ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್

Drone Prathap: ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಮತ್ತು ಅಲ್ಲಿಂದ ಭಾರತಕ್ಕೆ ಬರಬೇಕಿದ್ದ ಎಲ್ಲ ವಿಮಾನಗಳನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ.

ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್
Drone Prathap

Updated on: Feb 28, 2026 | 10:01 PM

ಅಮೆರಿಕ ಮತ್ತು ಇಸ್ರೇಲ್, ಇರಾನಿನ ಮೇಲೆ ದಾಳಿ ಮಾಡಿದ್ದು ಯದ್ಧ ಭೀತಿ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಭಾರತದ ಅನೇಕ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಲಾಗಿದೆ. ವಿಶೇಷವಾಗಿ ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಎಲ್ಲ ವಿಮಾನಗಳನ್ನು ಸಹ ವಿಮಾನಯಾನ ಸಂಸ್ಥೆಗಳು ರದ್ದು ಮಾಡಿದ್ದು, ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ.

ಡ್ರೋನ್ ಪ್ರತಾಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ತಾವು ಅಬುದಾಬಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವುದಾಗಿ ಹೇಳಿದ್ದಾರೆ. ಇಂದು ರಾತ್ರಿ ಅವರು ಬೆಂಗಳೂರಿಗೆ ವಾಪಸ್ ಹೊರಡಬೇಕಿತ್ತಂತೆ ಅದಕ್ಕಾಗಿ ಟಿಕೆಟ್ ಸಹ ಬುಕ್ ಮಾಡಿದ್ದರಂತೆ, ಆದರೆ ಯುದ್ಧ ಭೀತಿಯಿಂದಾಗಿ ಭಾರತದ ಎಲ್ಲ ವಿಮಾನಗಳನ್ನು ರದ್ದು ಮಾಡಲಾಗಿದೆ. ಇದೇ ಕಾರಣಕ್ಕೆ ತಾವು ಅಬುದಾಬಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವುದಾಗಿ ಡ್ರೋನ್ ಪ್ರತಾಪ್ ಹೇಳಿದ್ದಾರೆ.

‘ಮುಂದಿನ 12 ಗಂಟೆಗಳ ಕಾಲದ ಎಲ್ಲ ವಿಮಾನ ಸೇವೆಗಳನ್ನು ರದ್ದು ಮಾಡಿರುವುದಾಗಿ ಹೇಳುತ್ತಿದ್ದಾರೆ, 12 ಗಂಟೆ ಆದ ಬಳಿಕ ಹೊಸ ಅಪ್​​​ಡೇಟ್ ಕೊಡುತ್ತಾರಂತೆ. ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಅನೌನ್ಸ್​​ಮೆಂಟ್ ಮಾಡುತ್ತಿದ್ದಾರೆ’ ಎಂದಿರುವ ಡ್ರೋನ್ ಪ್ರತಾತ್, ಅಲ್ಲಿ ವಿಮಾನಗಳು ಕ್ಯಾನ್ಸಲ್ ಆಗಿರುವ ದೊಡ್ಡ ಪಟ್ಟಿಯನ್ನು ವಿಡಿಯೋನಲ್ಲಿ ತೋರಿಸಿದ್ದಾರೆ. ಮುಂದಿನ ಅರ್ಧದಿನ ಡ್ರೋನ್ ಪ್ರತಾಪ್ ಮತ್ತು ಭಾರತಕ್ಕೆ ಬರಲು ಅಣಿಯಾಗಿದ್ದ ಹಲವಾರು ಮಂದಿ ವಿಮಾನ ನಿಲ್ದಾಣದಲ್ಲಿಯೇ ಕಳೆಯಬೇಕಿದೆ.

ಇದನ್ನೂ ಓದಿ:ಸಹಾಯ ಮಾಡಿದವರನ್ನು ಮರೆಯಲಿಲ್ಲ ಡ್ರೋನ್ ಪ್ರತಾಪ್

ಕಳೆದ ಜನವರಿಯಲ್ಲಿ ವಿಡಿಯೋ ಮಾಡಿದ್ದ ಡ್ರೋನ್ ಪ್ರತಾಪ್, ತಮ್ಮ ಡ್ರೋನಾರ್ಕ್ ಕಂಪೆನಿಯನ್ನು ದುಬೈನಲ್ಲಿ ನೊಂದಣಿ ಮಾಡಿಸಿದ್ದಾಗಿ ಹೇಳಿದ್ದರು. ಇತ್ತೀಚೆಗೆ ದುಬೈಗೆ ಹೋಗಿದ್ದ ಡ್ರೋನ್ ಪ್ರತಾಪ್ ಅಲ್ಲಿ ತಮ್ಮ ಬೆಂಬಲಿಗರೊಬ್ಬರನ್ನು ಭೇಟಿಯಾಗಿ ಅವರಿಗೆ ಉಡುಗೊರೆ ನೀಡಿದ್ದರು. ಬಳಿಕ ಅಲ್ಲಿನ ಫಾರಂ ಒಂದರಲ್ಲಿ ಹಣ್ಣು ಕೃಷಿ ನೋಡಿ, ಮಾಹಿತಿಯನ್ನು ವ್ಲಾಗ್​​​ನಲ್ಲಿ ಹಂಚಿಕೊಂಡಿದ್ದರು. ಅಲ್ಲಿನ ಕನ್ನಡಿಗರ ಹೋಟೆಲ್​​ಗೆ ಭೇಟಿ ನೀಡಿ ಮುದ್ದೆ ಸಹ ಮಾಡಿದ್ದರು. ಆದರೆ ಇದೀಗ ವಾಪಸ್ ಬೆಂಗಳೂರಿಗೆ ಬರುವ ಸಮಯದಲ್ಲಿ ಅವರ ವಿಮಾನ ರದ್ದಾಗಿ ಅಬುದಾಬಿಯಲ್ಲಿ ಸಿಲುಕಿಕೊಳ್ಳುವಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Sat, 28 February 26

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us