ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಚಿತ್ರಕ್ಕೆ ಸಿಕ್ತು ಚಾಲನೆ; ಸೆಲೆಬ್ರಿಟಿಗಳ ಸಾಥ್

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಚಿತ್ರಕ್ಕೆ ಸಿಕ್ತು ಚಾಲನೆ; ಸೆಲೆಬ್ರಿಟಿಗಳ ಸಾಥ್
‘ಭೀಮ’ ಸಿನಿಮಾ ತಂಡ
Follow us
TV9 Web
| Updated By: ಮದನ್​ ಕುಮಾರ್​

Updated on: Apr 19, 2022 | 8:03 AM

ಕಳೆದ ವರ್ಷ ತೆರೆಗೆ ಬಂದ ದುನಿಯಾ ವಿಜಯ್ (Duniya Vijay) ನಟನೆಯ ‘ಸಲಗ’ ಸಿನಿಮಾ (Salaga Movie) ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದಲ್ಲಿ ದುನಿಯಾ ವಿಜಯ್​ ನಟಿಸೋದು ಮಾತ್ರವಲ್ಲ, ಆ್ಯಕ್ಷನ್​-ಕಟ್​ ಕೂಡ ಹೇಳಿದ್ದರು. ಮೊದಲ ನಿರ್ದೇಶನದಲ್ಲೇ ಅವರು ಗೆದ್ದು ಬೀಗಿದ್ದರು. ‘ಸಲಗ’ ಬಳಿಕ ದುನಿಯಾ ವಿಜಯ್​ ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ಈ ಚಿತ್ರಕ್ಕೆ ‘ಭೀಮ’ (Bheema Movie) ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ನಡೆದಿದೆ. ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅನೇಕ ಸ್ಟಾರ್​ ನಟರು ಈ ಚಿತ್ರವನ್ನು ಹೊಗಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ. ಅವರ ನಟನೆಯ 28ನೇ ಸಿನಿಮಾ ಇದಾಗಿದ್ದು, ಕೃಷ್ಣ ಸಾರ್ಥಕ್​ ಹಾಗೂ ಜಗದೀಶ್​ ಗೌಡ ‘ಭೀಮ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

‘ಕಂಡ ಕೆಲವು ಘಟನೆಗಳನ್ನು ಆಧರಿಸಿ ಕಥೆ ಸಿದ್ಧಪಡಿಸಿಕೊಂಡಿದ್ದೇನೆ. ಚಿತ್ರಕ್ಕೆ ಶೀರ್ಷಿಕೆ ಏನಿಡಬೇಕೆಂದು ಬಹಳ ದಿನಗಳ ಚರ್ಚೆ ನಡೆದ ನಂತರ ‘ಭೀಮ’ ಎಂಬ ಶೀರ್ಷಿಕೆ ಆಯ್ಕೆ ಮಾಡಿಕೊಂಡಿದ್ದೇವೆ. ಟೈಟಲ್ ಕೊಡಿಸಿದ ಜಗದೀಶ್ ಅವರಿಗೆ ಧನ್ಯವಾದ. ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಲಿದ್ದಾರೆ. ನಿರ್ದೇಶನದ ಜೊತೆಗೆ ನಾನು ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದೇನೆ’ ಎಂದರು ದುನಿಯಾ ವಿಜಯ್.

‘ಜಯಮ್ಮನ ಮಗ ಚಿತ್ರದಲ್ಲಿ ನನ್ನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಲ್ಯಾಣಿ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬ್ಲ್ಯಾಕ್ ಡ್ರ್ಯಾಗನ್ ಮಂಜು ಅವರು ಸೇರಿದಂತೆ ಸಾಕಷ್ಟು ಹೊಸ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಾಯಕಿಯ ಆಯ್ಕೆ ನಡೆಯುತ್ತಿದೆ. ನನ್ನ ‘ಸಲಗ’ ಚಿತ್ರದ ಮುಹೂರ್ತ ಸಮಾರಂಭ ಸಹ ಈ ದೇವಸ್ಥಾನದಲ್ಲಿ ನಡೆದಿತ್ತು. ಎರಡನೇ ಚಿತ್ರದ ಮುಹೂರ್ತ ಇಲ್ಲೇ ನಡೆಯಬೇಕೆಂದು ಆಸೆಯಿತ್ತು’ ಎಂದರು ವಿಜಯ್.

ಇದನ್ನೂ ಓದಿ: Duniya Vijay: ‘ಎನ್​ಬಿಕೆ107’ ಚಿತ್ರದ ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್