿತು. ಈ ಚಿತ್ರದ ಮೂಲಕ ಎನ್​ಟಿಆರ್ ಬಾಲಿವುಡ್ ಕದ ತಟ್ಟಿ ಬಂದಿದ್ದರು. ಆದರೆ, ವರ್ಷಾನುಗಟ್ಟಲೆ ಹಾಕಿದ ಶ್ರಮ ವ್ಯರ್ಥವಾಯಿತು. ಈಗ ಜೂ. ಎನ್​ಟಿಆರ್ ಅವರು ತಮ್ಮ ಹೊಸ ಸಿನಿಮಾ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ.

ಇದನ್ನೂ ಓದಿ
Image
ಗಂಡು ಮಗುವಿಗೆ ಜನ್ಮ ನೀಡಿದ ನಟಿ ಪರಿಣಿತಿ ಚೋಪ್ರಾ
Image
ಶಾಲಲ್ಲಿ ಚಪ್ಪಲಿ ಸುತ್ತಿ ಹೊಡೆದ ಗಿಲ್ಲಿ ನಟ; ಅಶ್ವಿನಿ-ಜಾನ್ವಿ ಗಪ್ ಚುಪ್
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಪ್ರಶಾಂತ್ ನೀಲ್ ಅವರು ಸಿನಿಮಾ ಕೆಲಸಗಳಲ್ಲಿ ತಮ್ಮದೇ ಆದ ಸ್ಟೈಲ್ ಹೊಂದಿದ್ದಾರೆ. ಅದೇ ಸ್ಟೈಲ್​ನಲ್ಲಿ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಆದರೆ, ಸಿನಿಮಾದ ಕೆಲಸ ನೋಡಿದ ಜೂನಿಯರ್ ಎನ್​ಟಿಆರ್ ಅವರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಕೆಲವು ಬದಲಾವಣೆಗಳನ್ನು ಮಾಡಿಕೊಂಡು ಬರುವಂತೆ ಸೂಚನೆ ನೀಡಿದ್ದಾರೆ. ಈ ಕ್ಲ್ಯಾಶ್ ಯಾವ ಹಂತಕ್ಕೆ ಹೋಗುತ್ತದೆ ಎಂಬ ಚರ್ಚೆಗಳೂ ನಡೆದಿವೆ.

ಇನ್ನೂ ಕೆಲವು ಫ್ಯಾನ್ಸ್​ಗಳು ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಿದ್ದಾರೆ. ಇದೆಲ್ಲ ಸುಳ್ಳು, ಇದನ್ನು ನಂಬ ಬೇಡಿ ಎಂದು ಕೋರಿಕೊಂಡಿದ್ದಾರೆ. ಈ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ. ಮೈತ್ರಿ ಮೂವೀ ಮೇಕರ್ಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಜೂ. ಎನ್​ಟಿಆರ್ ಅತಿಥಿ

2018ರಲ್ಲಿ ‘ಕೆಜಿಎಫ್’ ಸಿನಿಮಾ ರಿಲೀಸ್ ಆಯಿತು. 2019ರಲ್ಲಿ ನೀಲ್ ಹಾಗೂ ಎನ್​ಟಿಆರ್ ಭೇಟಿ ಮಾಡಿ, ಕಥೆ ಹೇಳಿದರು. ಅಂದಿನಿಂದಲೂ ಈ ಸಿನಿಮಾ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂಬ ಟೈಟಲ್ ಇಡಲಾಗಿದೆ ಎನ್ನಲಾಗುತ್ತಿದೆ. ಏಪ್ರಿಲ್​ನಲ್ಲಿ ಸಿನಿಮಾದ ಶೂಟ್ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Tue, 21 October 25