Sanjay Dutt: ಸಂಜಯ್ ದತ್ ಹುಟ್ಟುಹಬ್ಬಕ್ಕೆ ಟೀಸರ್ ಮೂಲಕ ಸರ್ಪ್ರೈಸ್ ನೀಡಲಿದೆಯಾ ಕೆಜಿಎಫ್-2 ಚಿತ್ರ ತಂಡ?

KGF 2 Teaser: ನಾಳೆ ಅಂದರೆ ಜುಲೈ 29ಕ್ಕೆ ನಟ ಸಂಜಯ್ ದತ್ ಜನ್ಮದಿನ. ಕಳೆದ ಬಾರಿಯ ಹುಟ್ಟುಹಬ್ಬಕ್ಕೆ ಕೆಜಿಎಫ್ 2 ಚಿತ್ರತಂಡ ಅಧೀರನ ಫಸ್ಟ್ ಲುಕ್ ಬಿಡುಗಡೆ ಮಾಡಿತ್ತು. ಈ ಬಾರಿ ಹೊಸ ಟೀಸರ್ ಅಥವಾ ಪೋಸ್ಟರ್ ಬಿಡುಗಡೆ ಮಾಡಿ ಸರ್ಪ್ರೈಸ್ ನೀಡಬಹುದು ಎನ್ನಲಾಗಿದೆ.

Sanjay Dutt: ಸಂಜಯ್ ದತ್ ಹುಟ್ಟುಹಬ್ಬಕ್ಕೆ ಟೀಸರ್ ಮೂಲಕ ಸರ್ಪ್ರೈಸ್ ನೀಡಲಿದೆಯಾ ಕೆಜಿಎಫ್-2 ಚಿತ್ರ ತಂಡ?
ಕಳೆದ ಬಾರಿ ಸಂಜಯ್ ದತ್ ಜನ್ಮದಿನಕ್ಕೆ ಚಿತ್ರತಂಡ ಬಿಡುಗಡೆ ಮಾಡಿದ್ದ ಪೋಸ್ಟರ್
Follow us
TV9 Web
| Updated By: Digi Tech Desk

Updated on:Jul 29, 2021 | 9:14 AM

ರಾಷ್ಟ್ರದಾದ್ಯಂತ ಕುತೂಹಲ ಕೆರಳಿಸಿರುವ ಕೆಜಿಎಫ್-2 ಚಿತ್ರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಲು ತಯಾರಾಗಿದೆ ಎಂಬ ಸುದ್ದಿ ಬಂದಿದೆ. ಕಳೆದ ವರ್ಷ ಸಂಜಯ್ ದತ್ ಹುಟ್ಟುಹಬ್ಬದಂದು ಅವರ ಪೋಸ್ಟರ್ ಬಿಡುಗಡೆ ಮಾಡಿದ್ದ ಚಿತ್ರತಂಡ, ಈ ಬಾರಿ ಟೀಸರ್ ಅಥವಾ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಸಂಜಯ್ ದತ್ ಜುಲೈ 29 ಅಂದರೆ ನಾಳೆ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದು ಕೆಜಿಎಫ್-2 ಚಿತ್ರತಂಡ ಅವರಿಗೆ ಬಿಗ್ ಸರ್ಪ್ರೈಸ್ ನೀಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. 

ಬಾಲಿವುಡ್​ನ ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಿದ್ದು ದೇಶದಾದ್ಯಂತ ಕೆಜಿಎಫ್-2 ಕುರಿತ ನಿರೀಕ್ಷೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಟ್ವಿಟರ್​ನಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ ನಾಳೆ ಚಿತ್ರತಂಡ ಮತ್ತೊಂದು ಟೀಸರ್ ಅಥವಾ ಪೋಸ್ಟರ್ ಬಿಡುಗಡೆ ಮಾಡಲಿದೆ. ಆದರೆ ಇದನ್ನು ಹೊಂಬಾಳೆ ಫಿಲ್ಮ್ಸ್ ಇನ್ನೂ ಅಧಿಕೃತವಾಗಿ ಖಚಿತಪಡಿಸಿಲ್ಲ. ಅಷ್ಟಕ್ಕೂ ಸುದ್ದಿ ಇರುವುದು ಚಿತ್ರತಂಡ ಸರ್ಪ್ರೈಸ್ ನೀಡಲಿದೆ ಎಂದು! ಹಾಗಾಗಿ ನಾಳೆ ಕೆಜಿಎಫ್-2ನ ಅಧೀರನ ತುಣುಕೊಂದು ಲಭ್ಯವಾಗಬಹುದು ಎಂಬುದು ಅಭಿಮಾನಿಗಳ ಅಂಬೋಣ.

ಸಂಜಯ್ ದತ್ ಕೆಜಿಎಫ್-2 ಮೂಲಕ ದಕ್ಷಿಣ ಭಾರತದ ಚಿತ್ರರಂಗವನ್ನು ಪ್ರವೇಶಿಸುತ್ತಿದ್ದಾರೆ. ಚಿತ್ರದಲ್ಲಿ ಅವರು ಯಶ್ ಅವರಿಗೆ ಪ್ರತಿನಾಯಕ ‘ಅಧೀರ’ನಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಶೂಟಿಂಗ್ ಈಗಾಗಲೇ ಮುಗಿದಿದ್ದು, ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಎಲ್ಲವೂ ನಿಗದಿಯಂತೆ ನಡೆದಿದ್ದರೆ ಜುಲೈ 16ಕ್ಕೆ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಚಿತ್ರ ಬಿಡುಗಡೆಯಾಗಿಲ್ಲ. ಚಿತ್ರ ಬಿಡುಗಡೆಯಾಗುವ ಹೊಸ ದಿನಾಂಕವನ್ನು ಚಿತ್ರ ತಂಡ ಸದ್ಯದಲ್ಲೇ ಘೋಷಿಸಲಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್-2 ಚಿತ್ರದಲ್ಲಿ ಪ್ರಕಾಶ್ ರಾಜ್, ಶ್ರೀನಿಧಿ ಶೆಟ್ಟಿ ಸೇರಿದಂತೆ ತಾರಾ ಬಳಗವೂ ಬಲು ದೊಡ್ಡದಿದೆ. ಕೆಜಿಎಫ್-2 ಪೂರ್ಣಗೊಳಿಸಿರುವ ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ರಭಾಸ್ ನಟನೆಯ ‘ಸಲಾರ್’ ಚಿತ್ರದ ಕೆಲಸಗಳಲ್ಲಿ ತಲ್ಲೀನರಾಗಿದ್ದಾರೆ. ಸಲಾರ್- 2022ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಅಶ್ಲೀಲ ಸಿನಿಮಾದಲ್ಲಿ ನಟಿಸೋದು ತಪ್ಪು ಎಂದಿದ್ದು ಯಾರು?’ ಸಲ್ಮಾನ್​ ಖಾನ್​ ಮಾಜಿ ಪ್ರೇಯಸಿಯ ಖಡಕ್​ ಪ್ರಶ್ನೆ  

ಇದನ್ನೂ ಓದಿ: Alia Bhatt: ರಣಬೀರ್ ಕಪೂರ್ ಟೋಪಿ ಕದ್ದ ಆಲಿಯಾ ಭಟ್!

(Due to Sanjay Dutt Birthday KGF Team may release a poster or teaser on July 29th)

Published On - 6:12 pm, Wed, 28 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ