ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ

ಎಸ್​. ನಾರಾಯಣ್​ ನಿರ್ದೇಶನದ ಈ ಹೊಸ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ
ದುನಿಯಾ ವಿಜಯ್​, ಶ್ರೇಯಸ್​ ಮಂಜು

Updated on: Jun 02, 2024 | 11:23 PM

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರಂಥ ಕಲಾವಿದರ ಸಿನಿಮಾಗಳನ್ನು ನಿರ್ದೇಶಿಸಿದ ಖ್ಯಾತ ಡೈರೆಕ್ಟರ್​ ಎಸ್. ನಾರಾಯಣ್ (S Narayan) ಅವರ ಹೊಸ ಸಿನಿಮಾ ‘ಪ್ರೊಡಕ್ಷನ್ ನಂ 1’ ಕೆಲವೇ ದಿನಗಳ ಹಿಂದೆ ಆರಂಭ ಆಯಿತು. ಈ ಹೊಸ ಸಿನಿಮಾದ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ನಟಿಸುತ್ತಿದ್ದಾರೆ. ದುನಿಯಾ ವಿಜಯ್ (Duniya Vijay) ಅವರು ಜೂನ್ 5ರಿಂದ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು (Shreyas Manju) ಹಾಗೂ ಇತರ ಕಲಾವಿದರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಕೆ. ಮಂಜು ಮತ್ತು ರಮೇಶ್ ಯಾದವ್ ಅವರು ಜಂಟಿಯಾಗಿ ‘ಈಶ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಈಶ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಇದು. ಎಸ್. ನಾರಾಯಣ್, ರಮೇಶ್ ಯಾದವ್, ಕೆ. ಮಂಜು, ದುನಿಯಾ ವಿಜಯ್ ಅವರ ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಈ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾಗೆ ಬೃಂದಾ ನಾಯಕಿ ಆಗಿದ್ದಾರೆ. ಡಿಫರೆಂಟ್​ ಪಾತ್ರದಲ್ಲಿ ಸಾಧು ಕೋಕಿಲ ನಟಿಸಲಿದ್ದಾರೆ.

ಇದನ್ನೂ ಓದಿ: ‘ಬಡವರ ಮಕ್ಕಳಿಗೆ ಕೆಲಸ ಕೊಡಿ’: ಕೇಂದ್ರ ಸರ್ಕಾರಕ್ಕೆ ದುನಿಯಾ ವಿಜಯ್​ ಒತ್ತಾಯ

ಇನ್ನುಳಿದ ಪಾತ್ರವರ್ಗದಲ್ಲಿ ರಂಗಾಯಣ ರಘು, ಶರತ್ ಲೋಹಿತಾಶ್ವ, ತಾರಾ ಅನುರಾಧಾ, ಪ್ರಮೋದ್ ಶೆಟ್ಟಿ, ಗಿರಿ, ಕಲ್ಯಾಣಿ, ಜಯರಾಂ, ಮಂಜು ಪಾವಗಡ, ಸುಜಯ್ ಶಾಸ್ತ್ರಿ ಮುಂತಾದವರು ಇದ್ದಾರೆ. ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಜೆ‌ಸ್ಸಿ ಗಿಫ್ಟ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಅವರ ಸಂಕಲನ, ವಿನೋದ್ ಅವರ ಸಾಹಸ ನಿರ್ದೇಶನ, ಸಂತು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us