ಕರ್ನಾಟಕದ ಜನ ಪ್ರಜ್ಞಾವಂತರು ಎಂದ ದುನಿಯಾ ವಿಜಯ್ ಗೆದ್ದ ಪಕ್ಷದ ಬಳಿ ಮಾಡಿದರೊಂದು ಮನವಿ

Duniya Vijay: ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿರುವ ದುನಿಯಾ ವಿಜಯ್, ಕರ್ನಾಟಕದ ಜನ ಪ್ರಜ್ಞಾವಂತರು ಎಂದಿದ್ದಾರೆ. ಜೊತೆಗೆ ಗೆದ್ದ ಪಕ್ಷಕ್ಕೆ ಮನವಿಯೊಂದನ್ನು ಮಾಡಿದ್ದಾರೆ.

ಕರ್ನಾಟಕದ ಜನ ಪ್ರಜ್ಞಾವಂತರು ಎಂದ ದುನಿಯಾ ವಿಜಯ್ ಗೆದ್ದ ಪಕ್ಷದ ಬಳಿ ಮಾಡಿದರೊಂದು ಮನವಿ
ದುನಿಯಾ ವಿಜಯ್
Follow us
ಮಂಜುನಾಥ ಸಿ.
|

Updated on: May 13, 2023 | 10:18 PM

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election 2023) ಹೊರಬಿದ್ದಾಗಿದೆ. ಮತದಾನ ಮುಗಿದ ದಿನ ಸಂಜೆ ಹೊರಬಿದ್ದಿದ್ದ ಸಮೀಕ್ಷೆಗಳನ್ನು ನೋಡಿ ಈ ಬಾರಿಯೂ ಅತಂತ್ರ ಸರ್ಕಾರ ಆಗಬಹುದು ಎಂದುಕೊಂಡಿದ್ದ ಹಲವರಿಗೆ ನಿರಾಳತೆ ತಂದಿದೆ. ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯ ಸಾಧಿಸಿದೆ. ಎಲ್ಲ ಸಮೀಕ್ಷೆಗಳನ್ನು ಸುಳ್ಳು ಮಾಡಿ 136 ಸೀಟುಗಳಲ್ಲಿ ಜಯ ಸಾಧಿಸಿದೆ. ಬಿಜೆಪಿ ಪಕ್ಷ 65ಕ್ಷೇತ್ರಗಳನ್ನು ಗೆಲ್ಲುವಲ್ಲಿ ಸಫಲವಾಗಿದೆ. ಸಮೀಕ್ಷೆಗಳನ್ನು ನೋಡಿ ಕಿಂಗ್ ಮೇಕರ್ ಆಗುವ ಕನಸಿನಲ್ಲಿದ್ದ ಜೆಡಿಎಸ್ 19 ಕ್ಷೇತ್ರಗಳಿಗೆ ನಿಯಂತ್ರಿಸಲ್ಪಟ್ಟಿದೆ. ಕರ್ನಾಟಕದಲ್ಲಿ ಬಹುಮತದ ಸರ್ಕಾರ ಬಂದಿರುವುದನ್ನು ಹಲವರು ಸಂಭ್ರಮಿಸುತ್ತಿದ್ದ ಅವರಲ್ಲಿ ನಟ ದುನಿಯಾ ವಿಜಯ್ (Duniya Vijay) ಸಹ ಒಬ್ಬರು.

ನಟ, ನಿರ್ದೇಶಕ ದುನಿಯಾ ವಿಜಯ್, ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗೆದ್ದಿರುವ ಪಕ್ಷಕ್ಕೆ ಶುಭಾಷಯ ಹೇಳಿರುವ ಜೊತೆಗೆ, ಸರ್ಕಾರದಿಂದ ತಾವು ಏನನ್ನು ನಿರೀಕ್ಷಿಸುತ್ತಿರುವುದಾಗಿಯೂ ಹೇಳಿದ್ದಾರೆ. ಜೊತೆಗೆ ಬಹುಮತದ ಸರ್ಕಾರ ಆರಿಸಿರುವ ಕರ್ನಾಟಕದ ಜನತೆ ಪ್ರಜ್ಞಾವಂತರು ಎಂದು ಸಹ ಹೇಳಿದ್ದಾರೆ.

”ಚುನಾವಣೆ ಮುಗಿದು ಫಲಿತಾಂಶವೂ ಬಂದಾಯಿತು. ಇನ್ನೇನಿದ್ದರು ಹೊಸ ಸರ್ಕಾರದ ಆಟ. ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಎಲ್ಲರ ಬದುಕು ಅತಂತ್ರವಾಗುತ್ತದೆ ಎಂಬ ಸುದ್ದಿಗಳು ಹರಿದಾಡಿದವು. ಆದರೆ ಕರುನಾಡಿನ ಜನ ಸಂಪೂರ್ಣ ಬಹುಮತವನ್ನು ಒಂದು ಪಕ್ಷಕ್ಕೆ ನೀಡಿ ತಾವು ಪ್ರಜ್ಞಾವಂತರು ಎಂಬುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಗೆದ್ದವರಿಗೆಲ್ಲ ಶುಭಾಶಯಗಳು, ಸೋತವರು ಆತ್ಮ ವಿಮರ್ಶೆ ಮಾಡಿಕೊಳ್ಳವ ಕಾಲ. ಸಂಪೂರ್ಣ ಬಹುಮತ ಪಡೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳು. ಸಾಮಾನ್ಯ ಜನ ನೆಮ್ಮದಿಯಿಂದ ಜೀವನ ನಡೆಸುವಂತೆ ಉತ್ತಮ ಆಡಳಿತ ನೀಡಿ” ಎಂದು ಮನವಿ ಮಾಡಿದ್ದಾರೆ.

ದುನಿಯಾ ವಿಜಯ್ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು ಆದರೆ ಅದು ಸಿದ್ದರಾಮಯ್ಯ ಅವರ ಪರವಾಗಿ ಮಾತ್ರ. ಸಿದ್ದರಾಮಯ್ಯ ಅವರ ಪರವಾಗಿ ವರುಣಾ ಕ್ಷೇತ್ರದಲ್ಲಿ ನಟ ದುನಿಯಾ ವಿಜಯ್ ಪ್ರಚಾರ ಮಾಡಿದ್ದರು. ಸಿದ್ದರಾಮಯ್ಯ ಅವರ ಅಭಿಮಾನಿಯಾಗಿರುವ ದುನಿಯಾ ವಿಜಯ್ ಈ ಹಿಂದೆ ತಮ್ಮ ಸಿನಿಮಾದ ಮುಹೂರ್ತಕ್ಕೂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದರು.

ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ಭೀಮ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಸಿನಿಮಾದ ಕೆಲವು ಪೋಸ್ಟರ್​ಗಳನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ. ಸಿನಿಮಾದ ಟೀಸರ್, ಟ್ರೈಲರ್​ಗಳು ಬಿಡುಗಡೆ ಆಗುವುದು ಬಾಕಿ ಇದ್ದು, ಸಿನಿಮಾದ ಬಿಡುಗಡೆ ದಿನಾಂಕದ ಘೋಷಣೆಯೂ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ