AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Apr 15, 2021 | 3:13 PM

Share

ಮೈಸೂರು: ನಗರದ ಲಲಿತ್ ಮಹಲ್ ಪ್ಯಾಲೆಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೆಲಿಪ್ಯಾಡ್​ ಯೋಜನೆ ಬಗ್ಗೆ ಈಗಾಗಲೇ ಸಾಕಷ್ಟು ವಿರೋಧ ಕೇಳಿಬಂದಿತ್ತು. ಈ ಯೋಜನೆ ಕೈಬಿಡುವಂತೆ ಅನೇಕರು ಆಗ್ರಹಿಸಿದ್ದರು. ಜತೆಗೆ ‘ಸೇವ್ ಮೈಸೂರು’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈಗ ಮೈಸೂರಿನಲ್ಲಿ ಮರ ಕಡಿದು ಹೆಲಿ ಟೂರಿಸಂ ಮಾಡೋ ವಿಚಾರದ ಬಗ್ಗೆ ನಟ ದುನಿಯಾ ವಿಜಯ್​ ಅಸಮಾಧಾನ ಹೊರ ಹಾಕಿದ್ದು, ‘ಸೇವ್ ಮೈಸೂರು’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಪೋಸ್ಟ್ ಹಾಕಿದ್ದಾರೆ. ಹೆಲಿಟೂರಿಸಂ​ಗೆ ಮರ ಕಡಿಯೋ ವಿಚಾರ ಗಮನಕ್ಕೆ ಬಂತು. ಮರ ಬೆಳೆಸಲಾಗದಿದ್ದರೂ, ಕಡಿಯಲು ಮುಂದಾಗಬಾರದು. ಮರ ಕಡಿಯೋದನ್ನ ಬಿಟ್ಟು ಪರ್ಯಾಯ ಪ್ಲ್ಯಾನ್​ ಮಾಡಿ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಇದೆ. ಆದರೆ, ಮರ ಕಡಿದು ಟೂರಿಸಂ ಮಾಡೋದಕ್ಕೆ ನಮ್ಮ ವಿರೋಧ ಇದೆ ಎಂದು ಬರೆದುಕೊಂಡಿದ್ದಾರೆ.

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂನಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದ್ದೆ. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕರಿಂದಲೂ ವಿರೋಧ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ

 ಕೋಟೆನಾಡಲ್ಲಿ ಅಭಿಮಾನಿಗಳೊಂದಿಗೆ ಕ್ರಿಕೆಟ್‌ ಆಟ ಆಡಿದ ನಟ ದುನಿಯಾ ವಿಜಯ್‌

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More