AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುನಿಯಾ’ ವಿಜಯ್ – ನಾಗರತ್ನ ದಾಂಪತ್ಯ ಅಂತ್ಯ; 2 ಕೋಟಿ ರೂ. ಜೀವನಾಂಶ ನೀಡಲು ಆದೇಶ

ಕನ್ನಡದ ಖ್ಯಾತ ನಟ 'ದುನಿಯಾ' ವಿಜಯ್ ಹಾಗೂ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ವಿಚ್ಛೇದನ ನೀಡುವ ಮೂಲಕ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅಂತ್ಯಹಾಡಿದೆ. ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯ ಮತ್ತು ವಿಜಯ್ ಅವರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ, ನಾಗರತ್ನ ಅವರಿಗೆ 2 ಕೋಟಿ ಜೀವನಾಂಶ ನೀಡುವಂತೆ ಕೋರ್ಟ್ ಆದೇಶಿಸಿದೆ.

‘ದುನಿಯಾ’ ವಿಜಯ್ - ನಾಗರತ್ನ ದಾಂಪತ್ಯ ಅಂತ್ಯ; 2 ಕೋಟಿ ರೂ. ಜೀವನಾಂಶ ನೀಡಲು ಆದೇಶ
ವಿಜಯ್-ನಾಗರತ್ನ Image Credit source: Duniya Vijay Instagram
ರಮೇಶ್​ ಎಮ್​.
| Edited By: |

Updated on:Sep 03, 2026 | 12:23 PM

Share

ಮುಖ್ಯಾಂಶಗಳು

  • ದುನಿಯಾ ವಿಜಯ್ ದಾಂಪತ್ಯಕ್ಕೆ ಬ್ರೇಕ್
  • ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್
  • ಪತ್ನಿಗೆ 2 ಕೋಟಿ ಜೀವನಾಂಶ  

ಸ್ಯಾಂಡಲ್‌ವುಡ್‌ನ ಖ್ಯಾತ ನಟ ‘ದುನಿಯಾ’ ವಿಜಯ್ (Duniya Vijay) ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಕೊನೆಗೂ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಹಲವು ವರ್ಷಗಳಿಂದ ಕಾನೂನು ಸಮರಕ್ಕೆ ಕಾರಣವಾಗಿದ್ದ ಈ ವೈವಾಹಿಕ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ ಉನ್ನತ ನ್ಯಾಯಪೀಠವು ಈ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡಿದೆ. ವಿಚ್ಛೇದನ ಮಂಜೂರು ಮಾಡುವ ಜೊತೆಗೆ, ಪತ್ನಿ ನಾಗರತ್ನ ಅವರಿಗೆ 2 ಕೋಟಿ ರೂಪಾಯಿಗಳ ಜೀವನಾಂಶ ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯ ಮತ್ತು ಅವರ ಜೀವನ ನಿರ್ವಹಣೆಯ ಪ್ರಮುಖ ಅಂಶವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಇದರೊಂದಿಗೆ ನಟ ದುನಿಯಾ ವಿಜಯ್ ಅವರ ಪ್ರಸ್ತುತ ಸಾಮಾಜಿಕ ಸ್ಥಾನಮಾನ, ವೃತ್ತಿಪರ ಗಳಿಕೆ ಹಾಗೂ ಹಣಕಾಸಿನ ಸ್ಥಿತಿಗತಿಗಳನ್ನು ಕೂಲಂಕುಷವಾಗಿ ಪರಾಮರ್ಶಿಸಿ 2 ಕೋಟಿ ಜೀವನಾಂಶದ ಮೊತ್ತವನ್ನು ನಿಗದಿಪಡಿಸಲಾಗಿದೆ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ದುನಿಯಾ ವಿಜಯ್ ಸಿನಿಮಾದಲ್ಲಿ ಖಡಕ್ ಪಾತ್ರದ ಮೂಲಕ ಎಂಟ್ರಿ ಕೊಟ್ಟ ಟಬು

ಕನ್ನಡ ಚಿತ್ರರಂಗದಲ್ಲಿ ‘ದುನಿಯಾ’ ಸಿನಿಮಾದ ಮೂಲಕ ಮನೆಮಾತಾಗಿದ್ದ ವಿಜಯ್ ಅವರ ವೈಯಕ್ತಿಕ ಜೀವನದ ಈ ವಿವಾದ ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದರು.ಇದೀಗ ಉನ್ನತ ನ್ಯಾಯಾಲಯದ ಈ ತೀರ್ಪಿನಿಂದಾಗಿ ದಾಂಪತ್ಯ ಜೀವನಕ್ಕೆ ಅಧಿಕೃತ ಕೊನೆ ಸಿಕ್ಕಂತಾಗಿದೆ. ವಿಜಯ್ ಅವರು ಸದ್ಯ ಕೀರ್ತಿ ಎಂಬುವವರ ಜೊತೆ ವಾಸವಿದ್ದಾರೆ.

ನಾಗರತ್ನ ಜೊತೆ ದುನಿಯಾ ವಿಜಯ್ 1999ರಲ್ಲಿ ಮದುವೆ ಆಗಿದ್ದರು. ಹಲವು ವರ್ಷಗಳ ಕಾಲ ಸಂಸಾರ ನಡೆಸಿದ್ದರು. ದುನಿಯಾ ವಿಜಯ್ ಅವರು 2013ರಲ್ಲಿ ಡಿವೋರ್ಸ್ ಅರ್ಜಿ ಸಲ್ಲಿಕೆ ಮಾಡಿದ್ದರು. ಹಲವು ವರ್ಷಗಳ ಕಾನೂನು ಸಮರ ಈಗ ಕೊನೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:16 pm, Thu, 3 September 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ನದಿಗಳ ಜೋಡಣೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ
ನದಿಗಳ ಜೋಡಣೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ