Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರ ಕೋಮಲ್ ವಿರುದ್ಧ ಕೇಳಿ ಬಂದ ಗಂಭೀರ ಆರೋಪಕ್ಕೆ ಪರೋಕ್ಷವಾಗಿ ಉತ್ತರ ನೀಡಿದರಾ ಜಗ್ಗೇಶ್?

ಸ್ಯಾಂಡಲ್​ವುಡ್ ನಟ ಕೋಮಲ್ ವಿರುದ್ಧ ಶಾಲಾ ಮಕ್ಕಳಿಗೆ ಸ್ವೆಟರ್ ಹಂಚಿಕೆಯ ಟೆಂಡರ್​ನಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ.

ಸಹೋದರ ಕೋಮಲ್ ವಿರುದ್ಧ ಕೇಳಿ ಬಂದ ಗಂಭೀರ ಆರೋಪಕ್ಕೆ ಪರೋಕ್ಷವಾಗಿ ಉತ್ತರ ನೀಡಿದರಾ ಜಗ್ಗೇಶ್?
ಕೋಮಲ್, ಜಗ್ಗೇಶ್ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on: Aug 25, 2021 | 2:17 PM

ಸ್ಯಾಂಡಲ್​ವುಡ್ ನಟ ಕೋಮಲ್ ವಿರುದ್ಧ ಕೇಳಿಬಂದ ಅಕ್ರಮದ ಆರೋಪಕ್ಕೆ ಸಹೋದರ ಜಗ್ಗೇಶ್ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್ ಮೂಲಕ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು ಆರೋಪ ಮಾಡುವವರ ವಿರುದ್ಧ ಕುಟುಕಿದ್ದಾರೆ. ಜಗ್ಗೇಶ್ ಇಂದು (ಆಗಸ್ಟ್ 25) ಟ್ವೀಟ್ ಮಾಡಿದ್ದು, ಅದರಲ್ಲಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್, ‘ನಾನು ಉತ್ತಮ ಎಂದು ಅಧಮರಿಗೆ ಎದೆಬಗೆದು ವ್ಯರ್ಥ ತೋರಿಕೆ ಏಕೆಬೇಕು! ಆನೆ ರಾಜಮಾರ್ಗದಲ್ಲಿ ಆಗಲಿ ಗಲ್ಲಿಯಲ್ಲಾಗಲಿ ನಡೆವಾಗ ನಾಯಿ ಬೊಗಳುವುದು ಸಹಜ! ನಮ್ಮಗುಣ ಆನೆಯಂತೆ ಇದ್ದಾಗ ಬೊಗಳುವ ನಾಯಿಗಳ ಸಮಕ್ಕೆ ನಾವು ಇಳಿಯಬಾರದು! ಆಕಸ್ಮಿಕ ಸಿಟ್ಟಿಗೆ ಇಳಿದರೆ ನಮ್ಮ ಆನೆಯ ಸ್ಥಾನ ನಾಯಿಗೆ ಸಮ ಆಗುತ್ತದೆ! ನಾನು ಕಲಿತ ನೀತಿಪಾಠ ಇಂದಿನ ಸಮಾಜದ ನಡೆಗೆ!’ ಎಂದು ಬರೆದುಕೊಂಡಿದ್ದಾರೆ.

ಪ್ರಕರಣದಲ್ಲಿ ಕೋಮಲ್ ಅವರಿಗೆ ಹಣಪಡೆಯಲು ಜಗ್ಗೇಶ್ ನೆರವಾಗಿದ್ದಾರೆ  ಎಂದು ಜಗ್ಗೇಶ್ ವಿರುದ್ಧವೂ ಆರೋಪ ಮಾಡಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಜಗ್ಗೇಶ್ ಅವರ ಹಿಂದಿನ ಒಂದು ಪೋಸ್ಟ್ ಒಂದು ಸುದ್ದಿಮಾಡಿತ್ತು. ಏಪ್ರಿಲ್ 27 ರಂದು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸೋದರ ಕೋಮಲ್ ಬಗ್ಗೆ ಬರೆದುಕೊಂಡಿದ್ದ ನಟ ಜಗ್ಗೇಶ್, ‘ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಬಿಬಿಎಂಪಿಯಲ್ಲಿ ಸ್ವಂತ ವ್ಯವಹಾರ ಶುರು ಮಾಡಿ ಯಶಸ್ವಿಯಾಗಿದ್ದಾರೆ. ಆದರೆ ಇತ್ತೀಚೆಗೆ ತಮಗೆ ಬರಬೇಕಾದ ಬಿಲ್​ಗೆ ಅಲ್ಲಿನ ಕೆಲವು ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು. ಹಣ ಪಡೆಯಲು ಓಡಾಡುತ್ತಿದ್ದ ತಮ್ಮನಿಗೆ ಕೊರೊ‌ನಾ ಪಾಸಿಟಿವ್ ಆಗಿ, ಸೀರಿಯಸ್‌ ಆಗಿಬಿಟ್ಟ’ ಎಂದು ಜಗ್ಗೇಶ್ ನೋವು ಹಂಚಿಕೊಂಡಿದ್ದರು. ಈ ಪೋಸ್ಟ್ ಈಗ ಸುದ್ದಿ ಮಾಡಿದ್ದು, ಕೋಮಲ್ ನಡೆಸಿದ್ದ ವ್ಯವಹಾರ ಯಾವುದು, ಪ್ರಸ್ತುತ ಸ್ವೆಟರ್ ಪ್ರಕರಣಕ್ಕೂ ಅದಕ್ಕೂ ಸಂಬಂಧವಿದೆಯೇ ಎಂಬ ಪ್ರಶ್ನೆ ಮೂಡಿತ್ತು. ಇದೀಗ ಜಗ್ಗೇಶ್ ಹೊಸದೊಂದು ಟ್ವೀಟ್ ಮಾಡಿ ಅದಕ್ಕೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಜಗ್ಗೇಶ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಪ್ರಕರಣವೇನು? ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಸ್ವೆಟರ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಟೆಂಡರ್ ಪಡೆದಿರುವ ನಟ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಸಿ.ಎಸ್.ರಘು ಗಂಭೀರ ಆರೋಪ ಮಾಡಿ, ಕಳೆದ ವರ್ಷ ಶಾಲಾ- ಕಾಲೇಜುಗಳು ನಡೆದೇ ಇಲ್ಲ. ಆದರೂ ಮಕ್ಕಳಿಗೆ ಸ್ವೆಟರ್ ವಿತರಣೆ ಮಾಡಿದ್ದೇವೆ ಎಂಬ ಸುಳ್ಳು ಮಾಹಿತಿ ನೀಡಿ ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಹಣವನ್ನು ಪಡೆಯಲು ಕೋಮಲ್ ಸಹೋದರ ಜಗ್ಗೇಶ್ ಹಾಗೂ ಸಚಿವ ಆರ್​,ಅಶೋಕ್ ಅವರಿಂದ ತಪ್ಪು ಮಾಹಿತಿ ನೀಡಿ ಒತ್ತಾಯ ಹಾಕಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ರಘು ಮಾಡಿದ್ದರು.

ಇದಕ್ಕೆ ಸಂಬಂಧಪಟ್ಟಂತೆ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ₹50ಕ್ಕೆ ಸ್ವೆಟರ್ ಹರಾಜು ಹಾಕುವ ಮೂಲಕ ಪ್ರತಿಭಟನೆ ನಡೆಸಿತ್ತು. ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲಾ ಕಾಲೇಜು ಮಕ್ಕಳಿಗೆ 2020-21 ಸಾಲಿನಲ್ಲಿ ಉಚಿತ ಸ್ಪೆಟರ್ ನೀಡಿದ್ದು, ಅದಕ್ಕಾಗಿ ಸುಮಾರು 1 ಕೋಟಿ 72 ಲಕ್ಷದಷ್ಟು ಹಣವನ್ನು ಬಿಡುಗಡೆಗೊಳಿಸಿದೆ. ವಾಸ್ತವವಾಗಿ 2020/21 ರ ಶೈಕ್ಷಣಿಕ ವರ್ಷದಲ್ಲಿ ಶಾಲಾ ಕಾಲೇಜುಗಳೇ ನಡೆದಿಲ್ಲ. ಈ ಸಮಯದಲ್ಲಿ ಇನ್ಯಾರಿಗೆ ಸ್ಪೆಟರ್ ಗಳನ್ನ ಅಧಿಕಾರಿಗಳು ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಕರಣದ ಸಂಪೂರ್ಣ ವರದಿ ಇಲ್ಲಿದೆ:

ಪ್ರಕರಣದ ಕುರಿತಂತೆ ಕೋಮಲ್ ಪ್ರತಿಕ್ರಿಯೆ ಏನು? ನಾನು ಯಾವುದೇ ಟೆಂಡರ್‌ ಅಕ್ರಮದಲ್ಲಿ ಭಾಗಿಯಾಗಿಲ್ಲ, ಸುಳ್ಳು ಆರೋಪ ಹೊರಿಸುತ್ತಿದ್ದಾರೆ ಎಂದು ಟಿವಿ9ಗೆ ನಟ ಜಗ್ಗೇಶ್‌ ಸಹೋದರ ನಟ ಕೋಮಲ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿರುವುದರಿಂದ ನಂತರ ಪ್ರತಿಕ್ರಿಯಿಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

ಮಹಿಳಾ ಫುಟ್​ಬಾಲರ್ಸ್​ ಎದೆ ಫ್ಲಾಟ್, ಅವರು ಮದುವೆಗೆ ಸೂಕ್ತರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾದ ಟಾಂಜೇನಿಯಾ ಅಧ್ಯಕ್ಷೆ

ವಿದ್ಯುತ್ ಕಂಬಗಳು ವಾಲಿದರೂ ತೆಲೆಕೆಡಿಸಿಕೊಳ್ಳದ ಅಧಿಕಾರಿಗಳು; ತೂಗುಕತ್ತಿಯಂತೆ ನೇತಾಡುವ ತಂತಿಗಳಿಂದ ಜನರಿಗೆ ಆತಂಕ

(DSS alleged that Sandalwood actor Komal involved in BBMP Sweater tender corruption and Jaggesh replied)

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !